387 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಆಹ್ವಾನ


ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಮೀಸಲು ಪೊಲೀಸ್, ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್‌ ನಲ್ಲಿ ಕಾನ್ಸ್‌ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 387 ಹುದ್ದೆಗಳಿದ್ದು ಅರ್ಜಿ ಸಲ್ಲಿಸಲು ಸೆ 13 ಕೊನೆಯ ದಿನಾಂಕವಾಗಿದೆ. ಸೆಪ್ಟಂಬರ್ 15  ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕವಾಗಿದೆ.

ವಯೋಮಿತಿ : ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 31 ವರ್ಷ, ಇತರೆ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆಗಳು : ಕನಿಷ್ಠ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ನೇಮಕಾತಿ ಪ್ರಕ್ರಿಯೆ :  ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಹಾಗೂ ಸಹಿಷ್ಣುತೆ ಪರೀಕ್ಷೆ.


ಅರ್ಜಿ ಶುಲ್ಕ

ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.400.

SC / ST / Cat-01 ಅಭ್ಯರ್ಥಿಗಳಿಗೆ ರೂ.200.

ಅರ್ಜಿ ಶುಲ್ಕವನ್ನು ಹೆಚ್‌ಡಿಎಫ್‌ಸಿ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಬೇಕು

Exit mobile version