download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಕೊನೆಯ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ ಅಣ್ಣಾ ಹಜಾರೆ

ಪುಣೆ, ಡಿ. 28: ರೈತರಿಗೆ ಸಂಬಂಧಿಸಿದ ಬೇಡಿಕೆಗಳು ಈಡೇರದೇ ಇದ್ದಲ್ಲಿ ಉಪವಾಸ ಪ್ರತಿಭಟನೆ ಪ್ರಾರಂಭಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಎಚ್ಚರಿಸಿದ್ದಾರೆ. ಬೇಡಿಕೆ ಈಡೇರಿಸುವುದಕ್ಕಾಗಿ ಜನವರಿವರೆಗೂ ಸರ್ಕಾರಕ್ಕೆ ಗಡುವು ನೀಡಿರುವ ಅಣ್ಣಾ ಹಜಾರೆ, ಇದು ತಮ್ಮ ಕೊನೆಯ ಪ್ರತಿಭಟನೆ ಎಂದು ಹೇಳಿದ್ದಾರೆ.

ರಾಲೇಗಣ್ ಸಿದ್ಧಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಅಣ್ಣಾ ಹಜಾರೆ, ತಾವು ಕಳೆದ ಮೂರು ವರ್ಷಗಳಿಂದ ರೈತರ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ವಿಷಯವನ್ನೂ ಬಗೆಹರಿಸಿಲ್ಲ ಎಂದು ಆರೋಪಿಸಿದ್ದಾರೆ.

ಸರ್ಕಾರ ಕೇವಲ ಖಾಲಿ ಭರವಸೆಗಳನ್ನಷ್ಟೇ ನೀಡುತ್ತಿದೆ. ಆದ್ದರಿಂದ ಸರ್ಕಾರದ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದೇನೆ. ಈಗ ನನ್ನ ಬೇಡಿಕೆಗಳ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ನೋಡೋಣ, ಅವರು ಒಂದು ತಿಂಗಳ ಕಾಲಾವಕಾಶ ಕೇಳಿದ್ದಾರೆ. ಆದ್ದರಿಂದ ಜನವರಿ ತಿಂಗಳಾಂತ್ಯದ ವರೆಗೆ ಗಡುವು ನೀಡಿದ್ದೇನೆ, ಬೇಡಿಕೆ ಈಡೇರದೇ ಇದ್ದಲ್ಲಿ ಆಮರಣಾಂತ ಉಪವಾಸ ಪ್ರತಿಭಟನೆ ಪ್ರಾರಂಭಿಸುತ್ತೇನೆ, ಇದು ನನ್ನ ಕೊನೆಯ ಪ್ರತಿಭಟನೆಯಾಗಿರಲಿದೆ ಎಂದು ಅಣ್ಣಾ ಎಚ್ಚರಿಸಿದ್ದಾರೆ.

ಡಿ.14 ರಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗೆ ಪತ್ರ ಬರೆದಿದ್ದ ಅಣ್ಣಾ ಹಜಾರೆ ಉಪವಾಸ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು. ಎಂಎಸ್ ಸ್ವಾಮಿನಾಥನ್ ಸಮಿತಿ ಶಿಫಾರಸುಗಳನ್ನು ಜಾರಿಗೊಳಿಸುವುದು ಹಾಗೂ ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗಕ್ಕೆ ಸ್ವಾಯತ್ತತೆ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಅಣ್ಣಾ ಹಜಾರೆ ಸರ್ಕಾರದ ಮುಂದೆ ಇಟ್ಟಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article