ದಸರಾ ಮತ್ತು ದೀಪಾವಳಿ ಹಬ್ಬಕ್ಕೆ ಹೆಚ್ಚುವರಿ 1,000 ಬಸ್‌ಗಳನ್ನು ಬಿಡಲು ಕೆಎಸ್‌ಆರ್‌ಟಿಸಿ ನಿರ್ಧಾರ

ಬೆಂಗಳೂರು ಸೆ 23 :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದಸರಾ ಮತ್ತು ದೀಪಾವಳಿ ಹಬ್ಬಕ್ಕೆ ಹೆಚ್ಚುವರಿ 1,000 ಬಸ್‌ಗಳನ್ನು  ರಸ್ತೆಗಿಳಿಸಲು ತೀರ್ಮಾನಿಸಿದೆ. ಅಕ್ಟೋಬರ್ 13 ರಿಂದ 21 ರವರೆಗೆ ಮತ್ತು ಅಕ್ಟೋಬರ್ 29 ರಿಂದ ನವೆಂಬರ್ 7 ರವರೆಗೆ ವಿಶೇಷ ಬಸ್‌ಗಳನ್ನು ಓಡಿಸಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮವು ತಿಳಿಸಿದೆ.

ಕರ್ನಾಟದಲ್ಲಿ ಹಬ್ಬಗಳು ಶುರುವಾಗುತ್ತಿದಂತೆ ಜನರು ತಮ್ಮ ತಮ್ಮ ಊರಿಗೆ ಹೋಗಲು ಸಜ್ಜಾಗುತ್ತಾರೆ, ಅರದಲ್ಲೂ ದಸರಾ, ದೀಪಾವಳಿ ಅಂತಹ ಸಂಧರ್ಭದಲ್ಲಿ ಬಸ್‌, ಟ್ರೈನ್‌, ಕ್ಯಾಬ್‌, ಕಾರು ಎಲ್ಲವೂ ಬರ್ತಿಯಾಗಿಬಿಡುತ್ತದೆ. ರಾಜ್ಯದ ಅನೇಕ ಭಾಗಗಳಿಂದಲ್ಲದೇ ದೇಶ, ವಿದೇಶಗಳ ವಿವಿಧ ಭಾಗಗಳಿಂದ ಮೈಸೂರು ದಸರ ನೋಡಲು ಬರುತ್ತಾರೆ. ಈಗೆ ಬರುವ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಯಾಗದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರ ಸಾಮ್ಯದ ಕೆಎಸ್‌ಆರ್‌ಟಿಸಿ ಜವಾಬ್ಧಾರಿಯಾಗಿದ್ದು. ಹಾಗಾಗಿಯೇ ಪ್ರಯಾಣಿಕರಿಗೆ ಯಾವುದೇ ರೀತಿಯ ಕಿರಿಕಿರಿ ಅಥವಾ ಜನ ದಟ್ಟಣೆಯಾಗದಂತೆ 1000 ಹೆಚ್ಚುವರಿ ಬಸ್ಗಳನ್ನು ನಿಗಮ ಓಡಿಸಲಿದೆ ನಿರ್ಧರಿಸಿದೆ.

ಹೆಚ್ಚುವರಿ ಬಸ್‌ಗಳು ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಸಿರ್ಸಿ, ಕಾರವಾರ, ರಾಯಚೂರು ಮಾರ್ಗಗಳಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ನಿಗಮ ತಿಳಿಸಿದೆ.

Latest News

ರಾಜಕೀಯ

1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ : ಹೆಚ್‍ಡಿಕೆ

ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು.

ದೇಶ-ವಿದೇಶ

8ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ; `ಜನಾದೇಶಕ್ಕೆ ದ್ರೋಹʼ : ಬಿಜೆಪಿ

164 ಶಾಸಕರ ಪಟ್ಟಿಯನ್ನು ಸಲ್ಲಿಸಿ, ಬಿಹಾರದಲ್ಲಿ ಹೊಸ ಸರ್ಕಾರ ರಚಿಸಲು ಏಳು ಪಕ್ಷಗಳ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ನಿತೀಶ್ ಕುಮಾರ್ ಇಂದು ಎಂಟನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ದೇಶ-ವಿದೇಶ

ನಾವು ಹೇಳುವ ಯೋಜನೆಯನ್ನು ಅಧಿಕಾರಿಗಳು “ಹೌದು ಸರ್” ಎಂದು ಹೇಳಿ ಕಾರ್ಯರೂಪಕ್ಕೆ ತರಬೇಕು: ನಿತಿನ್ ಗಡ್ಕರಿ!

‘ಹೌದು ಸಾರ್’ ಎಂದು ಹೇಳುವ ಮೂಲಕ ಅಧಿಕಾರಿಗಳು ನಾವು ಹೇಳುವುದನ್ನು ಅನುಸರಿಸಬೇಕು. ಅಧಿಕಾರಿಗಳ ಹಿತದಿಂದ ಸರ್ಕಾರ ನಡೆಯುತ್ತಿಲ್ಲ.