vijaya times advertisements
Visit Channel

ನಿಲ್ಲದ ವರುಣನ ಅಬ್ಬರ: ಹಲವೆಡೆ ಪ್ರವಾಹಭೀತಿ, ಜನಜೀವನ ತತ್ತರ

ndrf

ರಾಜ್ಯದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಬಹುತೇತ ಜಲಾಶಯಗಳು ಅಪಾಯದ ಮಟ್ಟ ತಲುಪಿವೆ. ಪ್ರಮುಖವಾಗಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಕನ್ನಡ, ಮಡಿಕೇರಿ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರಕ್ಕೆ ತತ್ತರಿಸಿ ಹೋಗಿವೆ. ಈ ಜಿಲ್ಲೆಗಳ ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಭಾರೀ ಮಳೆಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಹದಗೆಟ್ಟಿದೆ. ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಜನರನ್ನು ಆತಂಕಕ್ಕೆ ತಳ್ಳಿದೆ. ಮಡಿಕೇರಿ ಸಮೀಪದ ಕಡಗದಾಳುವಿನಲ್ಲಿ ಭೂಕುಸಿತ ಉಂಟಾಗಿದ್ದು, ಕಡಗದಾಳು ಬೊಟ್ಲಪ್ಪ ದೇವಾಲಯಕ್ಕೆ ತೆರಳುವ ರಸ್ತೆ ಕುಸಿತವಾಗಿದ್ದು, ಗ್ರಾಮದಲ್ಲಿ ಸಿಕ್ಕಿಹಾಕಿಕೊಂಡವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಬೊಟ್ಲಪ್ಪ ಯುವಕ ಸಂಘದಿಂದ ರಕ್ಷಣಾ ಕಾರ್ಯಪ್ರವೃತ್ತವಾಗಿದೆ. ಇನ್ನೂ ಜಿಲ್ಲೆಯ ಬಿಳಿಗೇರಿ-ಹಾಕತ್ತೂರು ರಸ್ತೆಯ ಸೇತುವೆ ಕುಸಿತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಸುತ್ತಮುತ್ತಲಿನ ಜನರಲ್ಲಿ ಆತಂಕ ತಂದೊಡ್ಡಿದೆ. ಅಲ್ಲದೇ ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಗೂ ಕಂಟಕ ಎದುರಾಗಿದ್ದು, ಕುಶಾಲನಗರ ಬಳಿ ಹೆದ್ದಾರಿಯಲ್ಲಿ ಕಾವೇರಿ ನದಿ ನೀರಿನ ಪ್ರವಾಹ ಉಂಟಾಗಿದೆ. ಈ ಭಾಗದಲ್ಲಿ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಹೆಚ್ಚಳದಿಂದ ಜನರ ಆತಂಕ ಉಲ್ಭಣಗೊಂಡಿದೆ. ಇನ್ನೂ ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ತ್ರಿವೇಣಿ ಸಂಗಮದಲ್ಲಿ ಪ್ರವಾಹ ಹೆಚ್ಚುತ್ತಿದೆ. ಭಗಂಡೇಶ್ವರ ದೇವಾಲಯ ಪ್ರವೇಶಿಸಿರುವ ಕಾವೇರಿದೇವಾಲಯ ಒಳಭಾಗದಲ್ಲಿ ಪ್ರವಾಹ ನೀರು ನುಗ್ಗಿದ್ದು, ದೇವಸ್ಥಾನ ಜಲಾವೃತಗೊಂಡಿದೆ. ದಕ್ಷಿಣ ಕೊಡಗಿನಲ್ಲೂ ವರುಣನ ಅಬ್ಬರ ಜೋರಾಗಿದ್ದು, ಗೋಣಿಕೊಪ್ಪ ನಗರದ 3ನೇ ವಾರ್ಡ್ ಮನೆಗಳಿಗೆ ನೀರು ನುಗ್ಗಿದೆ. ನೀರುಕೀರೆಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಜಲಾವೃತವಾಗಿದ್ದಯ, ಕೀರೆಹೊಳೆ ಅಪಾಯದ  ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ಕೊಡಗಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದ ಆದಿವಾಸಿ ಜನರು ತಮ್ಮ ಬದುಕನ್ನು ಕಳೆದುಕೊಂಡಿದ್ದಾರೆ, 5 ದಿನಗಳು ಆದರೂ ಜಿಲ್ಲಾ ಆಡಳಿತ ಮತ್ತು ಗ್ರಾಮ ಪಂಚಾಯತಿ ಇವರ ನೆರವಿಗೆ ಬಂದಿಲ್ಲ ಎನ್ನಲಾಗಿದೆ. ಮಳೆಯ ಅಬ್ಬರಕ್ಕೆ ಕೊಡಗಿನ ಜಿಲ್ಲಾಧಿಕಾರಿ ಕಚೇರಿಯೂ ಕುಸಿಯುವ ಭೀತಿ ಉಂಟಾಗಿದ್ದು, ಕಚೇರಿ ಮುಂಭಾಗದಲ್ಲೇ ಮಣ್ಣು ಕುಸಿಯುತ್ತಿದ್ದು, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. 


ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಪಶ್ಚಿಮಘಟ್ಟ ಅಂಚಿನ ಪ್ರದೇಶಗಳಾದ ಸುಬ್ರಹ್ಮಣ್ಯ, ದಿಡುಪೆ, ಮಲವಂತಿಕೆ, ಚಾರ್ಮಾಡಿ, ಬಿಸಿಲೆ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಬಿಸಿಲೆ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಬಿಸಿಲೆ ಘಾಟ್ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ- ಬಿಸಿಲೆ ಘಾಟ್ ಸಂಪರ್ಕಿಸುವ ರಸ್ತೆಯಲ್ಲಿ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ.


ಸಕಲೇಶಪುರ, ಶಿರಾಡಿ, ಕುಮಾರ ಪರ್ವತ ಭಾಗದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸತತ ಐದನೇ ದಿನವೂ ಮುಳುಗಡೆಯಾಗಿದೆ. ಸ್ನಾನಘಟ್ಟ ಪರಿಸರದಲ್ಲಿ ನೀರಿ‌ನ ಹರಿವು ಹೆಚ್ಚಾಗುತ್ತಿದ್ದು, ಸ್ನಾನಘಟ್ಟದಲ್ಲಿರುವ ಭಕ್ತರ ಸ್ನಾನಗೃಹ, ಶೌಚಾಲಯ, ಲಗೇಜ್ ಕೊಠಡಿಗಳು ಸಂಪೂರ್ಣ ಜಲಾವೃತವಾಗಿದೆ. ಈ ಭಾಗದಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುತ್ತಿದ್ದು, ಕುಮಾರಧಾರಾ ನದಿ ನೀರು ರಸ್ತೆಗೆ ಬರುವ ಸಾಧ್ಯತೆಯೂ ಹೆಚ್ಚಾಗಿದೆ. ಇದರಿಂದ ಮಂಜೇಶ್ವರ- ಸುಬ್ರಹ್ಮಣ್ಯ ಅಂತರ್ ರಾಜ್ಯ ಹೆದ್ದಾರಿ ಬಂದ್ ಆಗುವ ಲಕ್ಷಣ ಗೋಚರಿಸುತ್ತಿದೆ.


ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಬಂಟ್ವಾಳ, ಪಾಣೆಮಂಗಳೂರು, ಜಪ್ಪಿನ ಮೊಗರು ಮೊದಲಾದ ಕಡೆಗಳಲ್ಲಿ ನೀರು ನುಗ್ಗುವ ಆತಂಕವೂ ಎದುರಾಗಿದೆ. ನದಿ ಪಾತ್ರದ ಜನರು ಎಚ್ಚರಿಕೆಯಲ್ಲಿರುವಂತೆ ಸೂಚಿಸಲಾಗಿದೆ. ಭಾರೀ ಮಳೆಯ ಕಾರಣ ಕಡಲು ತೀರಗಳಲ್ಲಿ ಅಲೆಗಳ ಆರ್ಭಟ ಹೆಚ್ಚಾಗುತ್ತಿದೆ. ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ಕಡಲ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ. ಉಚ್ಚಿಲ- ಬಟ್ಟಪ್ಪಾಡಿ ಸಂಪರ್ಕಿಸುವ ರಸ್ತೆ ಬಹುತೇಕ ಕುಸಿದು‌ ಬಿದ್ದಿದೆ.

Latest News

ರಾಜ್ಯ

POCSO ಪ್ರಕರಣದಲ್ಲಿ ಅಮಾಯಕನನ್ನು ಬಂಧಿಸಿದ ಪೊಲೀಸರಿಗೆ 5 ಲಕ್ಷ ದಂಡ ವಿಧಿಸಿದ ಮಂಗಳೂರು ಜಿಲ್ಲಾ ನ್ಯಾಯಾಲಯ!

ಇದೇ ವೇಳೆ ಇಬ್ಬರೂ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ರಾಜ್ಯ

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ 15 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ

ಬೆಂಗಳೂರು ಮತ್ತು ಮೈಸೂರು ವಲಯದಲ್ಲಿ(Mysuru Zone) ಆನೆ ಕಾರಿಡಾರ್ ಸುತ್ತಲೂ ಚಿರತೆಗಳಿವೆ. ಚಿರತೆ ದಾಳಿ ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದೆ ಮತ್ತು ನಿರ್ದಿಷ್ಟ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ದೇಶ-ವಿದೇಶ

ಹೃದಯಾಘಾತದಿಂದ ಬಸ್ ಚಾಲಕ ಸಾವು ; ಅನ್ಯ ವಾಹನಗಳಿಗೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು!

ಬಸ್ ಚಾಲಕ ಹಠಾತ್ ಸಾವನ್ನಪ್ಪಿದ ಬೆನ್ನಲ್ಲೇ ಬಸ್ ನಿಯಂತ್ರಣ ಕಳೆದುಕೊಂಡು ಇತರ ವಾಹನಗಳಿಗೆ ಡಿಕ್ಕಿ ಹೊಡೆಯುವುದನ್ನು ದೃಶ್ಯದಲ್ಲಿ ಕಾಣಬಹುದು.

ಮನರಂಜನೆ

ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಬ್ಯಾನ್? ; ಅಷ್ಟಕ್ಕೂ ಅಸಲಿ ಕಾರಣವೇನು?

ತೆಲುಗು ಸಿನಿಮಾದ ಖ್ಯಾತ ಸಿನಿಮಾ ಪತ್ರಕರ್ತ,ಬರಹಗಾರ,ಸಿನಿಮಾ ವಿಮರ್ಶಕ ತೋಟಾ ಪ್ರಸಾದ್ (Thota Prasad) ರಶ್ಮಿಕ ಅವರ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿದ್ದಾರೆ.