ಅಸ್ಪೃಷ್ಯತೆಯ ಆಚರಣೆಯಲ್ಲಿ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? : ನಟ ಕಿಶೋರ್

Bengaluru : ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ (Kishore Slams Politics) ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ?

ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ? ಎಂದು ಕನ್ನಡದ ಖ್ಯಾತ ನಟ ಕಿಶೋರ್‌ (Kishore Slams Politics) ಪ್ರಶ್ನಿಸಿದ್ದಾರೆ.

“ಕಾಂತಾರ” (Kantara) ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ತಮ್ಮ ಫೇಸ್‌ಬುಕ್‌ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಸಿ ಕಳಕಳಿಯ ಮನವಿ.

https://youtu.be/sfkpJuX5qVs ಸಿಹಿ-ಕಹಿ ಸತ್ಯ! ಸ್ವೀಟ್ ಅಲ್ಲ ರೋಗಗಳ ಕೂಟ!

ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ?? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : https://vijayatimes.com/green-airport-in-india/


ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ.

ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ, ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು.

ಕೇವಲ ಓಟಿಗಾಗಿ ಪಟೇಲ್, ಗಾಂಧಿ, ಬೋಸ್, ನೆಹ್ರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ,

ಬೈಯ್ಯುವ, ರಾಷ್ಟ್ರಗೀತೆ, ಧ್ವಜ, ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನ ಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಎಂದು ಹೇಳಿದ್ದಾರೆ.
Exit mobile version