- ಶಶಾಂಕ್ . ಎಂ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ(KSCA) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಚೀಫ್ ಎಕ್ಸಿಕ್ಯೂಟಿವ್ ಅಧಿಕಾರಿ, ಅಸಿಸ್ಟೆಂಟ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಸೀನಿಯರ್ ಅಧಿಕಾರಿ ಮತ್ತು ಪರ್ಸನಲ್ ಸೆಕ್ರೆಟರಿ ಹುದ್ದೆಗಳಿದ್ದು, ಆಸಕ್ತರು ಜನವರಿ 12ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ವೆಬ್ಸೈಟ್ಗೆ ಭೇಟಿ ನೀಡಿ ಅಧಿಸೂಚನೆಯನ್ನು ಪರಿಶೀಲಿಸಿ ವೆಬ್ಸೈಟ್ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯಲ್ಲಿ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಇಮೇಲ್ ಮೂಲಕ ಜನವರಿ 12 2022ರ ಒಳಗೆ ಅರ್ಜಿಯನ್ನು KSCA ಕಚೇರಿಗೆ ಸಲ್ಲಿಸಬಹುದು.
ಹುದ್ದೆಗಳಿಗೆ ಅರ್ಜಿಸಲ್ಲಿಸಲು https://www.ksca.cricket/ ವೆಬ್ಸೈಟ್ಗೆ ಭೇಟಿ ನೀಡಿ ಎಲ್ಲಾ ಅಗತ್ಯ ದಾಖಲೆಗಳನ್ನು hrd@ksca.co.in ಅಥವಾ nitin@mindparkour.in ವಿಳಾಸಕ್ಕೆ ಅರ್ಜಿಗಳನ್ನು ಇಮೇಲ್ ಮಾಡುವ ಮೂಲಕ ಜನವರಿ 12 2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಕೆಎಸ್ಸಿಎ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.