download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ರಾಜ್ಯದಲ್ಲಿ ಮತಾಂತರ ತಡೆ ಕಾಯ್ದೆ ಜಾರಿಗೆ ತರಲು ಚಿಂತನೆ – ಆರಗ ಜ್ಞಾನೇಂದ್ರ

ನರ ಮುಗ್ಧತೆ ಅಥವಾ ಇನ್ನಿತರ ಸನ್ನಿವೇಶಗಳನ್ನು ಉಪಯೋಗಿಸಿಕೊಂಡು ಯಾವುದೇ ಸಂಘಟನೆ ಅಥವಾ ಸಂಸ್ಥೆಗಳು ಮತಾಂತರ ಮಾಡುವುದರಿಂದ, ಸಮಾಜದಲ್ಲಿ ಶಾಂತಿ ಕದಡುವ ಸಂಭವವೂ ಇದೆ

ಬೆಂಗಳೂರು ಸೆ 22 : ರಾಜ್ಯದಲ್ಲಿ ಮತಾಂತರ ತಡೆ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್‌ ಮಾತನಾಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 20 ಸಾವಿರ ಮಂದಿ ಮತಾಂತರ ಆಗಿದ್ದಾರೆ. ನನ್ನ ತಾಯಿ ಸಹ ಮತಾಂತರಗೊಂಡಿದ್ದಾರೆ. ಕುಂಕುಮ ಇಡಬಾರದು ಹಾಗೂ ದೇವರ ಫೋಟೋ ಇಡಬಾರದು ಎಂದು ಅವರ ಬ್ರೈನ್‌ ವಾಶ್‌ ಮಾಡಲಾಗಿದೆ. ಇದು ಸರಿಯಲ್ಲ ಎಂದು ಕಿವಿಮಾತು ಹೇಳಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಾಯಿ ಬೆದರಿಕೆ ಹಾಕುತ್ತಿದ್ದಾರೆ. ಈ ಬೆಳವಣಿಗೆಯಿಂದ ಇಡೀ ಕುಟುಂಬ ಮುಜುಗರ ಅನುಭವಿಸುವಂತಾಗಿದೆ ಎಂದರು. ಇವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ. ಆಮಿಷವೊಡ್ಡಿ ಮತಾಂತರ ಮಾಡುವುದು ಕಾನೂನಿಗೆ ವಿರುದ್ಧವಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಜನರ ಮುಗ್ಧತೆ ಅಥವಾ ಇನ್ನಿತರ ಸನ್ನಿವೇಶಗಳನ್ನು ಉಪಯೋಗಿಸಿಕೊಂಡು ಯಾವುದೇ ಸಂಘಟನೆ ಅಥವಾ ಸಂಸ್ಥೆಗಳು ಮತಾಂತರ ಮಾಡುವುದರಿಂದ, ಸಮಾಜದಲ್ಲಿ ಶಾಂತಿ ಕದಡುವ ಸಂಭವವೂ ಇದೆ. ಆಮಿಷ ಒಡ್ಡಿ ಜನರನ್ನು ಮತಾಂತರಗೊಳಿಸುವ ಪ್ರಕ್ರಿಯೆಯಲ್ಲಿ ಒಂದು ವ್ಯವಸ್ಥಿತ ಜಾಲವೇ ಇದ್ದು  ಅದನ್ನು ಯಾವರೀತಿ ತಡೆಗಟ್ಟಲು ಸಾಧ್ಯ ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕಾನೂನನ್ನು ತರಲಾಗುವುದು ಎಂದು ತಿಳಿಸಿದರು.ಈ ವೇಳೆ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ‘ಮತಾಂತರದ ಪಿಡುಗು ರಾಜ್ಯ ಮಾತ್ರವಲ್ಲ ಇಡೀ ದೇಶದಲ್ಲಿ ವ್ಯಾಪಿಸಿದೆ. ಬೇರೆ ಬೇರೆ ರಾಜ್ಯಗಳು ಮತಾಂತರ ನಿಷೇಧಕ್ಕೆ ಕಠಿಣ ಕಾಯ್ದೆಗಳನ್ನು ತಂದಿವೆ. ನಮ್ಮಲ್ಲೂ ಅಂತಹ ಕಾಯ್ದೆಗಳನ್ನು ಜಾರಿಗೆ ತರಬೇಕು’ ಎಂದು ಸಲಹೆ ನೀಡಿದರು.

ಆಮಿಷ ನೀಡಿ ಜನರನ್ನು ಮತಾಂತರಗೊಳಿಸುವ ಪ್ರಕ್ರಿಯೆಯಲ್ಲಿ ಒಂದು ವ್ಯವಸ್ಥಿತ ಜಾಲವೇ ಇದ್ದು ಅದನ್ನು ಯಾವ ರೀತಿ ತಡೆಗಟ್ಟಲು ಸಾಧ್ಯ ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕಾನೂನನ್ನು ತರಲಾಗುವುದು. ಶಾಂತಿ ಭಂಗಕ್ಕೆ ಕಾರಣವಾಗುವ ಯಾವುದೇ ಸಂಘಟನೆಗಳ ಅಥವಾ ವ್ಯಕ್ತಿಗಳ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರಗ ಜ್ಞಾನೇಂದ್ರ ತಿಳಿಸಿದರು

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article