ಬೆಂಗಳೂರು, ಡಿ. 05: ಪತ್ರಿಕಾಗೊಷ್ಠಿಯಲ್ಲಿ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ಧಾಳಿಯನ್ನು ನಡೆಸಿದ್ದಾರೆ. ಕಾಂಗ್ರೆಸ್ ವಿರುದ್ಧ ಇದ್ದ ಆಕ್ರೋಶವನ್ನು ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ವ್ಯಕ್ತಪಡಿಸಿದ್ದಾರೆ. ಈಬಗ್ಗೆ ಈಗಗಲೇ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, “ಕುಮಾರಸ್ವಾಮಿ ಹೇಳಿಕೆ ಮುಗಿದು ಹೋದ ಅಧ್ಯಾಯ. ಈಗ ಮಾತನಾಡಿದರೆ ಏನು ಪ್ರಯೋಜನ ಇಲ್ಲ. ಅವರು ಯಾಕೆ ಈ ರಿತಿಯಲ್ಲಿ ಮಾತನಾಡಿದ್ದಾರೆ ಎನ್ನುವುದು ಗೊತ್ತಿಲ್ಲ” ಎಂದು ಹೇಳಿದ್ದಾರೆ.
ಕೆಟ್ಟ ಮೇಲೆ ಬುದ್ಧಿ ಬಂತು, ಈ ಕೆಟ್ಟ ಅನುಭವದ ಮೇಲೆ ಇನ್ನೆಂದು ಕಾಂಗ್ರೆಸ್ ಸಹವಾಸ ಮಾಡಬೇಡಿ. ಇನ್ನೆಂದು ಇಂತಹ ದುಡುಕು ನಿರ್ಧಾರವನ್ನು ಕೈಗೊಳಬೇಡಿ ಎಂದು ಪ್ರವಾಸೋದ್ಯಮ ಸಚಿವ ಸಿ. ಟಿ ರವಿ ಟಾಂಗ್ ನೀಡಿದರು.