• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

‘ಉರಿಗೌಡ ನಂಜೇಗೌಡ’ ಚಿತ್ರ ನಿರ್ಮಾಣಕ್ಕೆ ಮುಂದಾದ ಮುನಿರತ್ನ; ಇದು ಒಕ್ಕಲಿಗರನ್ನು ವಿಲನ್‌ ಮಾಡುವ ಬಿಜೆಪಿ ಷಡ್ಯಂತ್ರ : ಕುಮಾರಸ್ವಾಮಿ

Pankaja by Pankaja
in ರಾಜಕೀಯ, ರಾಜ್ಯ
‘ಉರಿಗೌಡ ನಂಜೇಗೌಡ’ ಚಿತ್ರ ನಿರ್ಮಾಣಕ್ಕೆ ಮುಂದಾದ ಮುನಿರತ್ನ; ಇದು ಒಕ್ಕಲಿಗರನ್ನು ವಿಲನ್‌ ಮಾಡುವ ಬಿಜೆಪಿ ಷಡ್ಯಂತ್ರ  : ಕುಮಾರಸ್ವಾಮಿ
0
SHARES
34
VIEWS
Share on FacebookShare on Twitter

Karnataka : ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ (Muniratna) ಈ ದುರಹಂಕಾರ. ಬಿಜೆಪಿ (BJP) ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ (kumarswamy tweet) ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ.

kumarswamy tweet

ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ನಾಯಕ ಕುಮಾರಸ್ವಾಮಿ ಅವರು ಸಚಿವ ಮುನಿರತ್ನ ವಿರುದ್ದ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ಮಾಡಿರುವ (Tweet) ಅವರು, ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಶ್ರೀ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್ ಮೂಲಕ ‘ ಉರಿಗೌಡ ನಂಜೇಗೌಡ’ (Urigowda Nanjegowda)

ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (Karnataka Board of Film Commerce) ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ.

ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ.

ವಿಜ್ಞಾನ,ತಂತ್ರಜ್ಞಾನ,ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ (Dr. C. N. Ashwatthanarayan) ಅವರಂತೂ ಈಗ ಉರಿಗೌಡ,

ನಂಜೇಗೌಡ ಎಂದು ವಿಷನಂಜು ಉಗುಳುತ್ತಿದ್ದಾರೆ.

ಇದನ್ನೂ ಓದಿ : https://vijayatimes.com/amit-shah-vs-rahul-gandhi/

ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು. ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನೊಂದು ಟ್ವೀಟ್ನಲ್ಲಿ, ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಟಿ.ರವಿ (CT Ravi) ಕಥೆ ಬರೆಯುತ್ತಾರಾ?

ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು (BJP) ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ.

ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ, ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು?

ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು.

ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ

ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

kumarswamy tweet

ಮತ್ತೊಂದು ಟ್ವೀಟ್ನಲ್ಲಿ, ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು

ಬಿಜೆಪಿ ಸರಕಾರ (State BJP) ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ (Sri Sri Bala Gangadharnath) ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ.

ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ.

ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ (kumarswamy tweet) ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ.

ಇದನ್ನೂ ಓದಿ : https://vijayatimes.com/congress-assembly-election-list/

ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ.

ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ ಎಂದು ಟೀಕಿಸಿದ್ದಾರೆ.

Tags: bjpJDSKarnatakapolitical

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.