ಭಾರತವನ್ನು ಬ್ರಿಟಿಷರು ಒಡೆದು ಆಳುವ ತಂತ್ರದ ಮೂಲಕ 400 ವರ್ಷ ಆಳಿದರು. ಅದೇ ರೀತಿ ಬಿಜೆಪಿಗರು(BJP) ಕೂಡಾ ‘ಒಡೆದಾಳುವ ತಂತ್ರ’ದ ಮೂಲಕ ದೇಶವನ್ನು ಇಂದು ಆಳುತ್ತಿದ್ದಾರೆ. ಹೀಗಾಗಿ ಬಿಜೆಪಿಗೂ, ಬ್ರಿಟಿಷರಿಗೂ(British) ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಜಿ ಸಿಎಂ(Former ChiefMinister) ಕುಮಾರಸ್ವಾಮಿಯವರು( HD Kumarswamy) ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಕೇಂದ್ರ ಸಚಿವ(Central Homeminister) ಅಮಿತ್ ಶಾ(Amitshah) ಇತ್ತೀಚೆಗೆ 37ನೇ ಸಂಸದೀಯ ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂಗ್ಲೀಷಗೆ ಪರ್ಯಾಯವಾಗಿ ದೇಶದಲ್ಲಿ ಹಿಂದಿ ಬಳಕೆಯಾಗಬೇಕು ಎಂದು ಹೇಳಿದ್ದರು. ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಸರಣಿ ಟ್ವೀಟ್‍ಗಳನ್ನು ಮಾಡಿ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. “ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ”
“ಬ್ರಿಟಿಷರು ಪ್ರತಿ ಸಂಸ್ಥಾನಗಳನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ಮುಂದುವರೆಸಿದ್ದು, ಬ್ರಿಟಿಷರಿಗೂ, ಬಿಜೆಪಿಗೂ ಯಾವುದೇ ವ್ಯತ್ಯಾಸವಿಲ್ಲ ಎಂಬುದಕ್ಕೆ ಇದೆ ಜೀವಂತ ಸಾಕ್ಷಿ” “ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಗೃಹ ಸಚಿವ ಅಮಿತ್ ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ”

“ಅಮಿತ್ ಶಾ ಅವರಿಗೆ ಇಂಗ್ಲೀಷ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೇಕೆ ದ್ವೇಷ? ನಮ್ಮ ಮಾತೃಭಾಷೆ ನಮಗೆ ಮುಖ್ಯ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ”