download app

FOLLOW US ON >

Wednesday, June 29, 2022
Breaking News
ಸಿದ್ದರಾಮಯ್ಯ ಅಲೆಯೂ ಇಲ್ಲ, ಒಂದು ಗಟ್ಟಿಯಾದ ನೆಲೆಯೂ ಇಲ್ಲ : ಬಿಜೆಪಿನೇಪಾಳದಲ್ಲಿ ಪಾನಿಪುರಿ ನಿಷೇಧ ; ಯಾಕೆ ಎಂಬುದಕ್ಕೆ ಇಲ್ಲಿದೆ ಉತ್ತರಗವಿಮಠಕ್ಕೆ ಹರಿದು ಬರುತ್ತಿದೆ ದೇಣಿಗೆ, ಸರ್ಕಾರದಿಂದಲೂ 10 ಕೋಟಿ ಘೋಷಣೆGST ಹೊಸ ದರಗಳ ವಿವರಣೆ ; ವಸ್ತುಗಳ ಸಂಪೂರ್ಣ ಪಟ್ಟಿ ಇಲ್ಲಿದೆಬಿಜೆಪಿ ಅಂದ್ರೆ ಬಿಸ್ನೆಸ್ ಕ್ಲಾಸಿನ ಕಾಮಧೇನು : ಹೆಚ್.ಡಿಕೆಚಾಮುಂಡೇಶ್ವರಿ ಅಮ್ಮನವರ ಆಷಾಢ ಶುಕ್ರವಾರದ ದರ್ಶನಕ್ಕೆ ಉಚಿತ ಸರ್ಕಾರಿ ಬಸ್ ಸೇವೆಮಂಡ್ಯ ಜನರಿಗಾಗಿ ಮಾತ್ರ ನಾನು ರಾಜಕೀಯಕ್ಕೆ ಬಂದಿದ್ದೇನೆ ; ಸುಮಲತಾಕನ್ಹಯ್ಯಾ ಹತ್ಯೆ ; ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ : ಸಿದ್ದರಾಮಯ್ಯನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ನೀಡಿದ ವ್ಯಕ್ತಿಯ ಶಿರಚ್ಛೇದ‘ಅಗ್ನಿವೀರ’ ಹುದ್ದೆಗೆ ನಿರೀಕ್ಷೆಗೂ ಮೀರಿ ಬಂದ ಅರ್ಜಿಗಳು
English English Kannada Kannada

KSRTCಯಲ್ಲಿ ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ!

ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ತರಬೇತಿ ಅವಧಿ, ಭತ್ಯೆ ಹಾಗೂ ವೇತನಶ್ರೇಣಿ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳನ್ನು ಒಂದು ವರ್ಷ ಕಾಲ ವೃತ್ತಿ ತರಬೇತಿ ಮೇಲೆ ನಿಯೋಜಿಸಲಾಗುವುದು. ತರಬೇತಿಯಲ್ಲಿ ಮಾಸಿಕ ರೂ 8.600 ತರಬೇತಿ ಭತ್ಯೆ ನೀಡಲಾಗುವುದು. ಮೇಲ್ಕಾಣಿಸಿದಂತೆ ಒಂದು ವರ್ಷದ ವೃತ್ತಿ ತರಬೇತಿಯನ್ನು ತೃಪ್ತಿಕರವಾಗಿ ಪೂರೈಸಿದ್ದಲ್ಲಿ ಅವರನ್ನು ಕಾಯಂ ಪೂರ್ವ ಪರೀಕ್ಷಾರ್ಥ ಸೇವೆಯ ಮೇಲೆ ಹುದ್ದೆಯ ಕಲಿಕಾ ವೇತನ 11.320 – 15010 ನಿಯೋಜಿಸಲಾಗುತ್ತದೆ.

bus

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 200 ರೂ. ಡಿಡಿ CAO-FA KSRTC, Central Office, Bangalore ಹೆಸರಲ್ಲಿ ಪಡೆಯತಕ್ಕದ್ದು.

ಆಯ್ಕೆ ವಿಧಾನ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯ ನಂತರ ಹುದ್ದೆಗೆ ನಿಗದಿಪಡಿಸಲಾದ 7ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳ ಮೆರಿಟ್ ಅನುಸಾರ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ಬಗೆ, ವಿದ್ಯಾರ್ಹತೆ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಚೇರಿ ಸಹಾಯಕ (ತೋಟಗಾರಿಕೆ) ದರ್ಜೆ IV ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

karnataka

ವಯೋಮಿತಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಚೇರಿ ಸಹಾಯಕ (ತೋಟಗಾರಿಕ) ದರ್ಜೆ IV ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಟ 18 ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ ಕಚೇರಿ ಸಹಾಯಕ ತೋಟಗಾರಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸದರಿ ಹುದ್ದೆ ನಿರ್ವಹಿಸಲು ಸಶಕ್ತರಿರುವ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳಿಂದ ಪಡೆದ ವೈದ್ಯಕೀಯ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದೆ.


ಭರ್ತಿ ಮಾಡಿದ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳ ವಿವರ:
ಅರ್ಜಿ ಶುಲ್ಕವನ್ನು ಬ್ಯಾಂಕಿನಲ್ಲಿ ಪಾವತಿಸಿರುವ ಮೂಲ ಡಿಮ್ಯಾಂಡ್ ಡ್ರಾಫ್ಟ್. 7ನೇ ತರಗತಿಯಲ್ಲಿ ಉತ್ತೀರ್ಣರಾದ ಅಂಕಪಟ್ಟಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರ ಸಹಿಯ ಜೊತೆಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲು ಸಹಿಯುಳ್ಳ ಅಂಕಪಟ್ಟಿಯ ಪ್ರತಿ
ಜಾತಿ ಪುಮಾಣ ಪತ್ರದ ಪ್ರತಿ, ಜನ್ಮ ದಿನಾಂಕದ ದಾಖಲೆಗಾಗಿ ಶಾಲಾ ವರ್ಗಾವಣಾ ಪತ್ರದ ಪ್ರತಿ. ಪ್ರಮುಖ ದಿನಾಂಕಗಳು. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10-02-2022. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-03-2022

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article