Bengaluru: ಪಂಚರತ್ನ ರಥಯಾತ್ರೆ ನಿಮ್ಮ ಕಣ್ಣು ಕುಕ್ಕಿದೆ. ಸಾಲಮನ್ನಾ ನಿಮ್ಮ ನಿದ್ದೆಗೆಡಿಸಿದೆ. ಎಷ್ಟೇ (Kumaraswamy tweeted Amit shah) ಆದರೂ ಕೇಂದ್ರದ ಸಹಕಾರ ಸಚಿವರಾದ ನಿಮಗೆ ಸಾಲಮನ್ನಾ ದುಃಸ್ವಪ್ನದಂತೆ ಕಾಡುತ್ತಿದೆ ಎನ್ನುವುದು ಗೊತ್ತು. ಶ್ರೀ ಹೆಚ್.ಡಿ.ದೇವೇಗೌಡರು ಮತ್ತು ನನ್ನ ಸಾಧನೆಗಳು ನಿಮ್ಮ ಚಿಂತೆ ಹೆಚ್ಚಿಸಿವೆ. ಇನ್ನಾದರೂ ಸುಳ್ಳಿನ ಜಾಗಟೆ ಬಾರಿಸುವುದು ನಿಲ್ಲಿಸಿ.
ಇವತ್ತು ಬೆಂಗಳೂರಿನಿಂದ ಹೊರಡುವ ಮುನ್ನ ಇದಕ್ಕೆಲ್ಲಾ ಉತ್ತರ ಕೊಡಿ ಅಮಿತ್ ಶಾ ಅವರೇ. ಎಷ್ಟಾದರೂ (Kumaraswamy tweeted Amit shah) ನೀವು ಸ್ವಯಂ ಘೋಷಿತ ಸಾಚಾ ಅಲ್ಲವೇ?
ಉತ್ತರ ಹೇಳಿ ಹೋದರೆ ನಾವೂ ಧನ್ಯರಾಗುತ್ತೇವೆ ಎಂದು ಜೆಡಿಎಸ್‌ನಾಯಕ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸತ್ಯ ಅಜರಾಮರ, ಅಸತ್ಯ ನಿಮ್ಮ ಹಣೆಬರ. ಸತ್ಯದ ಮುಂದೆ ದಮ್ಮು ತಾಕತ್ತು ದುರ್ಬಲ. ಕರ್ನಾಟಕ ಬಿಜೆಪಿ(BJP) ಫ್ಯಾಮಿಲಿ ಪಾಲಿಟಿಕ್ಸ್(Family politics) ಪಟ್ಟಿ ಇಲ್ಲಿದೆ ನೋಡಿ.
- ಯಡಿಯೂರಪ್ಪ & ಸನ್ಸ್
- ರವಿಸುಬ್ರಮಣ್ಯ – ತೇಜಸ್ವಿ ಸೂರ್ಯ
- ಅಶೋಕ್ – ರವಿ
- ವಿ.ಸೋಮಣ್ಣ & ಸನ್
- ಅರವಿಂದ ಲಿಂಬಾವಳಿ – ರಘು
- ಎಸ್.ಆರ್.ವಿಶ್ವನಾಥ್ – ವಾಣಿ ವಿಶ್ವನಾಥ್
- ಜಗದೀಶ್ ಶೆಟ್ಟರ್ – ಪ್ರದೀಪ್ ಶೆಟ್ಟರ್
- ಮುರುಗೇಶ್ ನಿರಾಣಿ – ಹನುಮಂತ ನಿರಾಣಿ
- ಜಿ ಎಸ್ ಬಸವರಾಜು – ಜ್ಯೋತಿ ಗಣೇಶ್
- ಜಾರಕಿಹೊಳಿ & ಬ್ರದರ್
- ಜೊಲ್ಲೆ & ಜೊಲ್ಲೆ
- ಅಂಗಡಿ ಕುಟುಂಬ
- ಉದಾಸಿ ಕುಟುಂಬ
- ಶ್ರೀರಾಮುಲು ಕುಟುಂಬ
- ರೆಡ್ಡಿ & ರೆಡ್ಡಿ.
ಇದು ಕೂಡ ಅಪೂರ್ಣ ಪಟ್ಟಿಯೇ. ರಾಷ್ಟ್ರೀಯ ಪಟ್ಟಿ ಬೇಕಿದ್ದರೆ ಹೇಳಿ, ಇದರ ಹತ್ತರಷ್ಟಿದೆ ಎಂದು ಹೇಳಿದ್ದಾರೆ. - https://vijayatimes.com/new-year-health-formulas/
ಇನ್ನೊಂದು ಟ್ವೀಟ್‌ನಲ್ಲಿ, ಇನ್ನು ಕುಟುಂಬದ ವಿಷಯ, ನಿಮ್ಮ ಪಕ್ಷದ ಕುಟುಂಬ ರಾಜಕಾರಣದ ಲೆಕ್ಕ ಗೊತ್ತಿಲ್ಲವೇ? ನಿಮ್ಮ ಸುಪುತ್ರ ಜಯ ಶಾ (Jaya shah) ಯಾವ ಸೀಮೆ ಕ್ರಿಕೆಟ್ ಪಂಡಿತರು ಎಂದು ಬಿಸಿಸಿಐನಲ್ಲಿ ಕೂತಿದ್ದಾರೆ?
