ನಿಫಾ ವೈರಸ್ ಹಾವಳಿ ; ಮಾರ್ಗಸೂಚಿ ಬಿಡುಗಡೆ ಮಾಡಿದ ಕರ್ನಾಟಕ ಆರೋಗ್ಯ ಇಲಾಖೆ

Bengaluru : ನೆರೆಯ ರಾಜ್ಯ ಕೇರಳದಲ್ಲಿ(Kerala) ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಕರ್ನಾಟಕ ಆರೋಗ್ಯ ಇಲಾಖೆಯು ಆರಂಭದಲ್ಲಿಯೇ ನಿಫಾ ವೈರಸ್ ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ@Karnatakaಆರೋಗ್ಯ ಇಲಾಖೆಯು ಸುತ್ತೋಲೆ ಹೊರಡಿಸಿದ್ದು, ವೈರಸ್ ಪೀಡಿತ ಪ್ರದೇಶಗಳಿಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಕೇರಳದ ಗಡಿಯನ್ನು ಹಂಚಿಕೊಳ್ಳುವ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ (Dakshina kannada), ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ನಿಗಾವನ್ನು ತೀವ್ರಗೊಳಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಿಫಾ ವೈರಸ್ #NipahVirus ಪ್ರಕರಣಗಳ ವರದಿಯನ್ನು ಗಮನದಲ್ಲಿಟ್ಟುಕೊಂಡು, ಸೋಂಕು ಹರಡುವುದನ್ನು ತಡೆಯಲು ಕೇರಳ ರಾಜ್ಯದ ಗಡಿಯ ಜಿಲ್ಲೆಗಳಲ್ಲಿ ಕಣ್ಗಾವಲು ಚಟುವಟಿಕೆಗಳನ್ನು ತೀವ್ರಗೊಳಿಸಬೇಕಾಗಿದೆ ಎಂದು ಆರೋಗ್ಯ ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಮತ್ತು ಕಣ್ಗಾವಲು ಚಟುವಟಿಕೆಗಳನ್ನು ಕೈಗೊಳ್ಳಲು ಇಲಾಖೆಯು ರಾಜ್ಯಾದ್ಯಂತ ಆರೋಗ್ಯ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ನೀಡಿದೆ.

ಇವುಗಳಲ್ಲಿ ವಿಶೇಷವಾಗಿ ಗಡಿ ಜಿಲ್ಲೆಗಳಲ್ಲಿ ಜ್ವರ ಕಣ್ಗಾವಲುಗಾಗಿ ಚೆಕ್ ಪೋಸ್ಟ್ಗಳನ್ನು (Checkpost) ಸ್ಥಾಪಿಸುವುದು, ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ಅನಗತ್ಯ ಭಯವನ್ನು ತಪ್ಪಿಸುವುದು, ಪ್ರಾಥಮಿಕ ಆರೋಗ್ಯ ಕೇಂದ್ರ (PHC) ವರೆಗೆ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡುವುದು, ನಿಫಾ ವೈರಸ್ ಸೋಂಕು ಹೊಂದಿರುವ ಶಂಕಿತ ರೋಗಿಗಳನ್ನು ಕ್ವಾರಂಟೈನ್ (Quarantain) ಮಾಡಲು ಜಿಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ಹಾಸಿಗೆಗಳನ್ನು ಕಾಯ್ದಿರಿಸುವುದು ಮತ್ತು ಸಾರ್ವಜನಿಕರು ಹಾಗೂ ಆರೋಗ್ಯ ಸಿಬ್ಬಂದಿ ಕೇರಳಕ್ಕೆ ಅನಗತ್ಯ ಪ್ರಯಾಣ ಮಾಡದಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಫಾ ಅಲರ್ಟ್ :
ಕೇರಳದಲ್ಲಿ ನಿಪಾ ಪ್ರಕರಣಗಳು ದೃಢಪಟ್ಟ ನಂತರ ದಕ್ಷಿಣ ಕನ್ನಡ ಜಿಲ್ಲೆ ಅಲರ್ಟ್ ಆಗಿದ್ದು, ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ತೆರೆಯಲು ಆರೋಗ್ಯ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಅದೇ ರೀತಿ ವೈರಸ್ (Virus) ಹರಡುವುದನ್ನು ತಡೆಯಲು ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ.

Exit mobile version