- 47 ಸಾವಿರ ಕೋಟಿ ಶಿಕ್ಷಣಕ್ಕೆ, ಮಹಿಳಾ ಕಲ್ಯಾಣಕ್ಕೂ (karnataka huge budget 2026 -27) ಭರ್ಜರಿ ಅನುದಾನ
- ಮಹಿಳಾ ಸಬಲೀಕರಣ, ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಸರ್ಕಾರದ ವಿಶೇಷ ಒತ್ತು
- ಇಂಧನ, ನೀರಾವರಿ, ಸಾರಿಗೆ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಮಹತ್ವದ ಅನುದಾನ ಘೋಷಣೆ
Bengaluru: ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಬಹುನಿರೀಕ್ಷಿತ (karnataka huge budget 2026-27) ರಾಜ್ಯ ಬಜೆಟ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.
ಈ ಬಾರಿ ಬಜೆಟ್‌ನ ಒಟ್ಟು ಗಾತ್ರವು 4,48,004 ಕೋಟಿ ರೂಪಾಯಿಗಳಿಗೆ ತಲುಪಿದ್ದು, ಇದು ರಾಜ್ಯದ ಇತಿಹಾಸದಲ್ಲೇ ದೊಡ್ಡ ಬಜೆಟ್‌ಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.

ಕಳೆದ 2025-26ನೇ ಸಾಲಿನ ಪರಿಷ್ಕೃತ ಅಂದಾಜು 3,95,307 ಕೋಟಿ ರೂಪಾಯಿಗಳಾಗಿದ್ದು, ಈ ಬಾರಿ ಬಜೆಟ್‌ನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ರಾಜ್ಯದ ಸಮಗ್ರ
ಅಭಿವೃದ್ಧಿ, ಸಾಮಾಜಿಕ ಕಲ್ಯಾಣ ಮತ್ತು ಮೂಲಸೌಕರ್ಯ ವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಲಯಗಳಿಗೆ ಹೆಚ್ಚಿನ ಅನುದಾನವನ್ನು ಸರ್ಕಾರ ಮೀಸಲಿಟ್ಟಿದೆ.
ಈ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅತ್ಯಧಿಕ ಆದ್ಯತೆ ನೀಡಲಾಗಿದೆ. ಶಿಕ್ಷಣ ಇಲಾಖೆಗೆ 47,224 ಕೋಟಿ ರೂಪಾಯಿಗಳಷ್ಟು ಅನುದಾನವನ್ನು ನೀಡಲಾಗಿದ್ದು, ಇದು ಒಟ್ಟು ಅಭಿವೃದ್ಧಿ ವೆಚ್ಚದಲ್ಲಿ ಸುಮಾರು 10 ಶೇಕಡಾ ಪಾಲನ್ನು ಹೊಂದಿದೆ.
ಗುಣಮಟ್ಟದ ಶಿಕ್ಷಣ, ಶಾಲಾ ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳಿಗೆ ಹೊಸ ಯೋಜನೆಗಳನ್ನು ಜಾರಿಗೊಳಿಸಲು ಈ ಅನುದಾನವನ್ನು ಬಳಸಲಾಗುತ್ತದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂಪಾಯಿಗಳ ಅನುದಾನವನ್ನು (karnataka huge budget 2026-27)ನೀಡಲಾಗಿದೆ.
ಗ್ಯಾರಂಟಿ (Guarantee) ಯೋಜನೆಗಳು ಹಾಗೂ ಮಹಿಳಾ ಸಬಲೀಕರಣದ ದೃಷ್ಟಿಯಿಂದ ಈ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.
ಇಂಧನ ಕ್ಷೇತ್ರಕ್ಕೂ ಸರ್ಕಾರ ಮಹತ್ವದ ಅನುದಾನ ನೀಡಿದ್ದು, 29,947 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್
ರಾಜ್ (Panchayth Raj) ಇಲಾಖೆಗೆ 26,559 ಕೋಟಿ ರೂಪಾಯಿಗಳು ಹಾಗೂ ಲೋಕೋಪಯೋಗಿ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದೆ.
ನೀರಾವರಿ ಇಲಾಖೆಗೆ 22,436 ಕೋಟಿ ರೂಪಾಯಿಗಳು ಮತ್ತು ನಗರಾಭಿವೃದ್ಧಿ ಹಾಗೂ ವಸತಿ ಇಲಾಖೆಗೆ 22,203 ಕೋಟಿ ರೂಪಾಯಿಗಳಷ್ಟು ಅನುದಾನವನ್ನು ಸರ್ಕಾರ ಒದಗಿಸಿದೆ.
ಇದರಿಂದ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ.
ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದೆ.
ಸಮಾಜ ಕಲ್ಯಾಣಕ್ಕೆ 18,612 ಕೋಟಿ ರೂಪಾಯಿಗಳು ಹಾಗೂ ಕಂದಾಯ ಇಲಾಖೆಗೆ 19,843 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದೆ.
ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 8,373 ಕೋಟಿ ರೂಪಾಯಿಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 7,942 ಕೋಟಿ ರೂಪಾಯಿಗಳ
ಅನುದಾನವನ್ನು ಸರ್ಕಾರ ಮೀಸಲಿಟ್ಟಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ 4,084 ಕೋಟಿ ರೂಪಾಯಿಗಳ ಅನುದಾನವನ್ನು ನೀಡಲಾಗಿದೆ.
ಇತರ ವಿವಿಧ ವಲಯಗಳಿಗೆ ಒಟ್ಟಾರೆ 1,72,757 ಕೋಟಿ ರೂಪಾಯಿಗಳಷ್ಟು ಅನುದಾನವನ್ನು ಹಂಚಿಕೆ ಮಾಡಲಾಗಿದೆ.
ಬಜೆಟ್‌ನ ಬಂಡವಾಳ ಲೆಕ್ಕಾಚಾರದ ಪ್ರಕಾರ, ಒಟ್ಟು ಬಂಡವಾಳ ಜಮೆ 1,32,190 ಕೋಟಿ ರೂಪಾಯಿಗಳಾಗಿದ್ದು, ಇದರಲ್ಲಿಯೇ ಬಹಿರಂಗ ಮಾರುಕಟ್ಟೆ ಸಾಲದ ಮೂಲಕ 1,22,340 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲು ಸರ್ಕಾರ ಯೋಜಿಸಿದೆ.
ಕೇಂದ್ರ ಸರ್ಕಾರದಿಂದ 6,810 ಕೋಟಿ ರೂಪಾಯಿಗಳ ಸಾಲವನ್ನು ನಿರೀಕ್ಷಿಸಲಾಗಿದೆ.
ಒಟ್ಟು ವೆಚ್ಚವು 1,09,998 ಕೋಟಿ ರೂಪಾಯಿಗಳಾಗಿದ್ದು, ಮೂಲಸೌಕರ್ಯ ಅಭಿವೃದ್ಧಿ ಮತ್ತು ಇತರ ಬಂಡವಾಳ ವೆಚ್ಚಗಳಿಗಾಗಿ 71,924 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
ಮಾರುಕಟ್ಟೆ ಸಾಲಗಳ ಮರುಪಾವತಿಗೆ 29,007 ಕೋಟಿ ರೂಪಾಯಿಗಳು ಹಾಗೂ ಕೇಂದ್ರ ಸರ್ಕಾರದ ಸಾಲದ ಮರುಪಾವತಿಗೆ 2,700 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
ಈ ಮೂಲಕ ಕೃಷಿ, ಶಿಕ್ಷಣ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿರುವ ಬಜೆಟ್ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನು ಓದಿ : https://vijayatimes.com/social-media-ban-for-children/