• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ನಿವೃತ್ತಿ: ಬಿಸಿಸಿಐ ಮನವಿಗೆ ಬಗ್ಗದ ಕಿಂಗ್

Shameena Mulla by Shameena Mulla
in Sports
ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ನಿವೃತ್ತಿ: ಬಿಸಿಸಿಐ ಮನವಿಗೆ ಬಗ್ಗದ ಕಿಂಗ್
0
SHARES
20
VIEWS
Share on FacebookShare on Twitter
  • ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ನಿವೃತ್ತಿ
  • ಕಿಂಗ್ ವಿರಾಟ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯ‌
  • ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಅಧಿಕೃತವಾಗಿ ನಿವೃತ್ತಿ ‌

CRICKET : ಭಾರತ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ (Kohli retire from Test cricket) ಯುಗಾಂತ್ಯವಾಗಿದೆ. ದಶಕಗಳ ಕಾಲ ಟೀಮ್ ಇಂಡಿಯಾ ಪರ ಆಡಿದ್ದ ಈ ಇಬ್ಬರು ಆಟಗಾರರು ಇನ್ಮುಂದೆ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

ಇದಕ್ಕೂ ಮುನ್ನ 2024ರ ಟಿ20 ವಿಶ್ವಕಪ್​ ಬೆನ್ನಲ್ಲೇ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿದ್ದರು.

Kohli retire

ಇದೀಗ ಟೆಸ್ಟ್​ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದಾರೆ.ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ (Kohli retire from Test cricket) ಮುನ್ನ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಹಿಟ್​ಮ್ಯಾನ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದೀಗ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿರುವುದಾಗಿ ತಿಳಿಸಿದ್ದಾರೆ.

ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಪರ ರೋ-ಕೊ ಜೋಡಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಸಹ ಖಚಿತವಾಗಿದೆ.

ಇತ್ತ ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಬಿಸಿಸಿಐ ಭಾರತ ಟೆಸ್ಟ್ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಿಕೊಂಡಿದೆ. ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ.

2024-25ರ ಬಾರ್ಡರ್- ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು. ನಂತರದ ಕೊನೆಯ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕೇವಲ 85 ರನ್ ಗಳಿಸಲು ಶಕ್ತರಾದರು.

ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ವಿರಾಟ್‌ ಕೊಹ್ಲಿ ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ತಿಳಿಸಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು.

ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಕ್ಯಾಪ್ ಧರಿಸಿ 14 ವರ್ಷಗಳು ಕಳೆದಿವೆ. ಪ್ರಾಮಾಣಿಕವಾಗಿ ಹೇಳ ಬೇಕೆಂದರೆ, ಈ ಸ್ವರೂಪವು ನನ್ನನ್ನು ಈ ಪ್ರಯಾಣಕ್ಕೆ ಕರೆದೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ.

ಇದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ ಮತ್ತು ನಾನು ಜೀವನಪರ್ಯಂತವಾಗಿ ಅಳವಡಿಸಿಕೊಳ್ಳುವ ಪಾಠಗಳನ್ನು ಕಲಿಸಿದೆ. ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಸಾಕಷ್ಟು ವೈಯಕ್ತಿಕ ಅಂಶವಿದೆ.

ಶಾಂತವಾದ ಜಂಜಾಟ, ದೀರ್ಘ ದಿನಗಳು, ಯಾರೂ ನೋಡದ ಸಣ್ಣ ಕ್ಷಣಗಳು. ಇವೆಲ್ಲವೂ ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ನಾನು ಈ ಸ್ವರೂಪದಿಂದ ದೂರ ಸರಿಯುತ್ತಿರುವುದು ಸುಲಭದ ನಿರ್ಧಾರವಲ್ಲ.

