‘ಜಾತಿ ಗಣತಿ’ ವಿರುದ್ಧ ಎಲ್ಲ ಬಲಿಷ್ಠರು ಒಟ್ಟಾಗಿದ್ದಾರೆ: ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

Karnataka :ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಅವರು ಸೋಮವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Sivakumar)ಅವರು ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧಿಸುತ್ತಿದ್ದು, ನೀವು ಬಿಜೆಪಿ ವಿರೋಧಿಸುತ್ತಿದ್ದೀರಿ. ಬಲಿಷ್ಠ ಜಾತಿ ಜನರೆಲ್ಲಾ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ’ ಎಂದು ಅವರು ಹೇಳಿದರು.

ಜಾತಿ ಜನಗಣತಿ (Caste Census) ಕುರಿತು ರಾಜ್ಯ ಸರ್ಕಾರದೊಳಗಿನ ಭಿನ್ನಾಭಿಪ್ರಾಯಗಳ ಬಗ್ಗೆ ಬಿಜೆಪಿ (BJP) ಸದಸ್ಯರು ಪ್ರಶ್ನಿಸಿದಾಗ ಅವರು, ಡಿ.ಕೆ. ಶಿವಕುಮಾರ್ ಅವರ ನಿಲುವನ್ನು ಬಹಿರಂಗವಾಗಿಯೇ ಟೀಕಿಸಿದರು. ‘ಎಲ್ಲ ಬಲಿಷ್ಠ ಜಾತಿಗಳ ಜನರು ಈ ಬಗ್ಗೆ ಒಗ್ಗಟ್ಟಾಗಿದ್ದಾರೆ’ ಎಂದು ಆರೋಪ ಮಾಡಿದರು.

ಹಿಂದುಳಿದ ಸಮುದಾಯಗಳ (ಒಬಿಸಿ) (OBP) ಬಗ್ಗೆ ಕಾಂಗ್ರೆಸ್ (CONGRESS) ತೋರಿಸುವ ಪ್ರೀತಿ ಒಂದು ಪ್ರಹಸನ ಎಂದು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಎರಡು ಮಸೂದೆಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಬಿಜೆಪಿಯ ಹಿರಿಯ ಸಂಸದ ಸುಶೀಲ್ ಕುಮಾರ್(Sunil Kumar) ಮೋದಿ(Modi) ಅವರು ಮಾತನಾಡಿ, ಹೇಳಿದರು. ಜಾತಿ ಜನಗಣತಿ ವಿಚಾರದಲ್ಲಿ ಶಿವಕುಮಾರ್ ಅವರ ನಿಲುವನ್ನು ಉದಾಹರಣೆಯಾಗಿ ಉಲ್ಲೇಖಿಸಿದರು.

ವರದಿಯನ್ನು ಸಾರ್ವಜನಿಕಗೊಳಿಸುವುದರ ವಿರುದ್ಧದ ಮನವಿಗೆ ಉಪಮುಖ್ಯಮಂತ್ರಿ ಸಹಿ ಹಾಕಿದ್ದಾರೆ’ ಎಂದು ಮೋದಿ ಹೇಳಿದ್ದು, ನಿಮ್ಮ ಸರ್ಕಾರ(Government) ಜಾತಿ ಸಮೀಕ್ಷೆ ವರದಿಯನ್ನು ಯಾವಾಗ ಬಹಿರಂಗ ಪಡಿಸುತ್ತದೆ ಎಂಬುದನ್ನು ಖರ್ಗೆಯೇ ಹೇಳಬೇಕು. ಉಪ ಮುಖ್ಯಮಂತ್ರಿಗಳು ಸೇರಿದಂತೆ ಕಾಂಗ್ರೆಸ್ ಶಾಸಕರು ಮತ್ತು ವೀರಶೈವ ಮಹಾಸಭಾದ ಮುಖಂಡರು ಇದನ್ನು ವಿರೋಧಿಸಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇನ್ನು ಎದ್ದು ನಿಂತು ಪ್ರತಿಕ್ರಿಯಿಸಿದ ಖರ್ಗೆ, ‘ಶಿವಕುಮಾರ್ ಮತ್ತು ಬಿಜೆಪಿ(BJP) ಜಾತಿ ಗಣತಿ ವರದಿಗೆ ವಿರುದ್ಧವಾಗಿದೆ’ ಎಂದು ಕಿಡಿಕಾರಿದ್ದು, ಅವರೂ ವಿರೋಧಿಸುತ್ತಿದ್ದಾರೆ, ನೀವೂ ವಿರೋಧಿಸುತ್ತಿದ್ದೀರಿ. ಈ ವಿಷಯದಲ್ಲಿ ಇಬ್ಬರೂ ಒಂದೇ, ಇದು ಜಾತಿಯ ಲಕ್ಷಣ. ಬಲಿಷ್ಠ ಜಾತಿಯ ಜನರು ಆಂತರಿಕವಾಗಿ ಒಗ್ಗಟ್ಟಾಗುತ್ತಾರೆ’ ಎಂದರು.

ಭವ್ಯಶ್ರೀ ಆರ್ ಜೆ

Exit mobile version