ಕೊಡಗು ಅ 28 : ಕೊಡಗು ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ 32 ವಿದ್ಯಾರ್ಥಿಗಳಿಗೆ ಕೋವಿಡ್-19 ಪಾಸಿಟಿವ್(COVID-19 Positive) ಬಂದಿದೆ. ಒಂದು ವಾರದ ಹಿಂದೆ ಶಾಲೆಯ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಲ್ಲಿ 10 ಹೆಣ್ಣು ಮಕ್ಕಳು ಮತ್ತು 22 ಗಂಡು ಮಕ್ಕಳನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಜಿಲ್ಲೆಯ ಮಡಿಕೇರಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. 10 ವಿದ್ಯಾರ್ಥಿಗಳಲ್ಲಿ ರೋಗಲಕ್ಷಣಗಳನ್ನು ಹೊಂದಿದ್ದರೆ, 22 ವಿದ್ಯಾರ್ಥಿಗಳು ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲ. ಶಾಲೆಯ ಒಬ್ಬ ಸಿಬ್ಬಂದಿಗೆ ಕೂಡ ಕೊರೋನಾ ಪಾಸಿಟಿವ್ ಲಕ್ಷಣಗಳು ಗೋಚರಿಸಿದೆ.
ಸಧ್ಯ ಇವರೆಲ್ಲರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯಲ್ಲಿ ಒಟ್ಟು 270 ವಿದ್ಯಾರ್ಥಿಗಳಿದ್ದು, ಅವರೆಲ್ಲರಿಗೂ ಕೋವಿಡ್ 19 ಪರೀಕ್ಷೆ ಮಾಡಲಾಗಿದೆ.
ಜಿಲ್ಲಾಧಿಕಾರಿಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇಂದು ಶಾಲೆಗೆ ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹೆಚ್ಚಿನ ಸೋಂಕು ತಡೆಗಟ್ಟಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.