ಆದರೆ ಇದುವೇ ಸರಿ ಎಂದು ಅನಿಸುತ್ತದೆ. ನಾನು ಹೊಂದಿದ್ದ ಎಲ್ಲವನ್ನೂ ಟೆಸ್ಟ್ ಕ್ರಿಕೆಟ್ಗೆ ನೀಡಿದ್ದೇನೆ. ಅಲ್ಲದೆ ನಾನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನದ್ದ ಅದರಿಂದ ನನಗೆ ಸಿಕ್ಕಿದೆ. ನನ್ನೊಂದಿಗೆ ಆಡಿದ ಪ್ರತಿಯೊಬ್ಬರಿಗೂ ಕೃತಜ್ಣತೆ ಅರ್ಪಿಸುತ್ತೇನೆ.

ಇದನ್ನು ಓದಿ : ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI

ಅಲ್ಲದೆ ಯಾವತ್ತಿದ್ದರೂ ನಾನು ನನ್ನ ಟೆಸ್ಟ್ ವೃತ್ತಿಜೀವನವನ್ನು ನಗುವಿನೊಂದಿಗೆ ಹಿಂತಿರುಗಿ ನೋಡುತ್ತೇನೆ #269,ಸೈನ್ ಆಫ್ʼ ಎಂದು ವಿರಾಟ್ ಕೊಹ್ಲಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ನಿವೃತ್ತಿ ಘೋಷಿಸಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು (Test series between India and England) ಜೂನ್ 20 ರಿಂದ ಶುರುವಾಗಲಿದ್ದು ಕೊಹ್ಲಿ ಜಾಗಕ್ಕೆ ಯಾರು ನಾಯಕರಾಗಿ ಬರಲಿದ್ದಾರೆ ಕಾದು ನೋಡಬೇಕಿದೆ.
Tags: CricketINDIA VS ENGLENDsportstest matchVirat Kohli

Related News

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ; ಬಾಕ್ಸಿಂಗ್‌ನಲ್ಲಿ ಪರ್ವೀನ್ ಹೂಡಾ ಐತಿಹಾಸಿಕ ಸಾಧನೆ
Sports

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ; ಬಾಕ್ಸಿಂಗ್‌ನಲ್ಲಿ ಪರ್ವೀನ್ ಹೂಡಾ ಐತಿಹಾಸಿಕ ಸಾಧನೆ

October 2, 2026
ಸ್ಕಾಟ್ಲೆಂಡ್‌ನಿಂದ ಭಾರತಕ್ಕೆ ಕಾಮನ್‌ವೆಲ್ತ್ ಧ್ವಜ ಹಾಗೂ ಬ್ಯಾಟನ್ ಹಸ್ತಾಂತರ: 39 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಭಾರತ
Sports

ಸ್ಕಾಟ್ಲೆಂಡ್‌ನಿಂದ ಭಾರತಕ್ಕೆ ಕಾಮನ್‌ವೆಲ್ತ್ ಧ್ವಜ ಹಾಗೂ ಬ್ಯಾಟನ್ ಹಸ್ತಾಂತರ: 39 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಭಾರತ

August 3, 2026
FIH ವಿಶ್ವಕಪ್‌ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ: ಹಾಕಿ ಇಂಡಿಯಾ ನಿರ್ಧಾರಕ್ಕೆ ಪರ-ವಿರೋಧ ಚರ್ಚೆ
Sports

FIH ವಿಶ್ವಕಪ್‌ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ: ಹಾಕಿ ಇಂಡಿಯಾ ನಿರ್ಧಾರಕ್ಕೆ ಪರ-ವಿರೋಧ ಚರ್ಚೆ

July 30, 2026
CWG 2026 ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ಸತತ ಮೂರನೇ ಸಲ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಹೆಚ್ಚಿಸಿದ ಸ್ಟಾರ್ ವೇಟ್‌ಲಿಫ್ಟರ್
Sports

CWG 2026 ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ಸತತ ಮೂರನೇ ಸಲ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಹೆಚ್ಚಿಸಿದ ಸ್ಟಾರ್ ವೇಟ್‌ಲಿಫ್ಟರ್

July 27, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.