ವಿದೇಶಿಗರ ಮೇಲೆ ಕಣ್ಣಿಡಲು ಪೊಲೀಸ್ ಇಲಾಖೆಗೆ ಗೃಹ ಸಚಿವರ ಸೂಚನೆ

ಬೆಂಗಳೂರು ಸೆ 07 : ವಿದೇಶಿಗರು ಅವರ ವೀಸಾ ಅವಧಿ ಮುಗಿದ ಮೇಲೆಯೂ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವವರ ಕಾರ್ಯ ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆ ರಾಜ್ಯದ ಪೊಲೀಸ್ ಇಲಾಖೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚಿಸಿದ್ದಾರೆ.

ರಾಜ್ಯದಲ್ಲಿ ಸಾಕಷ್ಟು ಮಂದಿ ವೀಸಾ ಅವಧಿ ಮುಗಿದ ಮೇಲೆಯೂ ಅಕ್ರಮವಾಗಿ ನೆಲೆಸಿದ್ದಾರೆ. ಹಾಗೂ ಇನ್ನೂ ಕೆಲವು ಮಂದಿ ಕಾನೂನು ವಿರೋಧಿ ಚಟುವಟಿಕೆಗಳನ್ನು, ದೇಶ ವಿದ್ರೋಹಿ ಕೃತ್ಯಗಳನ್ನು, ಸಮಾಜ ವಿರೋಧಿ ಕೆಲಸಗಳನ್ನು ಮಾಡುತ್ತಿದ್ದಾರೆ ಅವರ ಮೇಲೆ ನಿಗಾ ವಹಿಸಬೇಕು. ಹಾಗೆಯೇ ಅವರ ಬಗ್ಗೆ ಪ್ರತೀ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ದಾಖಲಾತಿಗಳ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ತಾಲಿಬಾನಿಗಳು ಈಗಾಗಲೇ ಅಫ್ಘಾನಿಸ್ಥಾನವನ್ನು ವಶಪಡಿಸಿಕೊಂಡಿರುವ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಬೇರೆ ಕಡೆಗೆ ವಲಸೆ ಹೋಗಿದ್ದಾರೆ ಹಾಗೆ ಅವರು ರಾಜ್ಯಕ್ಕೂ ಕೂಡ ಬರಬಹುದಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿದೇಶಿ‌ಗರ ಬಗ್ಗೆ ಎಚ್ಚರಿಕೆ ವಹಿಸಲಾಗಿದ್ದು,  ಕಾನೂನು ಭಂಗ, ಅಶಾಂತಿ ಸೃಷ್ಟಿ‌ಯಾಗದಂತೆ ಸೂಕ್ತ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

Exit mobile version