ಕೆಎಸ್‌ಒಯುನಿಂದ ಬೋಧಕ ಹುದ್ದೆಗಳಿಗೆ ನೇಮಕಾತಿ

 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್ಒಯು) 32 ಬೋಧಕ ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 11ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ಮಾಡಬೇಕಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಿಯಮಗಳ ಅನ್ವಯ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.

ಪ್ರೊಫೆಸರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳು 750 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಇತರ ಅಭ್ಯರ್ಥಿಗಳು 1500 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.

ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಇತರ ಅಭ್ಯರ್ಥಿಗಳು 1,200 ರೂ. ಶುಲ್ಕವನ್ನು ಪಾವತಿಸಬೇಕು.

ಆಸಕ್ತ, ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಸ್ವಯಂ ದೃಢೀಕೃತ ದಾಖಲಾತಿಗಳ ಜೊತೆ ನವೆಂಬರ್ 11ರೊಳಗೆ ಅರ್ಜಿಗಳನ್ನು ರಿಜಿಸ್ಟರ್, ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಕೆ ಮಾಡಬೇಕು.

ಅರ್ಜಿ ಸಲ್ಲಿಕೆಗೆ ವಿಳಾಸ; Registrar, Karnataka State Open University, Mukthagangothri, Mysuru – 570006, Karnataka.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಿ ksoumysuru.ac.in

Exit mobile version