Karnataka Politics; ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು; ಸಿಎಂ ಸೂಚನೆ

ಬೆಂಗಳೂರು, ಜೂ. 7: ಕೋವಿಡ್​ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯ ರಾಜಕೀಯ ಸನ್ನಿವೇಶಗಳು ಗರಿಗೆದ್ದರಿದ್ದು, ಸಿಎಂ ಬಿಎಸ್​ ಯಡಿಯೂರಪ್ಪ ಕೂಡ ಹೈ ಕಮಾಂಡ್​ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ದ ಎಂದಿದ್ದರು. ಇದರ ಬೆನ್ನಲ್ಲೇ ಸಿಎಂ ಬಿಎಸ್​ವೈ ಪರ ವಿರೋಧ ಗುಂಪುಗಳು ಹೈಕಮಾಂಡ್​ಗೆ ಸುದ್ದಿ ಶಾಸಕರ ಅಭಿಪ್ರಾಯ ಸಹಿ ಸಂಗ್ರಹ ಮಾಡಿ ನೀಡಲು ಮುಂದಾಗಿವೆ. ಈಗಾಗಲೇ ಸಿಎಂ ಬಿಎಸ್​ ಯಡಿಯೂರಪ್ಪ ಪರ ಬ್ಯಾಟಿಂಗ್​ ನಡೆಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಬಿಎಸ್​ ಯಡಿಯೂರಪ್ಪ ಪರ ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈ ಎಲ್ಲಾ ಘಟನೆಗಳ ಕುರಿತು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಬಿಎಸ್​ ಯಡಿಯೂರಪ್ಪ ಅವರ ಪರ 56 ಶಾಸಕರು ಸಹಿ ಮಾಡಿದ್ದರೆ ಎಂದು ಅವರು ಹೇಳುತ್ತಿದ್ದಾರೆ. ಆ ಶಾಸಕರ ಪಟ್ಟಿಯನ್ನು ಬಹಿರಂಗಪಡಿಸಲಿ ಎಂದು ಸವಾಲ್​ ಹಾಕಿದ್ದಾರೆ.

ಇದೆಲ್ಲದರ ನಡುವೆ ಸಿಎಂ ಬಿ. ಎಸ್. ಯಡಿಯೂರಪ್ಪ ತಮ್ಮ ಟ್ವಿಟ್ಟರ್‌ ಮೂಲಕ ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದು ಸೂಚಿಸಿದ್ದಾರೆ.

https://twitter.com/BSYBJP/status/1401850882011000832?s=20
Exit mobile version