ಕಾಸರಗೋಡು, ಕಣ್ಣೂರಿನಲ್ಲಿ ಭಾರಿ ಮಳೆ ಸಂಭವ: ರೆಡ್ ಅಲರ್ಟ್

ಕೇರಳ, ಜು. 10: ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಜುಲೈ 11 ರಂದು ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ ಈ ಎರಡೂ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಿದೆ.

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕೇರಳದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ವಯನಾಡ್, ಕೋಯಿಕ್ಕೋಡ್ ಮತ್ತು ಮಲ್ಲಪ್ಪುರಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಪಾಲಕ್ಕಾಡ್, ತ್ರಿಶ್ಯೂರ್, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ ಮೂರ್ನಾಲ್ಕು ದಿನಗಳವರೆಗೆ (ಜುಲೈ 10 ರಿಂದ 13ರವರೆಗೆ) ಕೇರಳದ ಕರಾವಳಿ ತೀರದ ಉದ್ದಕ್ಕೂ 40 ರಿಂದ 50 ಕಿ.ಮೀ ವೇಗದಲ್ಲಿ ಭಾರಿ ಗಾಳಿ ಬೀಸಲಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ‘ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

Exit mobile version