ಖ್ಯಾತ ವೈಮಾನಿಕ ವಿಜ್ಞಾನಿ ನಿಧನ

ನವದೆಹಲಿ, ಡಿ. 15: ಹಿರಿಯ ವಿಜ್ಞಾನಿ ಪ್ರೊ. ರೊದ್ದಂ ನರಸಿಂಹ ಅವರ ನಿಧನವು ವಿಜ್ಞಾನ ಮತ್ತು ತಂತ್ರಜ್ಞಾನದ ಜಗತ್ತಿಗೆ ತುಂಬಲಾರದ ನಷ್ಟ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಹೇಳಿದ್ದಾರೆ. ರೊದ್ದಂ ನರಸಿಂಹ (87) ಅವರು ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

‘ನರಸಿಂಹ ಅವರು ವೈಮಾನಿಕ ವಿಜ್ಞಾನ, ಫ್ಲೂಯಿಡ್‌ ಡೈನಮಿಕ್ಸ್‌ ಕ್ಷೇತ್ರದಲ್ಲಿ ಮಹತ್ತರದ ಸಾಧನೆಯನ್ನು ಮಾಡಿದ್ದಾರೆ. ಅಲ್ಲದೆ ಅವರು ಪದ್ಮಭೂಷಣ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. 1933ರ ಜುಲೈ 20ರಂದು ಅವರು ಬೆಂಗಳೂರಿನಲ್ಲಿ ಜನಿಸಿದ ಅವರು, ಐಐಎಸ್​ಸಿನಲ್ಲಿ ಅವರು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ನ್ಯಾಷನಲ್ ಸ್ಪೇಸ್ ಲ್ಯಾಬೋಲೇಟರಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಲ್ಲದೇ, ಬೆಂಗಳೂರಿನ ಜವಾಹರಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಅಧ್ಯಕ್ಷ ರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2013ರಲ್ಲಿ ಅವರಿಗೆ ಪದ್ಮವಿಭೂಷಣ ಪುರಸ್ಕಾರ ನೀಡಿ ಸರ್ಕಾರ ಗೌರವಿಸಿತ್ತು ಎಂದು ‍ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

Exit mobile version