ಇಂದಿನಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಾರಂಭವಾಗಿದೆ. ಮೇ 29 ರಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಆರಂಭವಾಗಿದ್ದು, ಕಾಲೇಜುಗಳು ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ 2024-25ನೇ ಸಾಲಿನ ಸ್ಟುಡೆಂಟ್ ಬಸ್ ಪಾಸ್ (Student Bus Pass) ಅಂದರೆ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ನೀಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತಯಾರಿ ನಡೆಸಿದೆ. ಇದೀಗ ವಿದ್ಯಾರ್ಥಿಗಳು ಆನ್ಲೈನ್ ಮೂಲಕವೂ ಕೂಡಾ ಬಸ್ ಪಾಸ್ ಪಡೆಯಬಹುದಾಗಿದ್ದು ಹೆಚ್ಚಿನ ವಿವರಗಳು ಹೀಗಿವೆ.
![](https://sp-ao.shortpixel.ai/client/to_webp,q_glossy,ret_img,w_1024,h_576/https://vijayatimes.com/wp-content/uploads/2024/06/ksrtcbus-1685518469-1024x576.jpg)
ಕೆಎಸ್ಆರ್ಟಿಸಿ ಪಾಸ್ ದರ ಪಟ್ಟಿ
ಈಗಾಗಲೇ ಕೆಎಸ್ಆರ್ಟಿಸಿ (KSRTC) ಬಿಡುಗಡೆ ಮಾಡಿರುವ ದರಪಟ್ಟಿಯ ಪ್ರಕಾರ ಬಸ್ ಪಾಸ್ ಬೇರೆ ಬೇರೆ ದರಗಳನ್ನು ಹೊಂದಿವೆ. ಪ್ರಾಥಮಿಕ, ಪ್ರೌಢ ಹಾಗೂ ಇತರ ದರಗಳು ಹೀಗಿವೆ.
*ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಾಸ್ ದರ – 150 ರೂಪಾಯಿ.
*ಪ್ರೌಢ ಶಾಲಾ ವಿದ್ಯಾರ್ಥಿಗಳ ಪಾಸ್ ದರ- 750 ರೂಪಾಯಿ
*ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪಾಸ್ ದರ – 150 ರೂಪಾಯಿ.
*ಪ್ರೌಢ ಶಾಲಾ ವಿದ್ಯಾರ್ಥಿನಿಯರ (ಗಡಿ ಭಾಗದ ಆಚೆಗೆ) – 150 ರೂಪಾಯಿ.
*ಕಾಲೇಜು- ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ- 1050 ರೂಪಾಯಿ.
*ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂಪಾಯಿ.
*ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ (12 ತಿಂಗಳ ಅವದಿ) 1310 ರೂಪಾಯಿ.
*ಐಟಿಐ, ಡಿಪ್ಲೊಮಾ ಎಸ್ಸಿ, ಎಸ್ಟಿ (ITI, Diploma, SC-ST) ವಿದ್ಯಾರ್ಥಿಗಳ ಪಾಸ್ ದರ- 160 ರೂಪಾಯಿ.
*ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಪಾಸ್ ದರ- 1550 ರೂಪಾಯಿ.
*ವೃತ್ತಿಪರ ಕೋರ್ಸ್ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂಪಾಯಿ.
*ಸಂಜೆ ಕಾಲೇಜು ವಿದ್ಯಾರ್ಥಿಗಳ ಪಾಸ್ ದರ- 1350 ರೂಪಾಯಿ.
*ಸಂಜೆ ಕಾಲೇಜು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪಾಸ್ ದರ – 150 ರೂಪಾಯಿ. ಈ ಪಾಸ್ಗಳನ್ನು ಪಡೆಯಲು ಆನ್ ಲೈನ್ನಲ್ಲೇ (Online) ಅರ್ಜಿ ಸಲ್ಲಿಸಬೇಕು.
![](https://sp-ao.shortpixel.ai/client/to_webp,q_glossy,ret_img,w_481,h_481/https://vijayatimes.com/wp-content/uploads/2024/06/30582010_yJ7m4B-lm0OZjCRbuoWP1Re4C4q4VJH6bPv44YBZfoI.jpg)
ಅರ್ಜಿ ಸಲ್ಲಿಸುವ ವಿಧಾನ
*ಮೊದಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices
*ವಿದ್ಯಾರ್ಥಿಗಳು ಮೇ (May) 31 ರಿಂದ ಸೇವಾಸಿಂಧು ಪೋರ್ಟಲ್ನಲ್ಲಿ ಬಸ್ ಪಾಸ್ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
*ಆನ್ ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಉಚಿತವಾಗಿ ವಿಧ್ಯಾರ್ಥಿಗಳು ಈ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ.
*ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ (Bengaluru One) ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದು.
*ಆದರೆ ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳಿಗೆ ನೀಡಬೇಕಾಗುತ್ತದೆ.
*ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್ಗಾಗಿ ಅರ್ಜಿ ಸಲ್ಲಿಸಲು Declaration Formeನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್ಸೈಟ್ನಲ್ಲಿ (https://ksrtc.karnataka.gov.in/studentpass) ಡೌನ್ಲೋಡ್ ಮಾಡಿಕೊಳ್ಳಬೇಕು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ ನಿಮ್ಮ ಎಲ್ಲ ವಿವರಗಳೊಂದಿಗೆ Submit ಮಾಡಬೇಕು.
*ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ (SMS) ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ. 01 ರಿಂದ ನಿಗದಿತ ಪಾಸ್ ಕೌಂಟರ್ (Pass Counter)ಗಳಲ್ಲಿ ವಿತರಿಸಲಾಗುತ್ತದೆ.
*ನಂತರದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.
*ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ , ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ.
*ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್ಗಗಳ ವಿವರಗಳನ್ನು https://ksrtc.karnataka.gov.in ಒದಗಿಸಲಾಗುತ್ತದೆ.
*ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ (Website) ನಿಂದ ಮಾಹಿತಿ ಪಡೆಯಬೇಕೆಂದು ತಿಳಿಸಿದೆ.