ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ. ಅಪಘಾತಗಳನ್ನೂ ದುರಂತಗಳನ್ನೂ ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು (Kishore slams Modi)ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು

ಇನ್ನಾದರೂ ನಿಭಾಯಿಸಲಿ ಎಂದು ನಟ ಕಿಶೋರ್ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ (Kishore slams Modi) ವಿರುದ್ದ ಕಿಡಿಕಾರಿದ್ದಾರೆ.

Kishor

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ರೈಲ್ವೆ ಮಂತ್ರಿ ಈಗ ಹೋಗಿ ನಿಂತು ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವ ನಾಟಕ ಬಿಟ್ಟು, ಇಂದಿಗೂ ಖಾಲಿಯಿರುವ 3 ಲಕ್ಷಕ್ಕೂ ಹೆಚ್ಚು ರೈಲ್ವೆ

ನೌಕರರನ್ನು 1500ಕ್ಕೂ ಹೆಚ್ಚು ರೈಲ್ವೆ ಸುರಕ್ಷತೆಗೆ ಬೇಕಾದ ಖಾಲಿಯಾಗೇ ಉಳಿದಿರುವ ಹುದ್ದೆಗಳನ್ನು ತುಂಬಿ, ಹಳಿ ನಿರ್ವಹಣೆ ಸಮಪರ್ಕವಾಗಿಸಬಹುದಿತ್ತೆ? ಎಂದು ನಟ ಕಿಶೋರ್ ಪ್ರಶ್ನೆ ಮಾಡಿದ್ದಾರೆ.

ಇದನ್ನು ಓದಿ: ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

‘ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ಕವಚ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತೆ? ಹಾಗೆ ನೋಡಿದರೆ ಕಳೆದ

ಆರೇಳು ವರ್ಷಗಳಲ್ಲಿ ಸಾವಿರಕ್ಕೂ ಹೆಚ್ಚು ರೈಲುಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, 2021ರ ಸಿಎಜಿ ರಿಪೋರ್ಟನ್ನು ಕಡೆಗಣಿಸಿ, ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ

ಈ ದುರಂತಕ್ಕೆ ಕಾರಣವಲ್ಲವೆ?’ ಎಂದು ಪ್ರಶ್ನೆ ಮಾಡಿದ್ದಾರೆ.

Narendra Modi

ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ, ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ. ಎಂತ ವಿಪರ್ಯಾಸ. ಇಲ್ಲಿ ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ. ಅಪಘಾತಗಳನ್ನೂ ದುರಂತಗಳನ್ನೂ

ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ ಎಂದು ಮೋದಿ ಸರ್ಕಾರದ ವಿರುದ್ದ ನಟ ಕಿಶೋರ್ ನೇರವಾಗಿ ಕಿಡಿಕಾರಿದ್ದಾರೆ.

ಇತ್ತೀಚೆಗಷ್ಟೇ ಹಿಜಾಬ್ ವಿಷಯದಲ್ಲಿ ಬಿಜೆಪಿಯನ್ನು ಟೀಕಿಸಿದ್ದ ನಟ ಕಿಶೋರ್, ಹಿಜಾಬ್ ನಿಷೇಧ ಮಾಡುವ ಮೂಲಕ ಬಿಜೆಪಿ ಮುಸ್ಲಿಂ ಹೆಣ್ಣು ಮಕ್ಕಳ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುತ್ತಿದೆ.

ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಟೀಕಿಸಿದ್ದರು.

Exit mobile version