• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ದೀಪಾವಳಿಗೆ ಪ್ರಯಾಣಿಕರ ಸಂಭ್ರಮಕ್ಕೆ ಸಾತ್ ನೀಡಿದ ಕೆಎಸ್‌ಆರ್‌ಟಿಸಿ : ಬೆಂಗಳೂರಿನಿಂದ 2,500 ಹೆಚ್ಚುವರಿ ಬಸ್ ಸೌಲಭ್ಯ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ದೀಪಾವಳಿಗೆ ಪ್ರಯಾಣಿಕರ ಸಂಭ್ರಮಕ್ಕೆ ಸಾತ್ ನೀಡಿದ ಕೆಎಸ್‌ಆರ್‌ಟಿಸಿ : ಬೆಂಗಳೂರಿನಿಂದ 2,500 ಹೆಚ್ಚುವರಿ ಬಸ್ ಸೌಲಭ್ಯ
0
SHARES
11
VIEWS
Share on FacebookShare on Twitter
  • ಮಜೆಸ್ಟಿಕ್, ಮೈಸೂರು ರೋಡ್ ಮತ್ತು ಶಾಂತಿನಗರ ನಿಲ್ದಾಣಗಳಿಂದ ಪ್ರಮುಖ ನಗರಗಳಿಗೆ ಬಸ್ ಸಂಚಾರ ವಿಸ್ತರಣೆ
  • ಪ್ರಯಾಣಿಕರ ಹಬ್ಬದ ಸಂಭ್ರಮಕ್ಕೆ ಜೊತೆಯಾದ ಕೆಎಸ್‌ಆರ್‌ಟಿಸಿ 2,500 ಹೆಚ್ಚುವರಿ ಬಸ್‌ಗಳು ರೋಡ್‌ಗೆ
  • ಮುಂಗಡ ಟಿಕೆಟ್, ಆನ್‌ಲೈನ್ ಬುಕಿಂಗ್ ಮತ್ತು ಹಬ್ಬದ ಪ್ರಯಾಣ ಸುಗಮಗೊಳಿಸಲು ನಿಗಮದ ಹೊಸ ಕ್ರಮಗಳು

Bengaluru: ದೀಪಾವಳಿ ಹಬ್ಬದ ಸಂಭ್ರಮಕ್ಕೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇರುವಾಗಲೇ ಬೆಂಗಳೂರು ನಗರ ಕಂಗೊಳಿಸುತ್ತಿದೆ.

ಹಬ್ಬಕ್ಕೆ ರಾಜ್ಯದ ವಿವಿಧ ಭಾಗಗಳಿಗೆ ತೆರಳಲು ಬಯಸುವ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಪ್ರಯಾಣಿಕರ ಸುಗಮ ಪ್ರಯಾಣಕ್ಕಾಗಿ ಭಾರೀ ಸಿದ್ಧತೆ ಕೈಗೊಂಡಿದೆ. (KSRTC extra buses for Diwali)

ಈ ಹಿನ್ನೆಲೆಯಲ್ಲಿ ನಿಗಮವು ಅಕ್ಟೋಬರ್ 17ರಿಂದ 20ರವರೆಗೆ ಒಟ್ಟು 2,500 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಿಸಲು ನಿರ್ಧರಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ  ಪ್ರಯಾಣಿಕರ ಸುಗಮ ಪ್ರಯಾಣಕ್ಕಾಗಿ ಭಾರೀ ಸಿದ್ಧತೆ ಕೈಗೊಂಡಿದೆ.

ಅದೇ ವೇಳೆ, ಹಿಂತಿರುಗುವ ಪ್ರಯಾಣಕ್ಕಾಗಿ ಅಕ್ಟೋಬರ್ 22ರಿಂದ 26ರವರೆಗೆ ವಿಶೇಷ ರಿಟರ್ನ್ (Return) ಬಸ್‌ಗಳು ಸಿದ್ಧವಾಗಲಿವೆ. (KSRTC extra buses for Diwali)

ಹಬ್ಬದ ಕಾಲದಲ್ಲಿ ಸಾವಿರಾರು ಜನರು ತಮ್ಮ ಸ್ವಗ್ರಾಮಗಳತ್ತ ಮುಖ ಮಾಡುವುದರಿಂದ ಪ್ರತೀ ವರ್ಷ ಪ್ರಯಾಣಿಕರ ಒತ್ತಡವು ಹೆಚ್ಚಾಗುತ್ತದೆ.

ಈ ಸಂದರ್ಭದಲ್ಲಿಯೇ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡುವ KSRTC ಕ್ರಮವು ಮೆಚ್ಚುಗೆಗೆ ಪಾತ್ರವಾಗಿದೆ.

