Visit Channel

ಕೇರಳ: 14ಕ್ಕೇರಿದ ಝಿಕಾ ವೈರಸ್ ತಗುಲಿರುವವರ ಸಂಖ್ಯೆ

211373-zika-virus

ತಿರುವನಂತಪುರ, ಜು. 09: ಕೇರಳದಲ್ಲಿ ಕೊರೊನಾ ನಡುವೆ ಮತ್ತೊಂದು ಆತಂಕ ಮೂಡಿದ್ದು, ಈಗಾಗಲೇ 14 ಮಂದಿಗೆ ಝಿಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇತ್ತೀಚೆಗೆ ಗರ್ಭಿಣಿಯೊಬ್ಬರಲ್ಲಿ ಸೋಂಕು ದೃಢಪಟ್ಟಿತ್ತು. ಇದೀಗ, ಇನ್ನೂ 13 ಮಂದಿಗೆ ಸೋಂಕು ತಗುಲಿರುವುದನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್‌ಐವಿ) ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಗುರುವಾರ, 24 ವರ್ಷದ ಗರ್ಭಿಣೆಗೆ ಸೋಂಕು ತಗುಲಿರುವುದು ದೃಢಪಡುವ ಮೂಲಕ ಕೇರಳದಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಆ ಬಳಿಕ ಇಬ್ಬರು ವೈದ್ಯರು ಸೇರಿ 13 ಮಂದಿಯ ಪ್ರಯೋಗಾಲಯದ ಮಾದರಿಯನ್ನು ಪುಣೆಯ ಎನ್‌ಐವಿಗೆ ಕಳುಹಿಸಲಾಗಿತ್ತು. ಇದೀಗ, ಆ 13 ಮಂದಿಯಲ್ಲೂ ಸೋಂಕು ದೃಢಪಟ್ಟಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.

ಜ್ವರ, ದದ್ದುಗಳು ಮತ್ತು ಕೀಲು ನೋವು ಮುಂತಾದ ಝಿಕಾ ವೈರಸ್‌ನ ರೋಗಲಕ್ಷಣಗಳು ಡೆಂಗ್ಯೂಗೆ ಹೋಲುತ್ತವೆ. ಝಿಕಾ ಹರಡುವಿಕೆಯನ್ನು ನಿಯಂತ್ರಿಸಲು ಕ್ರಿಯಾ ಯೋಜನೆಯನ್ನು ರೂಪಿಸಲಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಗರ್ಭಿಣಿಯರಲ್ಲಿ ಜ್ವರ ಕಂಡು ಬಂದರೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿಗಳ (ಡಿಎಂಒ) ಸಭೆಯಲ್ಲಿ ಸಚಿವರು ಸೂಚಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.