download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಸ್ನಾತಕೋತ್ತರ ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್: 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಸೂಚನೆ ಪ್ರಕಟ

ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್‌ ಟೆಕ್ನಾಲಜಿ ವಿಷಯಗಳಿಗೆ ನೇಮಕಾತಿ ನಡೆಸಲಾಗುತ್ತದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆ ಆಗಿದೆ. ಅತೀ ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಸಹ ಬಿಡುಗಡೆ ಆಗಲಿದೆ.

2015ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದೆ ಭರ್ತಿಯಾಗದಿರುವ 145 ಹುದ್ದೆಗಳನ್ನು ಒಳಗೊಂಡಂತೆ ಪ್ರಸ್ತುತ ಈ ಕೆಳಗಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳ ಪೈಕಿ 1021 Non-HK ಹುದ್ದೆಗಳು, 221 HK ಹುದ್ದೆಗಳು ಖಾಲಿ ಇವೆ

ವಿದ್ಯಾರ್ಹತೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಖಾಲಿ ಹುದ್ದೆಯ ವಿಷಯಕ್ಕೆ ಸಂಬಂಧಿಸಿದ ಸ್ನಾತಕೋತ್ತರ ಪದವಿ ಜತೆಗೆ ಎನ್‌ಇಟಿ, ಕೆಎಸ್‌ಇಟಿ, ಪಿಹೆಚ್‌ಡಿ ಉತ್ತೀರ್ಣರಾಗಿರಬೇಕು.

ಪ್ರಮುಖ ದಿನಾಂಕಗಳು

ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-10-2021

ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06-11-2021 ರ ರಾತ್ರಿ 11-59 ಗಂಟೆವರೆಗೆ.

ಇ-ಪೋಸ್ಟ್‌ ಆಫೀಸ್‌ನಲ್ಲಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 10-11-2021

ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 2021 ರ ಡಿಸೆಂಬರ್ ಮಾಹೆಯ 3ನೇ ಅಥವಾ 4ನೇ ವಾರದಲ್ಲಿ ನಡೆಸುವ ಸಾಧ್ಯತೆ ಇದೆ.

ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್‌ ಟೆಕ್ನಾಲಜಿ ವಿಷಯಗಳಿಗೆ ನೇಮಕಾತಿ ನಡೆಸಲಾಗುತ್ತದೆ.

ಈ ಹುದ್ದೆಗಳಲ್ಲಿ ಶೇಕಡ.95 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಮತ್ತು ಶೇಕಡ.5 ರಷ್ಟು ಇಲಾಖೆಯ ಗ್ರೂಪ್‌ ಸಿ ವೃಂದದಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿದೆ.

ನೇಮಕಾತಿ ವಿಧಾನ

ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಮೆರಿಟ್‌ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೀಸಲಾತಿ (ನೇರ ಮತ್ತು ಸಮತಳ) ಮತ್ತು ರೋಸ್ಟರ್ ಬಿಂದುಗಳನ್ವಯ ಆಯ್ಕೆ ಮಾಡಿ, ಅಂತಿಮ ಆಯ್ಕೆಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.

ವಿಷಯವಾರು ಖಾಲಿ ಹುದ್ದೆಗಳ ವಿವರವನ್ನು ಅತೀ ಶೀಘ್ರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಿರುವ ನೋಟಿಫಿಕೇಶನ್‌ನಲ್ಲಿ ಬಿಡುಗಡೆಗೊಳಿಸಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ ವಿಳಾಸ : https://cetonline.karnataka.gov.in/kea/Assprof

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article