ಕರ್ನಾಟಕ ಬಜೆಟ್: ಮಹಿಳಾ ದಿನಾಚರಣೆಗೆ ಭರ್ಜರಿ ಗಿಫ್ಟ್‌ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಮಾ. 08: ವಿಶ್ವ ಮಹಿಳಾ ದಿನಾಚರಣೆಯ ದಿನದಂದೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಸ್ವ ಉದ್ಯೋಗಕ್ಕೆ ಒತ್ತು ನೀಡಿರುವಂತ ಅವರು, ಸ್ವಯಂ ಸಹಾಯಕ ಸಂಘಗಳೊಂದಿಗೆ ಸ್ವ ಉದ್ಯೋಗಕ್ಕಾಗಿ, ಮಹಿಳಾ ಉದ್ಯಮಿಗಳಿಗೆ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವುದಾಗಿ ಘೋಷಿಸಿದ್ದಾರೆ.

ಇಂದು ಬಜೆಟ್ ಮಂಡನೆಯ ಆರಂಭದಲ್ಲಿ ವಿಶ್ವ ಮಹಿಳಾ ದಿನಾಚರಣೆಯಂದೇ ರಾಜ್ಯದ ಮಹಿಳೆಯರ ಕುರಿತಂತೆ ಮೊದಲು ಘೋಷಣೆಗಳನ್ನು ಮಾಡಿದ ಸಿಎಂ ಯಡಿಯೂರಪ್ಪ ಅವರು, ಸ್ವ ಉದ್ಯೋಗದ ಮೂಲಕ ರಾಜ್ಯದಲ್ಲಿ, 60 ಸಾವಿರ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲಾಗುತ್ತದೆ. ಮಹಿಳಾ ಉದ್ಯಮಿಗಳಿಗೆ ಶೇ.4ರಷಅಟು ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ ಸಾಲ ನೀಡಲಾಗುತ್ತದೆ ಎಂದರು.

ಇನ್ನೂ ಕಳೆದ ವರ್ಷದ ಬಜೆಟ್ ನಲ್ಲಿ ಘೋಷಿಸಿದಂತೆ, ಬಿಎಂಟಿಸಿಯಲ್ಲಿ ಮಹಿಳೆಯರಿಗೆ ರಿಯಾಯಿಯ್ತಿ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗುತ್ತದೆ. ವನಿತಾ ಸಂಗಾತಿ ಹೆಸರಿನಲ್ಲಿ ಹೊಸ ಬಸ್ ಪಾಸ್ ಜಾರಿಗೆ ತರಲಾಗುತ್ತದೆ. ಈ ಮೂಲಕ ಬಿಎಂಟಿಸಿ ಬಸ್ ಪಾಸ್ ನಲ್ಲಿ ಮಹಿಳೆಯರಿಗೆ ರಿಯಾಯಿತಿ ನೀಡಲಾಗುತ್ತದೆ. ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ಕೂಡ ಒದಗಿಸಲಾಗುತ್ತದೆ ಎಂದರು.

Exit mobile version