ಸಾಯಿಪಲ್ಲವಿಯಿಂದ ಈ ಮಾಧ್ಯಮದವರು ಕಲಿಯಿವುದು ಸಾಕಷ್ಟಿದೆ : ನಟ ಕಿಶೋರ್!

ನಟಿ(Actress) ಸಾಯಿಪಲ್ಲವಿ(Sai Pallavi) ವಿವಾದಕ್ಕೆ ಇದೀಗ ಕನ್ನಡದ ನಟ(Kannada Actor) ಕಿಶೋರ್(Kishore) ಅವರು ಎಂಟ್ರಿ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ(Social Media) ಪೋಸ್ಟ್‍ವೊಂದನ್ನು ಬರೆದುಕೊಂಡಿರುವ ಕಿಶೋರ್ ಅವರು, ಸಾಯಿಪಲ್ಲವಿ ಬೆಂಬಲಕ್ಕೆ ನಿಂತಿದ್ದಾರೆ.

ಬಾಯಿ ಮುಚ್ಚಿಸುವುದು ಸರ್ಕಾರದ ಕೆಲಸವಲ್ಲವೇ ಮಾಧ್ಯಮಗಳು(Media) ಯಾವಾಗಿಂದ ಈ ಕೆಲಸಕ್ಕೂ ಗುತ್ತಿಗೆ ಪಡೆದವು? ಸಿನಿಮಾದವರಿಗೆ ಜನಪರ ಕಾಳಜಿ ಇರುವುದು ತಪ್ಪೇ? ಎಂದು ಪ್ರಶ್ನಿಸಿದ್ದಾರೆ. ಕಾರಣ ಏನೇ ಆದರೂ ಕೊಲೆ ಮಾಡುವ ಮನಸ್ಥಿತಿ ಒಂದೇ ಹಾಗೂ ಅದು ತಪ್ಪು ಎಂದರೆ ತಪ್ಪೇ? ನಮ್ಮಲ್ಲಿನ ಅಲ್ಪಸಂಖ್ಯಾತರನ್ನು ನಾವು ಹೇಗೆ ಸಮಾನರಾಗಿ ಬದುಕಲು ಬಿಡುತ್ತೇವೆನ್ನುವುದು ನಮ್ಮ ಸಮಾಜದ ಸ್ವಾಸ್ಥ್ಯದ, ಸಭ್ಯತೆಯ ಅಳತೆಗೋಲು ಎನ್ನುವುದು ತಪ್ಪೇ?

ಜೀವಕ್ಕೆ ಜಾತಿ – ಧರ್ಮಗಳ ಹಂಗಿಲ್ಲವೆಂದರೆ ತಪ್ಪೇ? ಒಬ್ಬರ ಆಹಾರ ಕ್ರಮದ ಮೇಲೆ ನಿಷೇಧ ಹೇರಿ ಆಹಾರವನ್ನೂ ದ್ವೇಷದ ಸಾಧನವಾಗಿ ಬಳಸಬಾರದೆಂದರೆ ತಪ್ಪೇ? ಮಾನವೀಯತೆಯ ನಿಲುವಿನ ಸಾಯಿಪಲ್ಲವಿಯಿಂದ ಈ ಮಾಧ್ಯಮದವರು ಕಲಿಯಿವುದು ಸಾಕಷ್ಟಿದೆ . ಸಾಮಾಜಿಕ ಬದ್ಧತೆಯನ್ನು ಧರ್ಮ ಅಂಧತೆಯ ಕನ್ನಡಿಯಲ್ಲಿ ನೋಡುವ ಮಾಧ್ಯಮ ಗೋಕಾಕ್ ಚಳುವಳಿಯ(Gokak Challuvalli) ಕಾಲದಲ್ಲಿದ್ದಿದ್ದರೆ ರಾಜಕುಮಾರ್(Dr Rajkumar) ರವರ ಬಾಯನ್ನೂ ಮುಚ್ಚಿಸುತ್ತಿತ್ತೇನೊ ಎಂದು ಮಾದ್ಯಮಗಳ ವಿರುದ್ದ ಕಿಡಿಕಾರಿದ್ದಾರೆ.

Exit mobile version