Any Kind of Amendments Made in Pahani will be Canceled Immediately: CM Siddaramaiah Clarified.
Bengaluru: ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು (Notice) ತಕ್ಷಣದಿಂದಲೇ ವಾಪಸ್ ಪಡೆಯಬೇಕು. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ಕಾನೂನು ಬಾಹಿರವಾಗಿ ಹಾಗೂ ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಾನು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ವಕ್ಫ್ (Waqf) ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ. ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯಬೇಕು.
ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ಕಾನೂನು ಬಾಹಿರವಾಗಿ ಹಾಗೂ ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ (Farmers) ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಾನು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ? ಜಮೀನಿಗೆ ಸಂಬಂಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ ಎಂದು ತಿಳಿಸಿದ್ದಾರೆ.
ಬಿಜೆಪಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ (Bommai) ಅವರು ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ ‘‘ವಕ್ಫ್ ಆಸ್ತಿ ಅಲ್ಲಾಹುಗೆ ಸೇರಿದ್ದು, ಆ ಆಸ್ತಿಯನ್ನು ಹಲವರು ಕಬಳಿಸಿದ್ದಾರೆ, ಅದನ್ನು ಒಂದೊಂದು ಇಂಚು ಬಿಡದೆ ವಾಪಸು ಪಡೆಯಬೇಕು, ಇಲ್ಲದೆ ಇದ್ದರೆ ಅಲ್ಲಾಹುವಿನ ದೃಷ್ಟಿಯಲ್ಲಿ ನೀವು ತಪ್ಪಿತಸ್ಥರಾಗುತ್ತಿರಿ’’ ಎಂದು ಹೇಳಿರುವ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ, ಇದು ಬಿಜೆಪಿ ನಾಯಕರ ಅತ್ಮವಂಚನೆಯ ನಡವಳಿಕೆಯನ್ನು ಬಯಲು ಮಾಡಿದೆ. ರಾಜ್ಯ ಬಿಜೆಪಿ (BJP) ಪಕ್ಷದಲ್ಲಿ ಸರಣಿ ಪಟಾಕಿಗಳಂತೆ ಪ್ರತಿನಿತ್ಯ ಭಿನ್ನಮತ ಸ್ಪೋಟಗೊಳ್ಳುತ್ತಿದೆ. ಪರಸ್ಪರ ಆರೋಪಗಳನ್ನು ಮಾಡುವ ಮೂಲಕ ಈ ಪಕ್ಷದ ನಾಯಕರು ರಾಜ್ಯದ ಜನರ ಎದುರು ಬೆತ್ತಲಾಗುತ್ತಿದ್ದಾರೆ. ಈ ಜಗಳ ಬಗೆಹರಿಸುವ ಯಾವ ಪ್ರಯತ್ನವನ್ನೂ ಮಾಡದ ಅವರ ಪಕ್ಷದ ಹೈಕಮಾಂಡ್ ದೂರ ನಿಂತು ಚಂದ ನೋಡುತ್ತಿದೆ.
ರಾಜ್ಯದ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡಿನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದ ಹಾಗಿದೆ. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ನಾಯಕರು ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆಎಲ್ಲ ಜಾತಿ ಮತ್ತು ಧರ್ಮದಲ್ಲಿರುವ ಬಡವರು, ರೈತರು, ಮಹಿಳೆಯರು, ಕಾರ್ಮಿಕರು ಫಲಾನುಭವಿಗಳಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು (Guarantee Scheme) ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ತೆರಿಗೆ ಹಂಚಿಕೆ, ಜಿಎಸ್ಟಿ (GST) ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನದಲ್ಲಿ ಕಡಿತ ಮಾಡಿ ರಾಜ್ಯವನ್ನು ಆರ್ಥಿಕ ಮುಗ್ಗಟ್ಟಿಗೆ ಸಿಕ್ಕಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮಾಡಬೇಕೆನ್ನುವುದು ಬಿಜೆಪಿಯ ಹುನ್ನಾರವಾಗಿದೆ. ಇದಕ್ಕಾಗಿ ಒಂದೆಡೆ ಪ್ರಧಾನಿ ಮೋದಿ ಅವರಿಂದ ಹಿಡಿದು ರಾಜ್ಯದ ಸಣ್ಣಪುಟ್ಟ ನಾಯಕರ ವರೆಗೆ ಎಲ್ಲರೂ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ, ಇನ್ನೊಂದೆಡೆ ಕೇಂದ್ರ ಸರ್ಕಾರದಿಂದ ನ್ಯಾಯಬದ್ಧವಾಗಿ ನಮಗೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯಲ್ಲಿನ ಪಾಲು ಮತ್ತು ಅನುದಾನ ನೀಡದೆ ಅನ್ಯಾಯ ಮಾಡುತ್ತಿದೆ.
