ಬಾಲಿವುಡ್ ನಟಿ ಕತ್ರಿನಾ ಕೈಫ್ ಮದುವೆಯಾದ ಮರುದಿನವೇ ಅವರು ಹನಿಮೂನ್ಗೆ ಮಾಲ್ಡೀವ್ಸ್‌ಗೆ ತೆರಳಿದ್ದರು. ಇದೀಗ ವಿಕ್ಕಿ ಮತ್ತು ಕತ್ರಿನಾ ಆವರ ಫೋಟೋಗಳು ಸಕತ್ ವೈರಲ್ ಆಗಿವೆ.
ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರು ಡಿ.9ರಂದು ಅದ್ದೂರಿಯಾಗಿ ಮದುವೆ ಆಗಿದ್ದರು. ಇದಾದ ಮರುದಿನವೇ ಅವರು ಹನಿಮೂನ್ಗೆ ಮಾಲ್ಡೀವ್ಸ್‌ಗೆ ಹೋಗಿದ್ದರು ಎನ್ನಲಾಗಿತ್ತು. ನಾಲ್ಕು ದಿನ ಮಾಲ್ಡೀವ್ಸ್‌ನಲ್ಲಿ ಸಮಯ ಕಳೆದು ಭಾರತಕ್ಕೆ ವಾಪಸ್ ಬಂದಿತ್ತು. ಮಾಲ್ಡೀವ್ಸ್ ಡೈರಿಯ ಫೋಟೋ ಹಂಚಿಕೊಂಡಿರಲಿಲ್ಲ. ಈಗ ಕತ್ರಿನಾ ಅವರು ಹನಿಮೂನ್ ಫೋಟೋ ಹಂಚಿಕೊಂಡಿದ್ದಾರೆ.
ಕತ್ರಿನಾ ಕೈಫ್ ಬೀಚ್ನಲ್ಲಿ ಕುಳಿತಿದ್ದಾರೆ. ಬೀಚ್ನಲ್ಲಿ ಸಮಯ ಕಳೆದಿರುವ ಮೂರು ಫೋಟೋಗಳನ್ನು ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಫೋಟೋ ಪೋಸ್ಟ್ ಮಾಡಿದ ಎರಡು ಗಂಟೆಯಲ್ಲಿ 15 ಲಕ್ಷಕ್ಕೂ ಅಧಿಕ ಜನರು ಇದನ್ನು ಲೈಕ್ ಮಾಡಿದ್ದಾರೆ. ವಿಶೇಷ ಎಂದರೆ, ಇವರ ಮದುವೆ ದಿನ ಹಾಕಿದ ಫೋಟೋ ಒಂದು ಕೋಟಿಗೂ ಅಧಿಕ ಲೈಕ್ಸ್ ಪಡೆದುಕೊಂಡಿದೆ.
ಮಾಲ್ಡೀವ್ಸ್ ಸಮುದ್ರ ತೀರದಲ್ಲಿ ನಿಂತಿರುವ ಚಿತ್ರವನ್ನು ಕತ್ರಿನಾ ಪೋಸ್ಟ್ ಮಾಡಿದ್ದಾರೆ. ಈ ಫೋಟೋಗೆ ಮೈ ಹ್ಯಾಪಿ ಪ್ಲೇಸ್ ಎಂದು ಅವರು ಹಾಕಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

ಚಿತ್ರರಂಗದಲ್ಲಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ತುಂಬ ಬ್ಯುಸಿ ಆಗಿದ್ದಾರೆ. ಇಬ್ಬರಿಗೂ ಸಖತ್ ಡಿಮ್ಯಾಂಡ್ ಇದೆ. ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಈಗಾಗಲೇ ಒಪ್ಪಿಕೊಂಡಿರುವ ಅನೇಕ ಸಿನಿಮಾಗಳ ಶೂಟಿಂಗ್ ಬಾಕಿ ಇದೆ. ಮದುವೆಗಾಗಿ ಒಂದಷ್ಟು ದಿನ ವಿರಾಮ ಪಡೆದುಕೊಂಡಿದ್ದ ಅವರು ಈಗ ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ಜೀ ಲೇ ಝರಾ’, ‘ಫೋನ್ ಭೂತ್’ ಮುಂತಾದ ಸಿನಿಮಾಗಳ ಶೂಟಿಂಗ್ನಲ್ಲಿ ಕತ್ರಿನಾ ಬ್ಯುಸಿ ಇದ್ದಾರೆ. ‘ಸ್ಯಾಮ್ ಬಹದ್ದೂರ್’ ಸಿನಿಮಾದ ಚಿತ್ರೀಕರಣದಲ್ಲಿ ವಿಕ್ಕಿ ಪಾಲ್ಗೊಳ್ಳುತ್ತಿದ್ದಾರೆ.
ಕತ್ರಿನಾ ಕೈಫ್ ಲಂಡನ್ ಮೂಲದವರು. ಹಿಂದಿ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ ನಂತರ ಅವರು ಭಾರತದಲ್ಲೇ ಸೆಟ್ಲ್ ಆಗಿದ್ದಾರೆ. ಈಗ ವಿಕ್ಕಿ ಕೌಶಲ್ ಅವರನ್ನು ಮದುವೆಯಾಗಿ ಪಂಜಾಬ್‍ನ ಸೊಸೆ ಆಗಿದ್ದಾರೆ. ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಹೋಟೆಲ್‍ನಲ್ಲಿ ಅದ್ದೂರಿಯಾಗಿ ವಿಕ್ಕಿ ಕೌಶಲ್, ಕತ್ರಿನಾ ಕೈಫ್ ಮದುವೆ ನೆರವೇರಿತ್ತು.