• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ
0
SHARES
11
VIEWS
Share on FacebookShare on Twitter

KSRTC-BMTC ನೌಕರರ ಮುಷ್ಕರಕ್ಕೆ ( KSRTC BMTC employees strike) ಸರ್ಕಾರದ ಖಡಕ್ ಉತ್ತರ

‘ನೋ ವರ್ಕ್ ನೋ ಪೇ’ ನಿಯಮ ಜಾರಿಗೆ ಸೂಚನೆ, ಗೈರುಹಾಜರಾತಿಗೆ ಶಿಸ್ತು ಕ್ರಮದ ಎಚ್ಚರಿಕೆ

ಮೇ 20ರಿಂದ ಮುಷ್ಕರ ಘೋಷಣೆ; ಪ್ರಯಾಣಿಕರಲ್ಲಿ ಹೆಚ್ಚಿದ ಆತಂಕ

Bengaluru : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಸಾರಿಗೆ ನೌಕರರ (KSRTC BMTC employees strike) ಒಕ್ಕೂಟಗಳು ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗುವ ಸಾಧ್ಯತೆ ಎದುರಾಗಿದೆ.

ಈ ಮುಷ್ಕರದಿಂದ ಪ್ರತಿದಿನ ಸರ್ಕಾರಿ ಬಸ್ ಸೇವೆಯನ್ನು ಅವಲಂಬಿಸುವ ಲಕ್ಷಾಂತರ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವ ಭೀತಿ ಮೂಡಿದೆ. ನೌಕರರು ತಮ್ಮ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದರೂ, ಮಾತುಕತೆ ಫಲಕಾರಿಯಾಗದ ಹಿನ್ನೆಲೆ ಹೋರಾಟದ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಶೇ.25ರ ವೇತನ ಪರಿಷ್ಕರಣೆ, ಬಾಕಿ ಇರುವ ವೇತನ ಹಿಂಬಾಕಿ ಬಿಡುಗಡೆ ಹಾಗೂ ಸೇವಾ ಸೌಲಭ್ಯಗಳ ಸುಧಾರಣೆ ಸೇರಿವೆ.

ಆದರೆ ರಾಜ್ಯ ಸರ್ಕಾರ ಸದ್ಯಕ್ಕೆ ಶೇ.12.5ರ ವೇತನ ಹೆಚ್ಚಳಕ್ಕೆ ಮಾತ್ರ ಒಪ್ಪಿಗೆ (KSRTC BMTC employees strike) ಸೂಚಿಸಿದ್ದು, 26 ತಿಂಗಳ ವೇತನ ಬಾಕಿಯ ಮೊದಲ ಕಂತಾಗಿ 450 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಸರ್ಕಾರದ ಈ ಕ್ರಮ ನೌಕರರ ಅಸಮಾಧಾನಕ್ಕೆ ಕಾರಣವಾಗಿದ್ದು, ತಮ್ಮ ಬೇಡಿಕೆಗಳು ಸಂಪೂರ್ಣ ಈಡೇರುವವರೆಗೆ ಮುಷ್ಕರವನ್ನು ಹಿಂಪಡೆಯುವುದಿಲ್ಲ ಎಂದು ಸಂಘಟನೆಗಳು ಸ್ಪಷ್ಟಪಡಿಸಿವೆ. ಸರ್ಕಾರದ ಪ್ರಸ್ತಾವನೆ ನೌಕರರ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂಬ ಅಭಿಪ್ರಾಯ ಸಂಘಟನೆಗಳ ನಾಯಕರಿಂದ ವ್ಯಕ್ತವಾಗಿದೆ.

ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರವೂ ಕಠಿಣ ನಿಲುವು ತಾಳಿದ್ದು, ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಮೇ 20ರಂದು ಕರ್ತವ್ಯಕ್ಕೆ ಗೈರಾಗುವ ಸಿಬ್ಬಂದಿಗೆ ‘ನೋ ವರ್ಕ್ ನೋ ಪೇ’ ನಿಯಮ ಅನ್ವಯವಾಗಲಿದೆ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಬಸ್ ಸೇವೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಯಾವುದೇ ರೀತಿಯ ರಜೆ ಮಂಜೂರು ಮಾಡಬಾರದು ಹಾಗೂ ಅಗತ್ಯವಿದ್ದಲ್ಲಿ ವಾರದ ರಜೆಗಳನ್ನು ರದ್ದುಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಬೇಕೆಂದು ಆಡಳಿತ ಮಂಡಳಿ ನಿರ್ದೇಶನ ನೀಡಿದೆ.

ಪ್ರಯಾಣಿಕರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆಗಳ ಕುರಿತೂ ಚರ್ಚೆಗಳು ನಡೆಯುತ್ತಿವೆ.

ಇನ್ನೊಂದೆಡೆ, ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೀಡಿರುವ ಮುಷ್ಕರ ನೋಟಿಸ್‌ ಸಂಬಂಧಪಟ್ಟ ವಿಚಾರ ರಾಜ್ಯ ಕಾರ್ಮಿಕ ಆಯುಕ್ತರ ಮುಂದೆ ರಾಜೀ ಸಂಧಾನ ಹಂತದಲ್ಲಿದೆ.

ಕೈಗಾರಿಕಾ ವಿವಾದಗಳ ಕಾಯ್ದೆಯ ಪ್ರಕಾರ, ಸಾರ್ವಜನಿಕ ಉಪಯುಕ್ತ ಸೇವೆಗಳ ನೌಕರರು ಸಂಧಾನ ಪ್ರಕ್ರಿಯೆ ನಡೆಯುವ ವೇಳೆ ಮುಷ್ಕರ ನಡೆಸಬಾರದು ಎಂಬ ನಿಯಮವನ್ನು ಸರ್ಕಾರ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಮುಷ್ಕರ ಕಾನೂನುಬಾಹಿರವಾಗುವ ಸಾಧ್ಯತೆಯನ್ನೂ ಅಧಿಕಾರಿಗಳು ಸೂಚಿಸಿದ್ದಾರೆ.

ನೌಕರರು ಸಾರ್ವಜನಿಕ ಸೇವೆಯ ಮಹತ್ವವನ್ನು ಅರಿತು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸರ್ಕಾರ ಮನವಿ ಮಾಡಿದೆ.

ಸಾರಿಗೆ ನೌಕರರ ಮುಷ್ಕರದ ಘೋಷಣೆ ರಾಜ್ಯದಾದ್ಯಂತ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪ್ರತಿದಿನ ಉದ್ಯೋಗ, ಶಿಕ್ಷಣ, ಆಸ್ಪತ್ರೆ ಹಾಗೂ ವಿವಿಧ ಅಗತ್ಯಗಳಿಗಾಗಿ ಸರ್ಕಾರಿ ಬಸ್ ಸೇವೆಯನ್ನು ಅವಲಂಬಿಸುವ ಜನರು ಪರದಾಡುವ ಸ್ಥಿತಿ ಎದುರಾಗಬಹುದು.

ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಖಾಸಗಿ ಸಾರಿಗೆ ಸೌಲಭ್ಯಗಳು ಕಡಿಮೆ ಇರುವುದರಿಂದ ಜನಸಾಮಾನ್ಯರ ಮೇಲೆ ಪರಿಣಾಮ ಹೆಚ್ಚು ಬೀಳುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ ಮತ್ತು ನೌಕರರ ಸಂಘಟನೆಗಳು ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ, ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಬೇಕೆಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

Tags: bmtcbusemployeesKarnatakaKSRTCstrike

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.