vijaya times advertisements
Visit Channel

ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹ : ಸಿಎಂ ಬೊಮ್ಮಾಯಿ

Bommai

Bengaluru :  ಕರ್ನಾಟಕದ ಗಡಿ(karnataka-maharashtra-border-Issue) ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ.

ಮಹಾರಾಷ್ಟ್ರದಲ್ಲಿರುವ(karnataka-maharashtra-border-Issue) ಕನ್ನಡ ಭಾಷಿಕ ಪ್ರದೇಶಗಳಾದ‌ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Karnataka Maharashtra

ಗಡಿ ವಿಚಾರವಾಗಿ ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಮಹಾರಾಷ್ಟ್ರ ಸರ್ಕಾರ 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್ ನಲ್ಲಿ(Supreme Court) ದಾವೆ ಹೂಡಿದೆ.

ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ.

https://youtu.be/9ouiEo3FiBs DIRTY FOOD SECRET | ನೋ….ನೋ…..ನೂಡಲ್ಸ್!

ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ.‌ ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು,

ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

https://fb.watch/gZN-a7feVI/ DIRTY FOOD SECRET | ನೋ….ನೋ…..ನೂಡಲ್ಸ್!

ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಗಳಿಗೆ ಅನುದಾನ ನೀಡಲಾಗುವುದು. ಆದರೆ ರಾಜ್ಯದ ಗಡಿ ವಿಚಾರದಲ್ಲೂ ಕಾಂಗ್ರೆಸ್(Congress) ರಾಜಕಾರಣ ಮಾಡುವ ಮೂಲಕ ಸಣ್ಣತನ ತೋರಿದೆ.

ನಾಡು, ನುಡಿ, ಭಾಷೆ ವಿಚಾರದಲ್ಲಾದರೂ ಕಾಂಗ್ರೆಸ್ ರಾಜ್ಯದ ಪರವಾಗಿರಲಿ, ಸರ್ಕಾರದ ನಿಲುವಿಗೆ ಸಹಕರಿಸಲಿ.

ಗಡಿ ರಕ್ಷಣೆ ವಿಚಾರದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ವಿಧಾನಸಭೆ, ವಿಧಾನ ಪರಿಷತ್ ಪ್ರತಿಪಕ್ಷಗಳ ನಾಯಕರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಅವರು ನಾನು ಪತ್ರ ಬರೆದಿರುವುದನ್ನು ಮೆಚ್ಚಿಕೊಂಡಿದ್ದನ್ನು  ಕಾಂಗ್ರೆಸ್‌ ಮರೆತಿದೆಯಾ?

Politics

ಈಗಾಗಲೇ ರಾಜ್ಯದ ಕಾನೂನು ತಂಡದೊಂದಿಗೆ ಮೂರ್ನಾಲ್ಕು ಸಭೆಗಳನ್ನು ನಡೆಸಿ, ರಾಜ್ಯದ ಒಂದಿಂಚು ಜಾಗ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಸಮರ್ಥವಾಗಿ ಹೇಳಿದ್ದೇನೆ.

ರಾಜ್ಯದ ನೆಲ, ಜಲ, ಭಾಷೆ ಗಡಿ ವಿಚಾರದಲ್ಲಿಯೂ ಕಾಂಗ್ರೆಸ್‌ ಸಣ್ಣತನ ತೋರಿಸುತ್ತಿರುವುದು‌ ದುರದೃಷ್ಟಕರ.

ಇದನ್ನೂ ಓದಿ : https://vijayatimes.com/special-grants-to-kannada-schools/

ರಾಜ್ಯದ ಗಡಿ ರಕ್ಷಣೆ ಕುರಿತಂತೆ ರಾಜ್ಯದ ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಲು ಮುಕುಲ್ ರೋಹಟಗಿ, ಅನಿಲ್ ದಿವಾನ್, ಉದಯಹೊಳ್ಳ ಅವರನ್ನೊಳಗೊಂಡ ಸಮರ್ಥ ನ್ಯಾಯವಾದಿಗಳ ತಂಡ ರಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ.

  • ಮಹೇಶ್.ಪಿ.ಎಚ್

Latest News

ಮನರಂಜನೆ

ನೆಟ್ ಫ್ಲಿಕ್ಸ್ ನಲ್ಲಿ ಕಾಂತಾರ ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಾಗಲಿದೆ : ರಿಷಬ್ ಶೆಟ್ಟಿ

ಕಾಂತಾರ ಓಟಿಟಿಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ವೇಳೆ ಕಾಂತಾರ ಚಿತ್ರದ ಅಸಲಿ ವರಾಹ ರೂಪಂ ಹಾಡು ತೆಗೆದು ಹಾಕಲಾಗಿತ್ತು.

ಪ್ರಮುಖ ಸುದ್ದಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಜಯದ ಹಾದಿಯಲ್ಲಿ ಆಪ್

ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲೋ ಪ್ರಕಾರ ಬಿಜೆಪಿ 69 ರಿಂದ 91 ವಾರ್ಡ್ ಗಳಲ್ಲಿ ಗೆಲುವು ಸಾಧ್ಯತೆ ಹಾಗೂ ಕಾಂಗ್ರೆಸ್ 3 ರಿಂದ 7 ವಾರ್ಡ್ ಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ತಿಳಿಸಿದೆ

ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಕಲ್ಲು ತೂರಾಟ ; ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಶಿವಸೇನಾ!

ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ನಡುವಿನ ವಾಗ್ಸಮರ ಗಡಿ ಭಾಗದಲ್ಲಿ ಘರ್ಷಣಗೆ ಪ್ರಮುಖವಾಗಿದೆ. ಎಂ.ಇ.ಎಸ್ (M.E.S) ಪುಂಡರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ ರಾಜ್ಯದ ಬಸ್‌ಗಳನ್ನು ಅಡಗಟ್ಟಿ ಮಸಿ ಹಚ್ಚಿ ಆಕ್ರೋಶ ಹೊರಹಾಕಿದ್ದರು