• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

Self-Execution ಯೋಜನೆ ಉಲ್ಲಂಘನೆಗೆ ಬ್ರೇಕ್: ಬಿಲ್ಡರ್‌ಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
Self-Execution ಯೋಜನೆ ಉಲ್ಲಂಘನೆಗೆ ಬ್ರೇಕ್: ಬಿಲ್ಡರ್‌ಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ
0
SHARES
2
VIEWS
Share on FacebookShare on Twitter

ವಿದ್ಯುತ್ ನಿಯಮ ಉಲ್ಲಂಘನೆಗೆ ಬ್ರೇಕ್: ಬಿಲ್ಡರ್‌ಗಳಿಗೆ (kj George warns builders) ಸರ್ಕಾರದ ಖಡಕ್ ಸಂದೇಶ

ಬೆಂಗಳೂರು ಸೇರಿದಂತೆ ಹಲವು ಯೋಜನೆಗಳಲ್ಲಿ ಕೆಇಆರ್‌ಸಿ ಮತ್ತು ಕೆಪಿಟಿಸಿಎಲ್ ನಿಯಮ ಉಲ್ಲಂಘನೆ ಪತ್ತೆ

ಅನುಮೋದಿತ ವಿದ್ಯುತ್ ಲೋಡ್ಗಿಂತ ಹೆಚ್ಚು ಬಳಕೆ ಮಾಡಿದ ಯೋಜನೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮಕ್ಕೆ ಸಜ್ಜು

Bengaluru : ಸೆಲ್ಫ್ ಎಕ್ಸಿಕ್ಯೂಷನ್ (Self-Execution-SE) ಯೋಜನೆಗಳಡಿ ಕಡ್ಡಾಯವಾಗಿ (kj George warns builders) ನಿರ್ಮಿಸಬೇಕಾದ ವಿದ್ಯುತ್ ಮೂಲಸೌಕರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದ ಬಿಲ್ಡರ್‌ಗಳು ಹಾಗೂ ಅಭಿವೃದ್ಧಿ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಹಾಗೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ನಿಯಮಗಳನ್ನು ಉಲ್ಲಂಘಿಸುವ ಯಾವುದೇ ಯೋಜನೆಗೆ ವಿನಾಯಿತಿ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

kj George warns builders

ಸಾರ್ವಜನಿಕರಿಗೆ ನಿರಂತರ ಹಾಗೂ ಸುರಕ್ಷಿತ ವಿದ್ಯುತ್ ಪೂರೈಕೆ ಒದಗಿಸುವ ಉದ್ದೇಶದಿಂದ (kj George warns builders) ಈ ಕ್ರಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2006ರ ಜನವರಿ 12ರಂದು ಜಾರಿಯಾದ ಕೆಇಆರ್‌ಸಿ ನಿಯಮಾವಳಿಯ 3.2.4ನೇ ಕಲಂ ಪ್ರಕಾರ, 7.5 ಎಂವಿಎ (MVA) ಗಿಂತ ಹೆಚ್ಚಿನ ಮಂಜೂರಾದ ವಿದ್ಯುತ್ ಲೋಡ್ ಹೊಂದಿರುವ ವಸತಿ, ವಾಣಿಜ್ಯ ಹಾಗೂ ಮಿಶ್ರ ಬಳಕೆಯ ಯೋಜನೆಗಳು ಶಾಶ್ವತ ವಿದ್ಯುತ್ ಸಂಪರ್ಕ ಪಡೆಯುವ ಮುನ್ನ ತಮ್ಮ ಸ್ವಂತ ವೆಚ್ಚದಲ್ಲಿ ಉಪಕೇಂದ್ರ ಸೇರಿದಂತೆ ಅಗತ್ಯ ವಿದ್ಯುತ್ ಮೂಲಸೌಕರ್ಯವನ್ನು ನಿರ್ಮಿಸುವುದು ಕಡ್ಡಾಯವಾಗಿದೆ ಎಂದು ವಿವರಿಸಿದರು.

ದೊಡ್ಡ ಪ್ರಮಾಣದ ಕಟ್ಟಡಗಳು ನಿರ್ಮಾಣವಾಗುವಾಗ ಅವುಗಳಿಗೆ ಅಗತ್ಯವಿರುವ ವಿದ್ಯುತ್ ವ್ಯವಸ್ಥೆಯೂ ಸಮಾನಾಂತರವಾಗಿ ಅಭಿವೃದ್ಧಿಯಾಗಬೇಕು ಎಂಬುದೇ ಈ ನಿಯಮದ ಮುಖ್ಯ ಉದ್ದೇಶವಾಗಿದೆ.

