ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಪ್ರಕಟ

ಬೆಂಗಳೂರು ಸೆ 29 : ವಿಕೃತಕಾಮಿ ಹಾಗೂ ಸರಣಿ ಹಂತಕ ಉಮೇಶ್ ರೆಡ್ಡಿಗೆ ಕರ್ನಾಟಕ ಹೈ ಕೋರ್ಟ್ ಗಲ್ಲು ಶಿಕ್ಷೆಯ ತೀರ್ಪನ್ನು ಇಂದು ಪ್ರಕಟ ಮಾಡಿದೆ. ನ್ಯಾ. ಪ್ರದೀಪ್ ಸಿಂಗ್ ಯೆರೂರ್‌ ನೇತೃತ್ವದ ನ್ಯಾಯಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ.

ಬೆಂಗಳೂರಿನ ಜಯಶ್ರೀ ಅತ್ಯಾಚಾರ ಹಾಗೂ ಕೂಲಿ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗಲ್ಲು ಶಕ್ತಿಯನ್ನು ವಿಧಿಸಿತ್ತು. ಸೆಷನ್ ಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಇದಾದ ಬಳಿಕ ಕ್ಷಮಾದಾನ ಕೋರಿ ಉಮೇಶ್ ರೆಡ್ಡಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದನು.

2013ರಲ್ಲಿ ರಾಷ್ಟ್ರಪತಿ ಈ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಇದಾದ ಬಳಿಕ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಬದಲಾಯಿಸುವಂತೆ ಕೋರಿ ಉಮೇಶ್ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದ. ಇದೇ ವಿಚಾರವಾಗಿ ಇಂದು ಹೈಕೋರ್ಟ್‌ ತನ್ನ ನಿರ್ಧಾರ ಪ್ರಕಟಿಸಿದೆ.

ಆದರೆ ಉಮೇಶ್ ರೆಡ್ಡಿ ಕೋರಿದ್ದ ಸಮಯದ ಅವಕಾಶವನ್ನು ಕೋರ್ಟ್​ ಒಪ್ಪಿದ್ದು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲು 6 ವಾರ ಕಾಲಾವಕಾಶ ನೀಡಲಾಗಿದೆ. 6 ವಾರ ಉಮೇಶ್ ರೆಡ್ಡಿಯನ್ನು ಗಲ್ಲಿಗೇರಿಸುವಂತಿಲ್ಲ. ಗಲ್ಲು ಶಿಕ್ಷೆಯಾದ ಕಾರಣ ಈ ಕಾಲಾವಕಾಶ ನೀಡುತ್ತಿದ್ದೇವೆ ಎಂದು ನ್ಯಾ. ಅರವಿಂದ್ ಕುಮಾರ್, ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಸ್ಪಷ್ಟನೆ ನೀಡಿದ್ದಾರೆ.

Exit mobile version