ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್ಲೈನ್ಸ್ ಬಿಡುಗಡೆ

ಬೆಂಗಳೂರು ಅ 5 : ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ. ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುವುದು. ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಇತರೆ ಇಲಾಖೆ ಮುಖ್ಯಸ್ಥರುಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಅಂತ ತಿಳಿಸಿದೆ.

ಮೈಸೂರು ದಸರಾ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ
ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ನಡೆಸಬೇಕು. ಜನರು ಮಾಸ್ಕ್, ಸ್ಯಾನಿಟೈಸ್​ನ ಕಡ್ಡಾಯವಾಗಿ ಬಳಸಬೇಕು. ವರ್ಚುವಲ್ ಮೂಲಕ ಜಂಬೂಸವಾರಿ ವೀಕ್ಷಣೆ ಮಾಡಬೇಕು. ಅ.7ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 100 ಜನರಿಗೆ ಅನುಮತಿ ನೀಡಲಾಗಿದೆ.

8 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 500 ಜನರಿಗೆ ಅವಕಾಶ ನೀಡಲಾಗಿದೆ. ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ರಾಜ್ಯ ಸರ್ಕಾರ ಅವಕಾಶ ನೀಡಿ ಮಾರ್ಗಸೂಚಿ ಹೊರಡಿಸಿದೆ. ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಮಾರ್ಗಸೂಚಿಗಳು

  1. ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಸೋಂಕು ಹರಡುವುದನ್ನ ತಡೆಗಟ್ಟಲು ಈ ವರ್ಷದ ಹಬ್ಬ ಆಚರಣೆಯನ್ನು ಮೈಸೂರಿನಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ವೀಕ್ಷಿಸಲು ಅವಕಾಶ ಮಾಡಿಕೊಡಬೇಕು.
  2.  ಅರಮನೆಯ ಆವರಣದಲ್ಲಿ ನಡೆಸಲಾಗುವ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್​ ಬಳಕೆ ಮತ್ತು ಸ್ಯಾನಿಟೈಸರ್​ಗಳನ್ನ ಕಡ್ಡಾಯವಾಗಿ ಬಳಸಬೇಕು
  3. ವೀಕ್ಷಣೆಗೆ 500 ಮಂದಿ ಮೀರದಂತೆ ನೋಡಿಕೊಳ್ಳಬೇಕು

4) ಜಗತ್ಪ್ರಸಿದ್ಧ ಮೈಸೂರು ಹಬ್ಬದ ಆಚರಣೆಗೆ ವ್ಯಕ್ತಿಗಳ ಪಾಲ್ಗೊಳ್ಳುವಿಕೆಯ ಸಂಖ್ಯೆಯನ್ನ ಸೀಮಿತಗೊಳಿಸಲಾಗಿದೆ.

5) ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆಗೆ ಕೇವಲ 100 ಮಂದಿಗೆ ಮಾತ್ರ ಅವಕಾಶ

6) ಪೊಲೀಸ್, ಕಲಾವಿದರು, ಮಾದ್ಯಮದವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ

7) ಸಂಜೆಯ ಸಾಂಸ್ಕ್ರತಿಕ ಕಾರ್ಯಕ್ರಮಗಳು ಎರಡು ಘಂಟೆ ಅವಧಿಯೊಳಗೆ ಮುಗಿಯಬೇಕು

8)ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ರಾತ್ರಿ 7 ರಿಂದ 9 ರವರೆಗೆ ಅವಕಾಶ

9) ಐತಿಹಾಸಿಕ ಜಂಬೂ ಸವಾರಿ ದಿನ 500 ಮಂದಿಗೆ ಅವಕಾಶ

Exit mobile version