ಇದರಿಂದ ಭವಿಷ್ಯದಲ್ಲಿ ನಗರ ಪ್ರದೇಶಗಳಲ್ಲಿ ವಿದ್ಯುತ್ ಕೊರತೆ ಹಾಗೂ ಒತ್ತಡದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಈವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸುಮಾರು 45 ಯೋಜನೆಗಳು ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದ್ದು, ಸಂಬಂಧಪಟ್ಟ ಬಿಲ್ಡರ್‌ಗಳು ಹಾಗೂ ಸಂಸ್ಥೆಗಳಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಕೆಇಆರ್‌ಸಿ ನಿಯಮಗಳ ಅನ್ವಯ ಶೇ.10ರಷ್ಟು ದಂಡ ವಿಧಿಸುವ ಪ್ರಕ್ರಿಯೆಯೂ ಆರಂಭವಾಗಿದೆ.

ಆರಂಭದಲ್ಲಿ 7.5 ಎಂವಿಎಗಿಂತ ಕಡಿಮೆ ವಿದ್ಯುತ್ ಲೋಡ್‌ಗೆ ಅನುಮೋದನೆ ಪಡೆದು, ನಂತರ ಅಗತ್ಯ ಮೂಲಸೌಕರ್ಯ ನಿರ್ಮಿಸದೇ ಮಂಜೂರಾದ ಮಿತಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡುತ್ತಿರುವ ಹಲವು ಯೋಜನೆಗಳನ್ನು ಕೆಪಿಟಿಸಿಎಲ್ ಗುರುತಿಸಿದೆ.

ಇಂತಹ ಪ್ರಕರಣಗಳ ವಿರುದ್ಧವೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ವಿಷಯವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ತರಲಾಗಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಜೂರಾದ ವಿದ್ಯುತ್ ಲೋಡ್ ಮೀರಿದ್ದರೂ ಕಡ್ಡಾಯ ವಿದ್ಯುತ್ ಮೂಲಸೌಕರ್ಯವನ್ನು ನಿರ್ಮಿಸದ ಅಪಾರ್ಟ್‌ಮೆಂಟ್‌ಗಳು (Apartment) , ಟೌನ್‌ಶಿಪ್‌ಗಳು, ಲೇಔಟ್‌ಗಳು ಹಾಗೂ ಇತರೆ ಅಭಿವೃದ್ಧಿ ಯೋಜನೆಗಳ ಸಮಗ್ರ ಪರಿಶೀಲನೆ ನಡೆಸುವಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ.

ಈ ಪರಿಶೀಲನಾ ವರದಿಯ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

ವಿದ್ಯುತ್ ಮೂಲಸೌಕರ್ಯವನ್ನು ನಿರ್ಲಕ್ಷಿಸಿ ನಿರ್ಮಾಣ ಕಾರ್ಯಗಳನ್ನು ಮುಂದುವರಿಸುವುದು ಸಾರ್ವಜನಿಕ ಸುರಕ್ಷತೆ ಹಾಗೂ ನಗರಗಳ ಸುಸ್ಥಿರ ಅಭಿವೃದ್ಧಿಗೆ ಧಕ್ಕೆ ಉಂಟುಮಾಡಬಹುದು ಎಂದು ಸಚಿವ ಕೆ.ಜೆ. ಜಾರ್ಜ್ ಅಭಿಪ್ರಾಯಪಟ್ಟರು.

ಆದ್ದರಿಂದ ಎಲ್ಲ ಬಿಲ್ಡರ್‌ಗಳು ಮತ್ತು ಅಭಿವೃದ್ಧಿ ಸಂಸ್ಥೆಗಳು ಕೆಇಆರ್‌ಸಿ ಹಾಗೂ ಕೆಪಿಟಿಸಿಎಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಮನವಿ ಮಾಡಿದರು.

ನಿಯಮ ಪಾಲನೆಯಿಂದ ಮಾತ್ರ ಹೊಸ ವಸತಿ ಮತ್ತು ವಾಣಿಜ್ಯ ಯೋಜನೆಗಳಿಗೆ ನಿರಂತರ, ವಿಶ್ವಾಸಾರ್ಹ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಖಚಿತವಾಗಲಿದ್ದು, ನಗರ ಮೂಲಸೌಕರ್ಯದ ಮೇಲಿನ ಒತ್ತಡವನ್ನೂ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು.

ಸರ್ಕಾರ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಇಂತಹ ಉಲ್ಲಂಘನೆಗಳ ವಿರುದ್ಧ ನಿರಂತರ ನಿಗಾ ವಹಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಪುನರುಚ್ಚರಿಸಿದರು.

Tags: K.J. GeorgeschemeSelf-Execution

Related News

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

August 19, 2026
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

August 19, 2026
ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ
ಪ್ರಮುಖ ಸುದ್ದಿ

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

August 18, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು
ದೇಶ-ವಿದೇಶ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು

August 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.