Mandya : ತಮಿಳುನಾಡಿಗೆ (Tamilnadu) ಪ್ರತಿದಿನ 5000 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಸುಪ್ರೀಂಕೋರ್ಟ್ (Kaveri Water release till 26th) ಆದೇಶದ ನಂತರ ಕಾವೇರಿ
ಹೋರಾಟ ತೀವ್ರಗೊಂಡಿದ್ದು, ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಸದ್ಯ ನೀರು ಬಿಡುಗಡೆ ಮಾಡುತ್ತಿರುವ ಮಾದರಿಯಲ್ಲೇ ಸೆಪ್ಟೆಂಬರ್ 26ರವರೆಗೆ ಪ್ರತಿದಿನ 3,500
ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದ್ದು, ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಮಾದ್ಯಮಗಳಿಗೆ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ (D K Shivakumar) ಅವರು, ಸುಪ್ರೀಂ ಕೋರ್ಟ್ನಲ್ಲಿ ನಡೆದಿರುವ ಸಮಗ್ರ ವಿಚಾರಣೆಯನ್ನು ಎಎಜಿ
ಸಚಿವ ಸಂಪುಟ ಸಭೆಯಲ್ಲಿ ವಿವರಿಸಿದ್ದಾರೆ. ಹೀಗಾಗಿ ಸೆಪ್ಟೆಂಬರ್ (September) 26ರವರೆಗೆ ತಮಿಳುನಾಡಿಗೆ ಪ್ರತಿದಿನ 3500 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುವುದು. ಸದ್ಯ ಕೆಆರ್ಎಸ್ನಲ್ಲಿ
(KRS) 8000 ಕ್ಯುಸೆಕ್ಸ್ ಒಳಹರಿವು ಇದ್ದು, 3,000-3,500 ಕ್ಯುಸೆಕ್ಸ್ ನೀರು ಹರಿದು ಹೋಗುತ್ತಿದೆ. ನಮ್ಮ ಸರ್ಕಾರ ರೈತರ ಹಿತರಕ್ಷಣೆಯನ್ನೂ ಮತ್ತು ಕುಡಿಯುವ ನೀರಿನ ರಕ್ಷಣೆಯನ್ನು ಮಾಡುತ್ತದೆ.
ಜೊತೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪಾಲಿಸಲಾಗುವುದು (Kaveri Water release till 26th) ಎಂದು ಹೇಳಿದ್ದಾರೆ.
ಇನ್ನು ಕರ್ನಾಟಕದ (Karnataka) ಆರಂಭಿಸಿರುವ ಮೇಕೆದಾಟು ಯೋಜನೆಯನ್ನು ಸ್ಥಗಿತಗೊಳಿಸುವಂತೆ ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡು ಆಕ್ಷೇಪಣಾ ಅರ್ಜಿಯನ್ನು ಸಲ್ಲಿಸಿದೆ. ಆದರೆ, ಸುಪ್ರೀಂ ಕೋರ್ಟ್
ನ್ಯಾಯಮೂರ್ತಿ ಮೌಖಿಕವಾಗಿ ಮೇಕೆದಾಟು (Mekedaatu) ಯೋಜನೆಗೆ ಗೆ ಏಕೆ ಅಡ್ಡ ಪಡಿಸುತ್ತೀರಿ..? ಅದರಿಂದ ನಿಮಗೇನು ನಷ್ಟವಾಗುತ್ತುದೆ..? ಕರ್ನಾಟಕ ಅವರ ಭೂಮಿಯಲ್ಲಿ ಈ ಯೋಜನೆಯನ್ನು
ನಿರ್ಮಾಣ ಮಾಡುತ್ತಿದೆ.. ಎಂದು ತಮಿಳುನಾಡಿಗೆ ಪ್ರಶ್ನಿಸಿದೆ. ಹೀಗಾಗಿ ನಮ್ಮ ಸರ್ಕಾರ ಮೇಕೆದಾಟು ಯೋಜನೆ ಮುಂದುವರಿಸಲು ತೀರ್ಮಾನಿಸಿದೆ. ಈ ಸಂಬಂಧ ಕೇಂದ್ರ ಪರಿಸರ ಇಲಾಖೆಯ ಅನುಮೋದನೆ
ಪಡೆಯುವುದು ಸೇರಿ ಬೇಕಾದ ಇತರೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಇದನ್ನು ಓದಿ: ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