Visit Channel

ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಯೂನಿಯನ್ ಗಳ ಧರಣಿ:

Screenshot 2021-02-19 163945

ನವದೆಹಲಿ,ಫೆ.19: ಕೇಂದ್ರ ಸರ್ಕಾರದ ಬ್ಯಾಂಕ್ ಗಳ  ಖಾಸಗೀಕರಣದ ನೀತಿಯನ್ನು  ವಿರೋಧಿಸಿ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಇಂದು ಬ್ಯಾಂಕ್‌ಗಳು ಯೂನಿಯನ್ ಗಳು ಪ್ರತಿಭಟನಾ ಧರಣಿ ನಡೆಸಿದವು. ಒಂದು ವೇಳೆ ತಮ್ಮ ಬೇಡಿಕೆಗಳು ಈಡೇರದಿದ್ದಲಿ ಮುಂದಿನ ತಿಂಗಳು ಸಂಸತ್ ಕಡೆಗೆ ಜಾಥಾ ನಡೆಸಲು ಯೋಜಿಸಲಾಗಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಅಸೋಸಿಯೇಷನ್ ಹೇಳಿದೆ.

ಬಜೆಟ್ ಭಾಷಣದ ವೇಳೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎರಡು ಸಾರ್ವಜನಿಕ ಕ್ಷೇತ್ರಗಳ ಬ್ಯಾಂಕ್ ಗಳ ಖಾಸಗೀಕರಣ ಯೋಜನಯನ್ನು ಪ್ರಸ್ತಾಪಿಸಿದ್ದಾರೆ. ಯುನೈಟೆಡ್ ಪೋರಂ ಆಫ್ ಯೂನಿಯನ್ ಅಡಿಯಲ್ಲಿ 10 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳಿರುವುದಾಗಿ ಎಐಬಿಇಎ ಹೇಳಿಕೆಯಲ್ಲಿ ತಿಳಿಸಿದೆ.

ಬ್ಯಾಂಕ್ ಯೂನಿಯನ್ ಗಳು ಇಂದು ಧರಣಿ ನಡೆಸಿದ ಬಳಿಕ ಮುಂದಿನ 15 ದಿನಗಳ ಕಾಲ ದೇಶಾದ್ಯಂತ ಧರಣಿ ಪ್ರತಿಭಟನೆ ನಡೆಯಲಿದೆ. ಮುಂದಿನ ತಿಂಗಳು 10 ರಂದು ಸಂಸತ್ ಎದುರುಗಡೆ ಪ್ರತಿಭಟನೆ ನಡೆಸಲಾಗುವುದು, ತದನಂತರ ಮಾರ್ಚ್ 15-16 ರಂದು 10 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ನಿರಂತರವಾಗಿ ಮುಷ್ಕರ ನಡೆಸಲಿದ್ದಾರೆ ಎಂದು “ಅಖಿಲ ಭಾರತ ಬ್ಯಾಂಕ್ ನೌಕರರ ಅಸೋಸಿಯೇಷನ್” ತಿಳಿಸಿದೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.