ಬಿಸಿಸಿಐನಲ್ಲಿ (BCCI) ಯಾರು ಇರಬೇಕು, ಇರಬಾರದೆಂದು ಸುಪ್ರೀಂ ಕೋರ್ಟಿನ (Supreme court) ಸ್ಪಷ್ಟ ಆದೇಶವಿದೆ. ಆ ಆದೇಶಕ್ಕೆ ನಿಮ್ಮ ಮಗ ಅತೀತರೇ? ಈಗ ಹೇಳಿ, ಬಿಸಿಸಿಐ ಯಾರ ಪಾಲಿನ ಎಟಿಎಂ? ಎಂದು ಪ್ರಶ್ನೆಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಕರ್ನಾಟಕದ ನಿಮ್ಮ ಬಿಜೆಪಿ ಸರಕಾರ ಕೇವಲ 40% ಸರಕಾರ ಅಲ್ಲವೇ ಅಲ್ಲ. ಅದು 55-60% ಸರಕಾರ. ನಿಮಗೂ ಮಾಹಿತಿ ಇರುತ್ತದೆ, ಕರ್ನಾಟಕ ನಿಮ್ಮ ಪಕ್ಷಕ್ಕೂ ಎಟಿಎಂ(ATM) ಹೌದಲ್ಲವೇ? ಈ ಸತ್ಯ ಯಾಕೆ ಮರೆಮಾಚಿದಿರಿ? ಮಂಡ್ಯ(Mandya) ಜನರ ಮುಂದೆ ನಿಮ್ಮ ದಮ್ಮು ತಾಕತ್ತು ನಡೆಯಲ್ಲ, ಅರಿತುಕೊಳ್ಳಿ. ಕರ್ನಾಟಕದ ಬಿಜೆಪಿ ಎಟಿಎಂಗಳು:
- 1.40% ಕಮೀಷನ್
- 2.ಪಿಎಸ್ ಐ ಹಗರಣ
- 3.ಪ್ರಶ್ನೆಪತ್ರಿಕೆ ಸೋರಿಕೆ
- 3.ಸಹ ಪ್ರಾಧ್ಯಾಪಕರ ನೇಮಕ ಹಗರಣ
- 4.ವೈದ್ಯ ಪ್ರಾಧ್ಯಾಪಕರ ನೇಮಕ ಹಗರಣ
- 5.ಕೋವಿಡ್ ನಲ್ಲಿ ಕೊಳ್ಳೆ
- 6.ಕಾಸಿಗಾಗಿ ಪೋಸ್ಟಿಂಗ್
- 7.ಗಂಗಾಕಲ್ಯಾಣ ಕರ್ಮಕಾಂಡ
- 8.ಚಿಲುಮೆ ಹಗರಣ ಇದು ಅಪೂರ್ಣ ಪಟ್ಟಿ, ಅದು ಕೂಡ ದೊಡ್ಡದಿದೆ. ಬೇಕಾ ಅಮಿತ್ ಶಾ ಅವರೇ? ಎಂದು ಟೀಕಿಸಿದ್ದಾರೆ.
ಕೊನೆಯ ಟ್ವೀಟ್‌ನಲ್ಲಿ, ಜೆಡಿಎಸ್ ಜನರ ಎಟಿಎಂ. ನಮ್ಮ ಪಾಲಿಗೆ ಎಟಿಎಂ ಎಂದರೆ ‘ ಎನಿ ಟೈಮ್ ಮನುಷ್ಯತ್ವ ‘ ಎಂದು. ನಿಮ್ಮ ಪಾಲಿಗೆ ಅದು ‘ ಎನಿ ಟೈಮ್ ಮೋಸ ‘. ಸುಳ್ಳಿನ ಜಾಗಟೆ ಹೊಡೆದೇ ದೇಶವನ್ನು ಅಧೋಗತಿಗೆ ತಳ್ಳಿದ್ದೀರಿ.
ಶಾ ಅವರೇ, ದೇಶದ ಮಾತು ಹಾಗಿರಲಿ; ಕರ್ನಾಟದಲ್ಲಿ ನಿಮ್ಮ ಪಕ್ಷದ ಎಟಿಎಂಗಳ ಪಟ್ಟಿ ಮೂಡಿದೆ ನೋಡಿ.. ಜೆಡಿಎಸ್(JDS) ಗೆದ್ದರೆ ಕರ್ನಾಟಕ ಒಂದು ಕುಟುಂಬದ ಎಟಿಎಂ ಆಗುತ್ತದೆಂದು ಜಾಗಟೆ ಹೊಡೆದಿದ್ದೀರಿ. ಜೆಡಿಎಸ್ ಸರಕಾರ ಬಂದರೆ, ಅದು ಆರೂವರೆ ಕೋಟಿ ಕನ್ನಡಿಗರ ಎಟಿಎಂ ಆಗುತ್ತದೆ.
ಇದನ್ನೂ ಓದಿ: https://vijayatimes.com/madhavan-spokes-sons-achievement/
ರೈತರ, ಕಾರ್ಮಿಕರ, ದೀನ ದಲಿತರ, ಅಶಕ್ತರ, ವಿಕಲಚೇತನರ ಎಟಿಎಂ ಆಗುತ್ತದೆ. ನೀವು ಸರ್ವಾಧಿಕಾರಿ ಹಿಟ್ಲರನ ಸಂಪುಟದ ಗೊಬೆಲ್ಲನ ಹೊಸ ಅವತಾರ!! ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳಬೇಕಾದ ಕರ್ಮ ನಿಮಗೇಕೆ ಬಂತು ಅಮಿತ್‌ಶಾ ಅವರೇ?