ಪ್ರಯಾಣಿಕರು ತಮ್ಮ ಬಸ್‌ ಟಿಕೆಟ್‌ಗಳನ್ನು KSRTC ರಿಸರ್ವೇಷನ್ ಕೌಂಟರ್‌ಗಳಲ್ಲಿ (Reservation Counter) ಅಥವಾ ನಿಗಮದ ಅಧಿಕೃತ ಜಾಲತಾಣವಾದ www.ksrtc.karnataka.gov.in ಮುಖಾಂತರ ಮುಂಗಡವಾಗಿ ಬುಕ್‌ ಮಾಡಿಕೊಳ್ಳಬಹುದು.

ಈ ಬಾರಿ ಪ್ರಯಾಣಿಕರ ಹೆಚ್ಚಿನ ಪ್ರಮಾಣವನ್ನು ಗಮನಿಸಿ, ಬೆಂಗಳೂರು ನಗರದ ವಿವಿಧ ಬಸ್ ನಿಲ್ದಾಣಗಳಿಂದ ಬೇರೆ ಬೇರೆ ಪ್ರದೇಶಗಳಿಗೆ ಬಸ್‌ಗಳನ್ನು ನಿಯೋಜಿಸಲಾಗಿದೆ.

ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಕೆಂಪೇಗೌಡ ಬಸ್ ನಿಲ್ದಾಣ (ಮಜೆಸ್ಟಿಕ್) ನಿಂದ ರಾಜ್ಯದ ಮತ್ತು ದೇಶದ ಹಲವು ಪ್ರಮುಖ ಸ್ಥಳಗಳಿಗೆ ಬಸ್‌ಗಳು ಸಂಚರಿಸಲಿವೆ.


ಇಲ್ಲಿ‌ನಿಂದ ಧರ್ಮಸ್ಥಳ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಬಳ್ಳಾರಿ, ಹೈದರಾಬಾದ್ (Hyderbad) , ತಿರುಪತಿ ಹಾಗೂ ವಿಜಯವಾಡ ಮುಂತಾದ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯ ವಿಶೇಷ ಬಸ್‌ಗಳ ಸಂಚಾರ ಇರಲಿದೆ.

ಈ ಮಾರ್ಗಗಳು ಪ್ರತೀ ಹಬ್ಬದ ಸಮಯದಲ್ಲಿ ಪ್ರಯಾಣಿಕರಿಂದ ಭಾರೀ ಬೇಡಿಕೆ ಹೊಂದಿದ್ದು, ಕೆಎಸ್‌ಆರ್‌ಟಿಸಿಯ ಈ ಕ್ರಮವು ಪ್ರಯಾಣಿಕರ ತೊಂದರೆ ಕಡಿಮೆ ಮಾಡುವ ನಿರೀಕ್ಷೆಯಿದೆ.

ಮೈಸೂರು ರೋಡ್ ಸ್ಯಾಟಲೈಟ್ (Satellite) ಬಸ್ ನಿಲ್ದಾಣದಿಂದ ಈ ಬಾರಿ ಮೈಸೂರು, ಮಡಿಕೇರಿ ಮತ್ತು ಕೊಡಗು ಜಿಲ್ಲೆಯ ವಿವಿಧ ಪಟ್ಟಣಗಳಿಗೆ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ.

ಮೈಸೂರು ದೀಪಾವಳಿ ಹಾಗೂ ದಸರಾ ಹಬ್ಬದ ಸಂಭ್ರಮಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಪ್ರಯಾಣಿಕರ ಆಗಮನ ಹೆಚ್ಚಾಗಿರುವುದರಿಂದ, ಈ ಮಾರ್ಗದಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.

ದಕ್ಷಿಣ ಭಾರತದ ಜನಪ್ರಿಯ ಗಮ್ಯಸ್ಥಳಗಳಾದ ಚೆನ್ನೈ, ಕೊಯಮತ್ತೂರು, ಮಧುರೈ (Madurai) ಮತ್ತು ಎರ್ನಾಕುಲಂ (Ernakulam) ಮುಂತಾದ ಕಡೆಗಳಿಗೆ ಪ್ರಯಾಣಿಸುವವರಿಗೆ ಉತ್ತಮ ಸುದ್ದಿ ಇದೆ.

ಶಾಂತಿನಗರದಲ್ಲಿರುವ ಟಿಟಿಎಂಸಿ (TTMC) ಬಸ್ ನಿಲ್ದಾಣದಿಂದ ಈ ಎಲ್ಲಾ ತಮಿಳುನಾಡು ಮತ್ತು ಕೇರಳದ ಪಟ್ಟಣಗಳಿಗೆ ಹೆಚ್ಚುವರಿ ಬಸ್‌ಗಳನ್ನು ಬಿಡುಗಡೆ ಮಾಡಲಾಗುತ್ತಿದೆ.

ಅಂತರರಾಜ್ಯ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

Tags: bengalurubusDeepavalikstrc

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.