KMF : ಹಾಲಿನ ದರ 3ರೂ., ತುಪ್ಪದ ಬೆಲೆ ಹೆಚ್ಚಳ ಮಾಡಲು ಕೆಎಂಎಫ್‌ ನಿರ್ಧಾರ!

Bengaluru : ಪ್ರತಿ ಲೀಟರ್ ಹಾಲಿಗೆ(Milk) 3 ರೂಪಾಯಿ ಅನ್ನು ಹೆಚ್ಚಳ ಮಾಡಲು ಕರ್ನಾಟಕ ರಾಜ್ಯ(Karnataka State) ಹಾಲು ಒಕ್ಕೂಟ ನಿರ್ಧರಿಸಿದೆ. ಅಗತ್ಯ ವಸ್ತುಗಳ ಬೆಲೆ ಈಗಾಗಲೇ ಹೆಚ್ಚಳವಾಗಿದ್ದು, ಇದರ ನಡುವೆ ಈಗ ಹಾಲಿನ ದರವು ಕೂಡಾ ಹೆಚ್ಚಳವಾಗಿದೆ.

ಕರ್ನಾಟಕ ರಾಜ್ಯ ಹಾಲು ಒಕ್ಕೂಟ ಈಗಾಗಲೇ ನಷ್ಟ ಅನುಭವಿಸುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಹಾಲಿನ ದರವನ್ನು ಹೆಚ್ಚಳ ಮಾಡಬೇಕೆಂದು ಕೆಎಂಎಫ್‌(KMF) ಸರ್ಕಾರವನ್ನು ಒತ್ತಾಯಿಸುತ್ತಿದೆ. ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ ಅನೇಕ ತಿಂಗಳಿಂದ ಕೆಎಂಎಫ್ ಸರ್ಕಾರಕ್ಕೆ ಮನವಿ ಮಾಡುತ್ತಿದ್ದು,

ರಾಜ್ಯ ಬಿಜೆಪಿ ಸರ್ಕಾರ(BJP Government) ಈ ಕುರಿತು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಇದೀಗ ಅನಿವಾರ್ಯವಾಗಿ ರಾಜ್ಯ ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಇನ್ನೊಂದೆಡೆ ಕೆಎಂಎಫ್ ತನಗೆ ಇರುವ ಅಧಿಕಾರವನ್ನು ಬಳಸಿಕೊಂಡು ಹಾಲಿನ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೆಎಂಎಫ್ ವಾರ್ಷಿಕ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕರ್ನಾಟಕ ರಾಜ್ಯ ಹಾಲು ಒಕ್ಕೂಟದ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಬೆಂಬಲ ನೀಡಿವೆ.

ಇದನ್ನೂ ಓದಿ : https://vijayatimes.com/state-bjp-tweets-over-congress-3/

ಹೀಗಾಗಿಯೇ ಕೆಎಂಎಫ್ ತನಗೆ ಇರುವ ಅಧಿಕಾರವನ್ನು ಬಳಸಿಕೊಂಡು ಹಾಲಿನ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಇನ್ನು ಹೆಚ್ಚಳ ಮಾಡುವ ಮೂರು ರೂಪಾಯಿಗಳನ್ನು ರೈತರಿಗೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಹಾಲು ಒಕ್ಕೂಟ ಹೇಳಿದೆ.

Exit mobile version