ಇಂತಹ ಬೆದರಿಕೆ ಮತ್ತು ಒತ್ತಡದ ತಂತ್ರಕ್ಕೆ ನಾವು ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನುಡಿದಂತೆ ನಡೆಯುತ್ತೇವೆ ಮತ್ತು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ.ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಧ್ಯಮಗಳ ಮೂಲಕ ಎಷ್ಟೇ ಸುಳ್ಳು ಆರೋಪಗಳನ್ನು ಮಾಡಿದರೂ ಈ ಯೋಜನೆಗಳಿಂದ ಸಂತೃಪ್ತರಾಗಿರುವ ಫಲಾನುಭವಿಗಳು ಇದಕ್ಕೆ ಕಿವಿಗೊಡದೆ ಇರುವುದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ ಎಂದಿದ್ದಾರೆ.
ಸುಳ್ಳು ಪ್ರೊಪಗಾಂಡದ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಕೋಮು ಸಂಘರ್ಷವನ್ನು ಸೃಷ್ಟಿ ಮಾಡಿ, ಅದರಿಂದ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಹುಟ್ಟು ಗುಣವಾಗಿದೆ. ಇದರ ಹೊರತಾಗಿ ಈ ಪ್ರತಿಭಟನೆಯಲ್ಲಿ ಯಾವ ರೈತರ ಹಿತಾಸಕ್ತಿಯ ರಕ್ಷಣೆಯ ಸದುದ್ದೇಶ ಇಲ್ಲ. ಈ ಪ್ರತಿಭಟನೆಯಿಂದ ರಾಜ್ಯದ ಸೌಹಾರ್ದತೆಗೆ ಭಂಗ ಉಂಟಾಗಬಹುದೇ ಹೊರತು ರೈತರಿಗೆ ಯಾವ ಲಾಭವೂ ಇಲ್ಲ ಎನ್ನುವುದನ್ನು ಜನತೆ ಅರ್ಥಮಾಡಿಕೊಳ್ಳಬೇಕು. ರಾಜ್ಯದ ಪ್ರಜ್ಞಾವಂತ ಜನತೆ ಇಂತಹ ಕಿಡಿಗೇಡಿತನದ ರಾಜಕೀಯವನ್ನು ತಿರಸ್ಕರಿಸಿ ನಮ್ಮ ಅಭಿವೃದ್ದಿ ಪರ ರಾಜಕೀಯದ ಪರವಾಗಿ ನಿಲ್ಲಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದ್ಧಾರೆ.
Karnataka Waqf Land-CM Siddaramaiah Orders Kannada News
Bengaluru: The notices given to farmers regarding Waqf should be withdrawn immediately. The notices already issued regarding the change in farmer’s plan should be withdrawn immediately. If any kind of amendments are made in the vehicle illegally and without giving notice, it should be canceled immediately. CM Siddaramaiah clarified that I have clearly instructed the authorities to be cautious and not take any decision that will cause trouble to the farmers.
Writing about this in X, he said that even after our government instructed to immediately withdraw the notices given to the farmers regarding the Waqf property dispute, the BJP leaders are protesting for political gain, but there is no protection of the interest of the farmers. I request the people of the state to understand that there is no good intention. The notices given to the farmers regarding Waqf should be withdrawn immediately.
The notices already issued regarding the change in farmer’s plan should be withdrawn immediately. If any kind of amendments are made in the vehicle illegally and without giving notice, it should be canceled immediately. I have given a clear instruction that the authorities should be cautious and not take any decision that will cause trouble to the farmers. of this notice BJP leaders are still protesting for what reason? He said that giving notice and seeking details is a normal administrative process in a land dispute.
Former Chief Minister Bommai, who is the leader of BJP, addressed the Muslim community Waqf property belongs to Allah, many people have grabbed that property, it should be taken back without leaving an inch, if not you will be guilty in the eyes of Allah”, a video circulating in the media has exposed the self-deceiving behavior of BJP leaders. Dissent erupts like a series of firecrackers in the state BJP party every day. By making accusations against each other, the leaders of these parties are in front of the people of the state. The high command of his party, which has not made any effort to resolve this dispute, is standing aloof and watching.
BJP leaders of the state have no money in the BJP high command. To escape this embarrassment, BJP leaders are trying to divert people’s attention by creating controversies day by day, poor people, farmers, women, workers of all castes and religions. Our guarantee schemes (Guarantee Scheme) as beneficiaries have put BJP leaders to sleep. BJP’s ambition is to cut down on grants for tax sharing, GST relief and centrally sponsored schemes, leaving the state in financial limbo and ending guarantee schemes. For this, on the one hand, from Prime Minister Modi to the small leaders of the state, everyone is spreading slander about the guarantee schemes, on the other hand, the central government is doing injustice by not giving us the rightful share of tax distribution and grants.
We will neither bow down nor cower to such threats and pressure tactics. We will keep our word and face the injustice done to the state politically. No matter how many false allegations are made by the media about our guarantee schemes, the beneficiaries are satisfied with these schemes. He said that not listening has put the BJP leaders to sleep.
It is BJP’s birthright to inflame religious sentiments and create communal conflict through false propaganda and get political benefits out of it. Apart from this There is no good intention of protecting the interests of any farmers in the protest. People should understand that this protest may disturb the harmony of the state and there is no benefit to the farmers. The intelligent people of the state reject such mischievous politics and support our development Karnataka Waqf Land-CM Siddaramaiah Orders He said that he would appeal to stand in favor of politics.