vijaya times advertisements
Visit Channel

`ಟಿಪ್ಪು ಶಿಷ್ಯ ಸಿದ್ದು ಖಾನ್, ಗೋ ಬ್ಯಾಕ್ʼ ; ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್!

Siddaramaiah

ಮಡಿಕೇರಿ : ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವಿರುದ್ದ ಯುವ ಬಿಜೆಪಿ ಕಾರ್ಯಕರ್ತರು(BJP Workers) ಕಪ್ಪುಪಟ್ಟಿ ಪ್ರದರ್ಶಿಸಿ, `ಟಿಪ್ಪು ಶಿಷ್ಯ ಸಿದ್ದು ಖಾನ್, ಗೋ ಬ್ಯಾಕ್ʼ ಎಂದು ಪೋಸ್ಟರ್ ಪ್ರದರ್ಶಿಸಿ ಧಿಕ್ಕಾರ ಕೂಗಿದ ಘಟನೆ ನಡೆದಿದೆ.
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊಡಗಿಗೆ(Kodagu) ಭೇಟಿ ನೀಡಿದ್ದಾರೆ.

siddaramaiah

ಈ ವೇಳೆ ಸಿದ್ದರಾಮಯ್ಯ ಕಾರಿಗೆ ಘೇರಾವ್ ಹಾಕಿ, ಕಪ್ಪುಪಟ್ಟಿ ಪ್ರದರ್ಶಿಸಿ, ಧಿಕ್ಕಾರ ಕೂಗಿದ ಯುವ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಆಕ್ರೋಶ ಹೊರಹಾಕಿದ್ಧಾರೆ. “ಸ್ವಾತಂತ್ರ್ಯ ದಿನದಂದು ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಬೇಕು..?” ಎಂದು ಇತ್ತೀಚೆಗೆ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಈ ಹೇಳಿಕೆ ವಿರುದ್ದ ಯುವ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ.


ಟಿಪ್ಪುವಿನ ಫೋಟೋ ಎಲ್ಲಿ ಬೇಕಾದರೂ ಹಾಕಬಹುದು ಆದರೆ ಸಾವರ್ಕರ್ ಫೋಟೋ ಹಾಕಲು ಮಾತ್ರ ಸಿದ್ದರಾಮಯ್ಯ ಅವರಿಗೆ ಧರ್ಮ ಅಡ್ಡ ಬರುತ್ತದೆ. ಓಲೈಕೆ ರಾಜಕಾರಣದ ಪರಮಾವಧಿಯಿದು. ಜಿಹಾದಿ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ(Congress Party) ಬೆಳೆಸುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿ. ಸಿದ್ದರಾಮಯ್ಯ ಅವರು ಸ್ವತಂತ್ರ ಭಾರತದ ಜಿನ್ಹಾ. ಮುಸ್ಲಿಂ ಏರಿಯಾಗಳನ್ನು ಈ ದೇಶದ ಅಖಂಡತೆಯಿಂದ ಛಿದ್ರಗೊಳಿಸುವುದಕ್ಕೆ ಹೊರಟಿದ್ದೀರಾ?

Siddaramaiah

ಮತ್ತೊಮ್ಮೆ ದೇಶ ವಿಭಜಿಸುವ ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಸಿದ್ದರಾಮಯ್ಯ ಬಾಯಿಂದ ಬಹಿರಂಗವಾಗಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಬಾರದಿತ್ತು ಎನ್ನಲು ಸಿದ್ದರಾಮಯ್ಯ ಯಾರು? ಮುಸ್ಲಿಂ ಏರಿಯಾಗಳು ಈ ದೇಶದ ಭಾಗವಲ್ಲವೇ ಅಥವಾ ನಿಮ್ಮ ನಾಯಕತ್ವದಲ್ಲಿ ಅವರಿಗೆ ಸ್ವಾಯತ್ತತೆ ನೀಡಲಾಗಿದೆಯೋ? ಎಂದು ಬಿಜೆಪಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿತ್ತು.

Latest News

Paneer
ಆರೋಗ್ಯ

ರುಚಿಯಷ್ಟೇ ಅಲ್ಲ, ಆರೋಗ್ಯಕ್ಕೂ ವರದಾನ ನಾವು ಪ್ರತಿದಿನ ಬಳಸುವ ಪನೀರ್

ಪನೀರ್ ಕೇವಲ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ, ನಮ್ಮ ಆರೋಗ್ಯದ ರಕ್ಷಣೆಯಲ್ಲಿ ಕೂಡ ಇದರ ಪ್ರಯೋಜನಗಳು ಅಪಾರ. ಆದರೆ ಹೆಚ್ಚಿನವರಿಗೆ ಇದರ ಬಗ್ಗೆ ಅರಿವೇ ಇಲ್ಲ.

ದೇಶ-ವಿದೇಶ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಬೆಂಗಾವಲಿಗೆ 42 ಕಾರುಗಳು‌ ; ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

ಜನಸಾಮಾನ್ಯರ ಪಕ್ಷ ಎಂದೇ ಹೇಳಿಕೊಳ್ಳುವ ಆಮ್‌ ಆದ್ಮಿ ಪಕ್ಷದ ನಾಯಕರು ಈ ರೀತಿಯಾಗಿ ಸಾಮಾನ್ಯ ಜನರ ತೆರಿಗೆ(Tax) ಹಣವನ್ನು ದುಂದುವೆಚ್ಚ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Mallikarjun Kharge
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಚಿತ್ತ ಕಾಂಗ್ರೆಸ್ ಅಧ್ಯಕ್ಷ ಸ್ಥಾನದತ್ತ ; ಅಧ್ಯಕ್ಷ ಸ್ಥಾನ ಬಹುತೇಕ ಖಚಿತ

ಈ ರಾಜೀನಾಮೆಯನ್ನು ಸೋನಿಯಾ ಗಾಂಧಿ ಅವರು ಅಂಗೀಕರಿಸುವ ಸಾಧ್ಯತೆ ಇದ್ದು, ಹೊಸ ರಾಜ್ಯಸಭಾ ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

PFI
ದೇಶ-ವಿದೇಶ

ಬಂಧಿತ PFI ಕಾರ್ಯಕರ್ತರನ್ನು 21 ದಿನಗಳ ಕಸ್ಟಡಿಗೆ ಕಳುಹಿಸಿದ NIA ಕೋರ್ಟ್!

ಬಂಧಿತರ ಮೇಲೆ ಭಯೋತ್ಪಾದನೆಗೆ ಹಣಕಾಸಿನ ನೆರವು ಒದಗಿಸಿರುವ ಮತ್ತು ಹಿಂದೂ ಕಾರ್ಯಕರ್ತರನ್ನು ಹತ್ಯೆ(Murder) ಮಾಡಿರುವ ಆರೋಪವನ್ನು ಹೊರಿಸಲಾಗಿದೆ.