ಕೋವಿಡ್ ಬಿಕ್ಕಟ್ಟು ಎದುರಿಸಲು ₹20ಸಾವಿರ ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಿದ ಕೇರಳ

ಕೇರಳ, ಜೂ. 04: ಕೊರೊನಾದ ಎರಡನೇ ಅಲೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಎದುರಿಸಲು ಕೇರಳ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ₹20ಸಾವಿರ ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಿದೆ.

ಹಣಕಾಸು ಸಚಿವ ಕೆ.ಎನ್‌.ಬಾಲಗೋಪಾಲ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎರಡನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು ಶುಕ್ರವಾರ ಮಂಡಿಸಿದ್ದು, ಇದರಲ್ಲಿ ಕೋವಿಡ್ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್‌ ಅನ್ನು ಪ್ರಕಟಿಸಿದ್ದಾರೆ.

ಈ ಹಣಕಾಸಿನ ಪ್ಯಾಕೇಜ್‌ ಜೊತೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ₹ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದು, ಉಚಿತ ಲಸಿಕೆ ನೀಡಲು ಬೇಕಾದ ಉಪಕರಣಗಳು ಮತ್ತು ಸೌಲಭ್ಯಗಳಿಗಾಗಿ ಹೆಚ್ಚುವರಿಯಾಗಿ ₹500 ಕೋಟಿ ಇಡಲಾಗಿದೆ ಎಂದು ಹೇಳಿದರು.

Exit mobile version