ಕರ್ನಾಟಕ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಸಿಪಾಯಿ(peon) ಹುದ್ದೆಗಳಿಗೆ ಅರ್ಜಿ ಆಹ್ವಾನ!

jobs

ಕರ್ನಾಟಕ ಸೆಂಟ್ರಲ್ ಕೋ ಅಪರೇಟಿವ್(Karnataka central co-operative bank) ಬ್ಯಾಂಕ್ನಲ್ಲಿ ಸಿಪಾಯಿ ( peon ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ (Karnataka central co-operative bank) ನಿಯಮಿತ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ ವೇತನ ಶ್ರೇಣಿ, ವಯೋಮಿತಿ ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಬಹುದಾಗಿದೆ.

ಇಲಾಖೆ ಹೆಸರು: ಕರ್ನಾಟಕ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ
ಹುದ್ದೆ : ಸಿಪಾಯಿ ( peon )
ಒಟ್ಟು ಹುದ್ದೆ : 52
ಉದ್ಯೋಗ ಕೇಂದ್ರ : ಧಾರವಾಡ
ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೆ.ಸಿ.ಸಿ ಬ್ಯಾಂಕ್, ಪ್ರಧಾನ ಕಛೇರಿ, ಸುಭಾಸ ರೋಡ ಧಾರವಾಡ – 580001.

ಆಯ್ಕೆ ವಿಧಾನ :

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವಷ
ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಪ.ಜಾತಿ, ಪ.ಪಂ/ ಪುವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,500 – ರೂ. 24 000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 500.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪುವರ್ಗ 1/ಅಂಗವಿಕಲ/ಮಾಜಿ ಸೈನಿಕ ವಿಧವಾ ಅಭ್ಯರ್ಥಿಗಳು ರೂ. 250 ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಅನ್ನು ಸದಸ್ಯ ಕಾರ್ಯದರ್ಶಿ ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಕೆ.ಸಿ.ಸಿ.


ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳು:ಎಸ್.ಎಸ್.ಎಲ್.ಸಿ ಅಂಕ ಪಟ್ಟಿ ಸ್ವ ಹಸ್ತಾಕ್ಷರವಿರುವ ಇತ್ತೀಚಿನ 3 ಭಾವಚಿತ್ರ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ಮತ್ತು ಗ್ರಾಮೀಣ ಅಭ್ಯರ್ಥಿ/ ಕನ್ನಡ ಮಾಧ್ಯಮ/ಮಾಜಿ ಸೈನಿಕ ಅಭ್ಯರ್ಥಿ/ ಅಂಗವಿಕಲ ಅಭ್ಯರ್ಥಿ ಮೀಸಲಾತಿ ಸೌಲಭ್ಯ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸರ್ಕಾರ ನಿಗದಿಪಡಿಸಿದ ನಮೂನೆಯಲ್ಲಿ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದ ಚಾಲ್ತಿ ಇರುವ ಪ್ರಮಾಣ ಪತ್ರಗಳ ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು ಮತ್ತು ಮೂಲ ಪ್ರತಿಗಳನ್ನು ಸಂದರ್ಶನ/ ಪರಿಶೀಲನ ಕಾಲಕ್ಕೆ ಸಲ್ಲಿಸತಕ್ಕದ್ದು.

ಅಭ್ಯರ್ಥಿಗಳು ತಮ್ಮ ವಿಳಾಸ ಸಮರ್ಥಿಸಲು ಅಗತ್ಯ ದಾಖಲಾತಿ ಸಲ್ಲಿಸಬೇಕು. (ಆಧಾರ್ ಕಾರ್ಡ್/ ವೋಟರ್ ಐಡಿ/ ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ಈ ಎಲ್ಲಾ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿ ಪ್ರತಿಯನ್ನು ಲಗತ್ತಿಸಬೇಕು.

Exit mobile version