ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣ ಕೈಬಿಡುವಂತೆ ಪೊಲೀಸ್ ಇಲಾಖೆಗೆ ಜಿ.ಪರಮೇಶ್ವರ್ ಸೂಚನೆ..?!

ಕೆಜಿಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೆ ನಡೆದ ಗೂಂಡಾ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಪ್ರಕರಣವನ್ನು ಕೈ ಬಿಡುವಂತೆ ಶಾಸಕ ತನ್ವೀರ್ (kg halli dj halli cases) ಸೇಠ್ ಬರೆದ ಪತ್ರ

kg halli dj halli cases

ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ (kg halli dj halli cases) ಎನ್ನಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ರಾಜ್ಯದ ಕಾಂಗ್ರೆಸ್ ಸರ್ಕಾರ ಕೋಮು ಗಲಭೆ ನಿಯಂತ್ರಣದ ಹೆಸರಿನಲ್ಲಿ ಹಿಂದುಗಳು ಹಾಗೂ ಹಿಂದು ಸಂಘಟನೆಗಳನ್ನು ಗುರಿಯಾಗಿಸಿ

ದ್ವೇಷದ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಇವರಿಗೆ ಮಂಗಳೂರು ಪೊಲೀಸರು ಗಡಿಪಾರು ನೋಟಿಸ್ ನೀಡಿದ್ದಾರೆಂಬ ಮಾಹಿತಿ ಲಭಿಸಿದ್ದು,

ಇದನ್ನು ಓದಿ : ಪೋಷಕಾಂಶಗಳ ‘ಶಕ್ತಿ ಕೇಂದ್ರ’ ಕಪ್ಪು ಎಳ್ಳು: ಚರ್ಮ ರೋಗಕ್ಕೆ ರಾಮಬಾಣ ಹೇಗೆ ಗೊತ್ತಾ?

ಸಿಎಂ ಸಿದ್ದರಾಮಯ್ಯನವರ ಕಣ್ಸನ್ನೆಗೆ ತಕ್ಕಂತೆ ಸ್ಪೀಕರ್ ಯು.ಟಿ.ಖಾದರ್ ಮಾತ್ರ ಕುಣಿಯುತ್ತಿದ್ದಾರೆ ಎಂದು ನಾವು ಭಾವಿಸಿದ್ದೆವು. ಆದರೆ ಇಡಿ ಪೊಲೀಸ್ ಇಲಾಖೆಯನ್ನು ತಮ್ಮ ಮತ ಬ್ಯಾಂಕ್ ಕ್ರೋಢೀಕರಣಕ್ಕೆ

ಮುಂದಾಗಿದ್ದಾರೆ. ಸಿದ್ದರಾಮಯ್ಯನವರ ಬೆಂಬಲದಿಂದ ಈ ಹಿಂದೆ ಪಿಎಫ್ಐ ಉಗ್ರರು ಹಿಂದು ಕಾರ್ಯಕರ್ತರ ಬರ್ಭರ ಹತ್ಯೆ. ಮಾಡಿರುವುದು ನಮ್ಮ ಕಣ್ಣ ಮುಂದೆ ಇದೆ. ಹಿಂದಿನ ಘಟನೆಯನ್ನು

ಸಿದ್ದರಾಮಯ್ಯ ಸರ್ಕಾರ ಮತ್ತೆ ಪುನರಾವರ್ತನೆ

ಮಾಡಲು ಹೊರಟಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಮತ್ತು ಹೋರಾಟ ರೂಪಿಸುತ್ತೇವೆ ಕೆಜಿಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೆ ನಡೆದ ಗೂಂಡಾ ದಾಳಿ

ಪ್ರಕರಣದ ಆರೋಪಿಗಳ ಮೇಲಿನ ಪ್ರಕರಣವನ್ನು ಕೈ ಬಿಡುವಂತೆ ಶಾಸಕ ತನ್ವೀರ್ ಸೇಠ್ ಬರೆದ ಪತ್ರ ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪೊಲೀಸ್ ಇಲಾಖೆಗೆ

ಬರೆದ ಪತ್ರ ಸಂಪೂರ್ಣವಾಗಿ ಕಾನೂನು ಬಾಹಿರ ಎಂದು ಟೀಕಿಸಿದ್ದಾರೆ.

ಇನ್ನೊಂದು ಟ್ವೀಟ್ನಲ್ಲಿ, ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನ ಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ

ಅಂದು ನಡೆದ ಭೀಬತ್ಸ ಘಟನೆಯನ್ನು ನೆನೆಪು ಮಾಡಿಕೊಳ್ಳಲಿ. ಉಗ್ರ ಮನಸ್ಥಿತಿಯ ವ್ಯಕ್ತಿಗಳಿಗೆ ಅಮಾಯಕರ ಪಟ್ಟಕಟ್ಟಿ ದೇಶವನ್ನು ಸಿರಿಯಾ ಮಾಡುತ್ತೀರಾ ? ಎಂದು ಪ್ರಶ್ನಿಸಿದ್ದಾರೆ.

Exit mobile version