ಕರ್ನಾಟಕದಲ್ಲಿ ‘ಕನ್ನಡಿಗನೇ ಸಾರ್ವಭೌಮ’ ಎಂಬ ಸಂದೇಶ ರವಾನಿಸಿ: ಎಚ್‌ಡಿಕೆ

ಬೆಂಗಳೂರು, ಜ. 02: ಬೆಳಗಾವಿಯಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಮೂಲಕ ಕರ್ನಾಟಕದಲ್ಲಿ ‘ಕನ್ನಡಿಗನೇ ಸಾರ್ವಭೌಮ’ ಎಂಬ ಸಂದೇಶ ರವಾನಿಸಲು ‌ಸರ್ಕಾರ ಕ್ರಮಕ್ಕೆ ಮುಂದಾಗಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆಯಾಗಿದೆ.

ಪಾಲಿಕೆ ಎದುರು ಧ್ಜಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆಯೂ ನಡೆದಿದೆ. ಕರ್ನಾಟಕದಲ್ಲಿ ಕನ್ನಡ ಧ್ವಜಕ್ಕಾಗಿ ಹೋರಾಡಿದವರ ಮೇಲೆ ಪದೇ ಪದೇ ದಾಳಿ ನಡೆಯುತ್ತದೆ ಎಂದರೆ, ಅವರಿಗೆ ರಕ್ಷಣೆ ನೀಡಲಾಗುತ್ತಿಲ್ಲ ಎಂದರೆ ಆಳುವವರ ಕನ್ನಡಾಭಿಮಾನ, ನಾಡಪ್ರೇಮ ಪ್ರಶ್ನಾರ್ಹ.

ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು.

ಆ ಮೂಲಕ ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ ‘ಕನ್ನಡಿಗನೇ ಸಾರ್ವಭೌಮ’ ಎಂಬ ಸಂದೇಶ ರವಾನಿಸಬೇಕು. ಇಲ್ಲವಾದರೆ, ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು ಎಂದು ಟ್ವೀಟ್ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Latest News

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.