ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

Allahabad : ಕೆಲವರು ತಮ್ಮನ್ನು ಬಡವರೆಂದು ಕರೆದುಕೊಂಡು ಸಹಾನುಭೂತಿ (Kharge Replies To Modi) ಪಡೆಯಲು ಪ್ರಯತ್ನಿಸುತ್ತಿದ್ದಾರೆ. ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ,

ಆದರೆ ನಾನು ಅಸ್ಪೃಶ್ಯರಲ್ಲಿ ಒಬ್ಬ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (Kharge Replies To Modi) ವಿರುದ್ದ  ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನ (Gujarat) ನರ್ಮದಾ ಜಿಲ್ಲೆಯ ದೇಡಿಯಾಪಾಡಾದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವತಃ ನಾನು ಅಸ್ಪೃಶ್ಯ ಜಾತಿಯಿಂದ ಬಂದವನು. 

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.  

ನೀವು ಸಹಾನುಭೂತಿಗಾಗಿ  ಎಷ್ಟು ಬಾರಿ ಸುಳ್ಳು ಹೇಳುತ್ತೀರಿ? ಎಂದು ಕಾಂಗ್ರೆಸ್‌ ನಾಯಕ ಖರ್ಗೆ ಅವರು ಮೋದಿ ಅವರನ್ನು ಪ್ರಶ್ನಿಸಿದರು. ಇದಕ್ಕೂ ಮೊದಲು ಖೇಡಾದಲ್ಲಿ ಬಿಜೆಪಿ(BJP) ರ್ಯಾಲಿಯಲ್ಲಿ ಖರ್ಗೆಯನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು,

ಇದನ್ನೂ ಓದಿ : https://vijayatimes.com/chetan-over-reservation-category/

ಇಂದು ಕಾಂಗ್ರೆಸ್ ಅಧ್ಯಕ್ಷರು ಗುಜರಾತ್‌ನಲ್ಲಿದ್ದಾರೆ. ಅವರನ್ನು ಇಲ್ಲಿಗೆ ಕಳುಹಿಸಿದ್ದು ಸೋನಿಯಾ ಗಾಂಧಿ. ಇಲ್ಲಿಗೆ ಬಂದು ಮೋದಿಗೆ ಅವರ ತಾಕತ್ತು ತೋರಿಸುತ್ತೇನೆ ಎಂದು ಹೇಳಿದರು.

ನನಗೆ ಯಾವುದೇ ಸ್ಥಾನಮಾನವಿಲ್ಲ, ನಾನು ಸಾಮಾನ್ಯ ಮನುಷ್ಯನಾಗಿ ಹುಟ್ಟಿದ್ದೇನೆ. ಅವರು ನನ್ನನ್ನು ಹೇಗೆ ತೋರಿಸುತ್ತಾರೆ ನೋಡೋಣ ಎಂದು ಪ್ರಧಾನಿ ಹೇಳಿದ್ದರು.

https://fb.watch/h4kgi5sotp/ ಬೆಳಗಾವಿ : ಮನೆಕಟ್ಟಿಕೊಡುವ ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿರುವ ಸರ್ಕಾರ!

ಪ್ರಧಾನಿ ಮೋದಿಯವರ ಈ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ(Mallikarjun Kharge) ಅವರು, ನಾನು ಅಸ್ಪೃಶ್ಯರಲ್ಲಿ ಒಬ್ಬ ಎಂದು ಟಾಂಗ್‌ ನೀಡಿದ್ದಾರೆ. ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು,

ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ರಾಹುಲ್‌ ಗಾಂಧಿ ಅನುಪಸ್ಥಿತಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಅವರು ಗುಜರಾತ್‌ನಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
Exit mobile version