Visit Channel

ಕೇರಳ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎಂ. ಅಶ್ರಫ್

Ashraf-620x334

ಕಾಸರಗೋಡು, ಮೇ. 24: ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರಕ್ಕೆ ಆಯ್ಕೆಯಾಗಿರುವ ನೂತನ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶ್ರಫ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇಂದು ಆರಂಭವಾಗಿರುವ ಕೇರಳ ವಿಧಾನಸಭೆ ಅಧಿವೇಶನದಲ್ಲಿ ಅಶ್ರಪ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷಾಭಿಮಾನ ಮೆರೆದಿದ್ದಾರೆ.

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕು ವ್ಯಾಪ್ತಿಯನ್ನು ‘ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ’ ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.