370 ರದ್ದತಿ ಪರಿಣಾಮ 2100 ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ವಾಪಸ್!

kashmir

2019ರ ಆಗಸ್ಟ್ ನಲ್ಲಿ ಕೇಂದ್ರ ಸರ್ಕಾರ(Central Government) ಜಮ್ಮು-ಕಾಶ್ಮೀರಕ್ಕೆ(Jammu Kashmir) ನೀಡಿದ್ದ ವಿಶೇಷ ಸಾಂವಿಧಾನಿಕ ಸ್ಥಾನಮಾನವನ್ನು ರದ್ದು ಮಾಡಿದ ಬಳಿಕ ಕಾಶ್ಮೀರದಲ್ಲಿ ಅನೇಕ ಬದಲಾವಣೆಗಳಾಗುತ್ತಿವೆ. ಕಲ್ಲುತೂರಾಟ, ಭಯೋತ್ಪಾದನಾ ದಾಳಿಗಳು ಕಡಿಮೆಯಾಗಿದ್ದರೇ, ಇನ್ನೊಂದೆಡೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಅದೇ ರೀತಿ ಕಾಶ್ಮೀರದ ಮೂಲ ನಿವಾಸಿಗಳಾದ ಕಾಶ್ಮೀರ ಪಂಡಿತರು(Kashmir Pandiths) ಮರಳಿ ಹೆಚ್ಚಿನ ಸಂಖ್ಯೆಯಲ್ಲಿ ಕಣಿವೆ ರಾಜ್ಯಕ್ಕೆ ವಾಪಸ್ ಬರುತ್ತಿದ್ದಾರೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ 2019ರ ಆಗಸ್ಟ್ ನಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ 2100 ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ವಾಪಸ್ ಆಗಿದ್ದಾರೆ. 1990ರಲ್ಲಿ ಕಾಶ್ಮೀರಲ್ಲಿ ಪಂಡಿತರ ಮೇಲೆ ಮೂಲಭೂತವಾದಿಗಳ ನಿರಂತರ ದಾಳಿಯ ಪರಿಣಾಮ ಸುಮಾರು 55000 ಕಾಶ್ಮೀರಿ ಪಂಡಿತರ ಕುಟುಂಬಗಳು ಕಣಿವೆ ರಾಜ್ಯವನ್ನು ಬಿಟ್ಟು ದೇಶದ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದರು. ಅನಂತರ ಕಾಶ್ಮೀರದಲ್ಲಿ ನಿರಂತರವಾಗಿ ಅಶಾಂತಿ ನೆಲೆಸಿದ್ದರ ಪರಿಣಾಮವಾಗಿ ಪಂಡಿತರು ಕಾಶ್ಮೀರಕ್ಕೆ ಮರಳಲು ಸಾಧ್ಯವಾಗಿರಲಿಲ್ಲ.

ಈ ಹಿಂದಿನ ಯುಪಿಎ ಸರ್ಕಾರ ಕಾಶ್ಮೀರಿ ಪಂಡಿತರನ್ನು ಕರೆತರಲು ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದರು, ಅವುಗಳನ್ನು ಜಾರಿಗೊಳಿಸುವಲ್ಲಿ ಬದ್ದತೆ ತೋರಿರಲಿಲ್ಲ. ಹೀಗಾಗಿ ಕಾಶ್ಮೀರದಲ್ಲಿ ಸೂಕ್ತ ಭದ್ರತೆ ಇಲ್ಲದ ಪರಿಣಾಮ ಪಂಡಿತರು ಕಾಶ್ಮೀರಕ್ಕೆ ಬರಲು ಹಿಂದೇಟು ಹಾಕುತ್ತಿದ್ದರು. 2019ರ ನಂತರ ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ಬಂದಿದೆ. ಹೀಗಾಗಿ ಅನೇಕ ಕಾಶ್ಮೀರಿ ಪಂಡಿತರು ತಮ್ಮ ಮೂಲ ನೆಲೆಗೆ ಬರುತ್ತಿದ್ದಾರೆ.

ಇನ್ನು ಕಾಶ್ಮೀರಿ ಪಂಡಿತರನ್ನು ಮರಳಿ ಕರೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2020-21ರಲ್ಲಿ ವಿವಿಧ ಇಲಾಖೆಗಳ 842 ಸರ್ಕಾರಿ ಹುದ್ದೆಗಳನ್ನು ಕಾಶ್ಮೀರಿ ಪಂಡಿತರಿಗೆ ನೀಡಲಾಗಿತ್ತು. ಅಲ್ಲದೇ 2021-22ರಲ್ಲಿ 1264 ಕಾಶ್ಮೀರಿ ಪಂಡಿತರನ್ನು ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿದೆ. ಅದೇ ರೀತಿ ಇತ್ತೀಚೆಗೆ ಅನೇಕ ಖಾಸಗಿ ಕಂಪನಿಗಳು ಕಾಶ್ಮೀರದಲ್ಲಿ ಅಪಾರ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗಿದೆ. ಪ್ರವಾಸೋದ್ಯಮವು ಸಾಕಷ್ಟು ಅಭಿವೃದ್ದಿ ಕಾಣುತ್ತಿದೆ. ಈ ಎಲ್ಲ ಕಾರಣದಿಂದ ಪಂಡಿತರು ಮರಳಿ ಕಾಶ್ಮೀರಕ್ಕೆ ಬರುತ್ತಿದ್ದಾರೆ.

Exit mobile version