- ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಬಾಲಕಿಯರದೇ ಮೇಲುಗೈ (Karnataka Second PU results announced)
- ಶೇ. 93.90 ಪಡೆದ ಉಡುಪಿ ಜಿಲ್ಲೆ ಪ್ರಥಮ
- ಶೇ.73. 45 ವಿದ್ಯಾರ್ಥಿಗಳು ಉತ್ತೀರ್ಣ
Bengaluru: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ (Second PUC result) ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (government pre-graduate colleges) ಶೇ 57.11ರಷ್ಟು ಫಲಿತಾಂಶ ಬಂದಿದೆ.
ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 62.69ರಷ್ಟು, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 82.66ರಷ್ಟು, ಬಿಬಿಎಂಪಿ (BBMP) ವ್ಯಾಪ್ತಿಯ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 68.88ರಷ್ಟು,ವಿಭಜಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 78.58ರಷ್ಟು ಹಾಗೂ ವಸತಿ ಶಾಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 86.18ರಷ್ಟು ಫಲಿತಾಂಶ ಪ್ರಕಟವಾಗಿದೆ.
ಈಗಾಗಲೇ ಪ್ರಕಟಗೊಂಡಿರುವ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90 ಶೇಕಡಾ ಫಲಿತಾಂಶ ಪಡೆದು ಉಡುಪಿ (Udupi) ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ (Dakshina Kannada) ಜಿಲ್ಲೆ 93.57 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಸೆಕೆಂಡ್ ಆಗಿದೆ. ಯಾದಗಿರಿ ಜಿಲ್ಲೆ 48.45 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನ ಪಡೆದುಕೊಂಡಿದೆ.

ಟಾಪ್ 10 ಸ್ಥಾನಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ದಕ್ಷಿಣ, ಕೊಡಗು, ಬೆಂಗಳೂರು ಉತ್ತರ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ ಕ್ರಮವಾಗಿ ಪಡೆದುಕೊಂಡಿದೆ.
ಪ್ರತಿವರ್ಷದಂತೆ ಈ ಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಲಕಿಯರೇ (Girls) ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 3,45,694 ಬಾಲಕಿಯರು ಹಾಜರಾಗಿದ್ದರು. ಈ ಪೈಕಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇಕಡಾ 77.88ರಷ್ಟು ಬಾಲಕಿಯರು ಉತ್ತೀರ್ಣರಾದಂತಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದರು. ಈ ಪೈಕಿ 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ (Science department) ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ. ಈಕೆ ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.
ಕಾಮರ್ಸ್ ವಿಭಾಗದಲ್ಲಿ (Commerce department) ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಮೊದಲ ರಾಂಕ್ ಗಳಿಸಿದ್ದಾರೆ. (Karnataka Second PU results announced) ಇವರು 600 ಕ್ಕೆ 599 ಅಂಕ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ (Arts Department) ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ 597 ಅಂಕ ಗಳಿಸಿ ಮೊದಲ ರಾಂಕ್ ಪಡೆದಿದ್ದಾರೆ.