ಉತ್ತರ ಕನ್ನಡ(Uttara Kannada) ಜಿಲ್ಲೆಯ ಹೃದಯ ಭಾಗದ ಕುಮಟಾದ(Kumta) ಆಸುಪಾಸಿನಲ್ಲಿ ಸದ್ಯದಲ್ಲೇ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ(Multi-Speciality Hospital) ಆರಂಭಿಸುವ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ. ಎಲ್ಲರ ಸಹಕಾರವಿರಲಿ ಎಂದು ಸಚಿವ ಕೋಟಾ ಶ್ರೀನಿವಾಸ್‌ಪೂಜಾರಿ(Kota Sreenivas Poojary) ತಿಳಿಸಿದ್ದಾರೆ. ಈ ಕುರಿತು ಟ್ವೀಟ್(Tweet) ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ ಎಂದಿದ್ದಾರೆ.

ಇನ್ನು ಇತ್ತೀಚೆಗೆ ಸೂಕ್ತ ಚಿಕಿತ್ಸೆಗಾಗಿ ಬೇರೆ ಜಿಲ್ಲೆಗೆ ಹೊರಟಿದ್ದ ಆಂಬುಲೇನ್ಸ್(Ambulance) ಭೀಕರ ಅಪಘಾತಕ್ಕೀಡಾಗಿತ್ತು. ಈ ಭೀಕರ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದರು. ಹೀಗಾಗಿ ರಾಜ್ಯದ ಎಲ್ಲೆಡೆಯಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವಂತೆ ಆಗ್ರಹ ಕೇಳಿ ಬಂದಿತ್ತು. ಸಾರ್ವಜನಿಕರ ಒತ್ತಡಕ್ಕೆ ಮಣಿದ ಸರ್ಕಾರ ಇದೀಗ ಆಸ್ಪತ್ರೆ ಆರಂಭಿಸುವ ಬಗ್ಗೆ ಅಧಿಕೃತ ಆದೇಶ ಹೊರಡಿಸಲು ಸಿದ್ದತೆ ನಡೆಸಿದೆ. ಇನ್ನು ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.
ಕೇಂದ್ರ(Central) ಮತ್ತು ರಾಜ್ಯ ಸರ್ಕಾರಗಳು(State Government) ಜನರ ಅಹವಾಲನ್ನು ಮುಕ್ತ ಮನಸ್ಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದರು. ಅದೇ ರೀತಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಹಾಗೂ ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು.

ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದು ಜೆಡಿಎಸ್ ನಾಯಕ(JDS Leader) ಹೆಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಕೂಡಾ ಸರ್ಕಾರವನ್ನು ಟೀಕಿಸಿದ್ದರು.