Visit Channel

‘ಕಸ್ತೂರಿ ಮಹಲ್’ ಚಿತ್ರೀಕರಣ ಪೂರ್ಣ

WhatsApp Image 2020-10-31 at 6.42.14 AM

ಖ್ಯಾತ ನಿರ್ದೇಶಕ ದಿನೇಶ್ ಬಾಬು ಅವರ ನಿರ್ದೇಶನದ 50ನೇ ಚಿತ್ರ ‘ಕಸ್ತೂರಿ ಮಹಲ್’ ನ ಚಿತ್ರೀಕರಣ ಪೂರ್ತಿಯಾಗಿದೆ. ಅಕ್ಟೋಬರ್ ತಿಂಗಳ ಆರಂಭದಲ್ಲಿ ‘ಕಸ್ತೂರಿ ಮಹಲ್’ನ ಚಿತ್ರೀಕರಣವು ಕೊಟ್ಟಿಗೆ ಹಾರ, ಬಾಳೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಆರಂಭವಾಗಿತ್ತು.

ಆಯುಧ ಪೂಜೆಯ ಶುಭದಿನದಂದು ಅದೇ ಸ್ಥಳದಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಸುಮಾರು 20 ದಿನಗಳ ಕಾಲ ನಡೆದ ಚಿತ್ರೀಕರಣವನ್ನು ದಿನೇಶ್ ಬಾಬು ಅವರು ತಮ್ಮ ಎಂದಿನ ಶೈಲಿಯಂತೆ ಒಂದೇ ಹಂತದಲ್ಲಿ ಪೂರ್ಣಗೊಳಿಸಿದ್ದಾರೆ.
ಚಿತ್ರೀಕರಣದ ಬಳಿಕದ ನಿರ್ಮಾಣ ಸಂಬಂಧಿತ ಕಾರ್ಯಚಟುವಟಿಕೆಗಳು ಸದ್ಯದಲ್ಲೇ ಆರಂಭವಾಗಲಿದೆ. ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ್, ರಂಗಾಯಣ ರಘು, ಶ್ರುತಿ ಪ್ರಕಾಶ್, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.

ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸುತ್ತಿರುವ‌ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನ ಕಸ್ತೂರಿ ಮಹಲ್ ಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.